ದಾವಣಗೆರೆ | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಖಂಡನೆ; ದೇಶಾದ್ಯಂತ ಉಪವಾಸ ಸತ್ಯಾಗ್ರಹ

Date:

ರಾಷ್ಟ್ರೀಯ ನಾಯಕರು ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಆಮ್ ಆದ್ಮಿ ಪಕ್ಷದಿಂದ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.

- Advertisement -

“ಅಮೆರಿಕ ಕೆನಡಾ ಇತರೆ ಬೇರೆ ದೇಶದಲ್ಲೂ ಕೂಡ ಇಂದು ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಈ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದ್ದು, ಸಾಮಾನ್ಯ ಜನರ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ವಿರೋಧ ಪಕ್ಷದ ನಾಯಕರನ್ನು ಬಂಧಿಸುವ ಮೂಲಕ ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಆಯ್ಕೆಗಳನ್ನು ಹಾಗೂ ಜನರ ಮೇಲೆ ಹೇರಿಕೆಯನ್ನು ಮಾಡಲಾಗುತ್ತಿದೆ‌” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕೇಂದ್ರ ಸರ್ಕಾರವು ಇಡೀ ಸಿಬಿಐ, ಐಟಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಂಡು ವಿಪಕ್ಷದ ನಾಯಕರನ್ನು ಬಂಧಿಸುವ ಕೆಲಸ ನಡೆಸುತ್ತಿದೆ. ಹಾಗೆಯೇ ಸಂವಿಧಾನದ ಆಶಯಗಳನ್ನು ಧಿಕ್ಕರಿಸಿ ತಮ್ಮದೇ ವಿರೋಧ ನೀತಿಗಳ ಮೂಲಕ ಸರ್ಕಾರ ನಡೆಸುತ್ತಿದೆ. ದೇಶದ ಯುವಜನರಿಗೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಬಡವರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ತುಳಿಯುತ್ತಿದ್ದಾರೆ. ಉದ್ಯೋಗ ಮಾಡುವ ಜನರಿಗೆ ಸರಿಯಾದ ಅವಕಾಶಗಳಿಲ್ಲದೆ ಹಲವಾರು ಕೈಗಾರಿಕೆಗಳು ನಷ್ಟದ ಹಾದಿ ಹಿಡಿಯುತ್ತಿವೆ. ಬಡತನ ಹೆಚ್ಚಾಗಿದೆ. ಆದರೂ ಕೂಡ ಕೇಂದ್ರ ಸರ್ಕಾರವು ವಿಪಕ್ಷದ ನಾಯಕರನ್ನು ಬಂಧಿಸುವಲ್ಲಿ ಮುಳುಗಿದೆ. ಈ ನಿಟ್ಟಿನಲ್ಲಿ ಕೂಡಲೇ ಅರವಿಂದ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು ಹಾಗೂ ನಿಷ್ಪಕ್ಷವಾಗಿ ದೇಶಾದ್ಯಂತ ಚುನಾವಣೆ ನಡೆಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿನೋದ್ ಅಸೂಟಿ ಪರ ಸಚಿವ ಸಂತೋಷ್ ಲಾಡ್ ಪ್ರಚಾರ ಸಭೆ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ ಎಸ್ ಶಿವಕುಮಾರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಿ ಆರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿಲ್ ಖಾನ್ ಎಸ್ ಕೆ, ಕಾರ್ಯದರ್ಶಿಗಳಾದ ರವೀಂದ್ರ ಕೆ, ಸುರೇಶ್, ಸಿಡ್ಲಪ್ಪ, ಲಕ್ಷ್ಮಣ ನಾಯ್ಕ್, ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ ಧರ್ಮಾ ನಾಯ್ಕ್, ಹರಿಹರ ತಾಲೂಕು ಅಧ್ಯಕ್ಷ ಬಸವರಾಜ್ ಜಿ ಎಚ್, ಮಹಮ್ಮದ್ ಯೂಸಫ್, ಮಲ್ಲೇಶ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...