ರಾಷ್ಟ್ರೀಯ ನಾಯಕರು ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಆಮ್ ಆದ್ಮಿ ಪಕ್ಷದಿಂದ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.
“ಅಮೆರಿಕ ಕೆನಡಾ ಇತರೆ ಬೇರೆ ದೇಶದಲ್ಲೂ ಕೂಡ ಇಂದು ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಈ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದ್ದು, ಸಾಮಾನ್ಯ ಜನರ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ವಿರೋಧ ಪಕ್ಷದ ನಾಯಕರನ್ನು ಬಂಧಿಸುವ ಮೂಲಕ ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಆಯ್ಕೆಗಳನ್ನು ಹಾಗೂ ಜನರ ಮೇಲೆ ಹೇರಿಕೆಯನ್ನು ಮಾಡಲಾಗುತ್ತಿದೆ” ಎಂದು ಆರೋಪಿಸಿದರು.
“ಕೇಂದ್ರ ಸರ್ಕಾರವು ಇಡೀ ಸಿಬಿಐ, ಐಟಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡು ವಿಪಕ್ಷದ ನಾಯಕರನ್ನು ಬಂಧಿಸುವ ಕೆಲಸ ನಡೆಸುತ್ತಿದೆ. ಹಾಗೆಯೇ ಸಂವಿಧಾನದ ಆಶಯಗಳನ್ನು ಧಿಕ್ಕರಿಸಿ ತಮ್ಮದೇ ವಿರೋಧ ನೀತಿಗಳ ಮೂಲಕ ಸರ್ಕಾರ ನಡೆಸುತ್ತಿದೆ. ದೇಶದ ಯುವಜನರಿಗೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಬಡವರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ತುಳಿಯುತ್ತಿದ್ದಾರೆ. ಉದ್ಯೋಗ ಮಾಡುವ ಜನರಿಗೆ ಸರಿಯಾದ ಅವಕಾಶಗಳಿಲ್ಲದೆ ಹಲವಾರು ಕೈಗಾರಿಕೆಗಳು ನಷ್ಟದ ಹಾದಿ ಹಿಡಿಯುತ್ತಿವೆ. ಬಡತನ ಹೆಚ್ಚಾಗಿದೆ. ಆದರೂ ಕೂಡ ಕೇಂದ್ರ ಸರ್ಕಾರವು ವಿಪಕ್ಷದ ನಾಯಕರನ್ನು ಬಂಧಿಸುವಲ್ಲಿ ಮುಳುಗಿದೆ. ಈ ನಿಟ್ಟಿನಲ್ಲಿ ಕೂಡಲೇ ಅರವಿಂದ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು ಹಾಗೂ ನಿಷ್ಪಕ್ಷವಾಗಿ ದೇಶಾದ್ಯಂತ ಚುನಾವಣೆ ನಡೆಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ವಿನೋದ್ ಅಸೂಟಿ ಪರ ಸಚಿವ ಸಂತೋಷ್ ಲಾಡ್ ಪ್ರಚಾರ ಸಭೆ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ ಎಸ್ ಶಿವಕುಮಾರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಿ ಆರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿಲ್ ಖಾನ್ ಎಸ್ ಕೆ, ಕಾರ್ಯದರ್ಶಿಗಳಾದ ರವೀಂದ್ರ ಕೆ, ಸುರೇಶ್, ಸಿಡ್ಲಪ್ಪ, ಲಕ್ಷ್ಮಣ ನಾಯ್ಕ್, ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ ಧರ್ಮಾ ನಾಯ್ಕ್, ಹರಿಹರ ತಾಲೂಕು ಅಧ್ಯಕ್ಷ ಬಸವರಾಜ್ ಜಿ ಎಚ್, ಮಹಮ್ಮದ್ ಯೂಸಫ್, ಮಲ್ಲೇಶ್ ಇದ್ದರು.
