ದಾವಣಗೆರೆ | ಪೇಮೆಂಟ್ ಸೀಟು ಮಾರಾಟ ನಿಲ್ಲಿಸಿ-ಯುಬಿಡಿಟಿ ಉಳಿಸಿ’ ಘೋಷದಡಿ ಅ.16ರಂದು ಬಂದ್‌ಗೆ ಕರೆ

Date:

ಯುಬಿಡಿಟಿ ಹಳೆಯ ವಿದ್ಯಾರ್ಥಿಗಳ ಸಂಘದ ‘ಯುಬಿಡಿಟಿ ಉಳಿಸಿ ಚಳುವಳಿ’ಗೆ ಸರ್ಕಾರದ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಘ ಮತ್ತು ಎಐಡಿಎಸ್‌ಒ ನೇತೃತ್ವದಲ್ಲಿ ಅಕ್ಟೋಬರ್ 16ರಂದು ದಾವಣಗೆರೆ ನಗರದ ಸ್ವಯಂಪ್ರೇರಿತ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ.

- Advertisement -

ʼಯುಬಿಡಿಟಿ ಉಳಿಸಿ ಪೇಮೆಂಟ್ ಕೋಟಾ ರದ್ದುಪಡಿಸಿ’ ಎಂಬ ಘೋಷಣೆಯಡಿ ದಾವಣಗೆರೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಯುಬಿಡಿಟಿಯಲ್ಲಿ ಪೇಮೆಂಟ್ ಕೋಟಾ ರದ್ದುಪಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಒಂದು ತಿಂಗಳಿಂದ ಚಳವಳಿ ನಡೆಸುತ್ತಿದ್ದರೂ ಕೂಡ ರಾಜ್ಯ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
ದಾವಣಗೆರೆ ಬಂದ್‌ಗೆ ಕರೆ

ಬಡ ವಿದ್ಯಾರ್ಥಿಗಳ ಪಾಲಿಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸೀಟುಗಳು ಆಶಾಕಿರಣವಾಗಿವೆ. ಬಡ ವಿದ್ಯಾರ್ಥಿಗಳಿಗೆ ಈಗಿರುವ ಎಂಜಿನಿಯರಿಂಗ್ ಶುಲ್ಕ ₹41,000ವನ್ನು ಭರಿಸುವುದೇ ಕಷ್ಟಸಾಧ್ಯ. ಬಡವರ ಪಾಲಿಗಿದ್ದ ಎಂಜಿನಿಯರಿಂಗ್ ಶಿಕ್ಷಣವನ್ನು ಕಿತ್ತುಕೊಳ್ಳುತ್ತಿರುವ ಸರ್ಕಾರದ ವ್ಯಾಪಾರಿ ದೋರಣೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಜನರಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗುತ್ತಿದೆ. ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಎಲ್ಲ ವ್ಯಾಪಾರಸ್ಥರ ಸಂಘಟನೆಗಳು, ಆಟೋ, ಬಸ್, ಲಾರಿ ಸೇರಿದಂತೆ ವಿವಿಧ ಸಾರಿಗೆ ಸಂಘಟನೆಗಳು, ಬೋಧಕ ಮತ್ತು ಬೋಧಕೇತರ ಶೈಕ್ಷಣಿಕ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಮಹಿಳಾ ಸಂಘಟನೆಗಳು, ಯುವಜನ ಸಂಘಟನೆಗಳು, ವೈದ್ಯರ ಸಂಘಟನೆ ಸೇರಿದಂತೆ ನಗರದ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ದಾವಣಗೆರೆ ಹೆಮ್ಮೆಯ ಯುಬಿಡಿಟಿ ಉಳಿಸಲು ನಡೆಯುತ್ತಿರುವ ಬಂದ್ ಯಶಸ್ವಿಗೊಳಿಸಲು ತಯಾರಿ ನಡೆಸಿವೆ.

ಈ ಸುದ್ದಿ ಓದಿದ್ದೀರಾ? ಗೌರಿ ಲಂಕೇಶ್ ಹತ್ಯೆ ಪ್ರಕರಣ | ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಸಂಘಪರಿವಾರದಿಂದ ಸನ್ಮಾನ!

ಹಲವು ಸಂಘಟನೆಗಳ ಮುಖಂಡರ ಸಭೆ ಕರೆದು ಬಂದ್ ಯಶಸ್ವಿಗೊಳಿಸಲು ಪೂರ್ವಬಾವಿ ಸಭೆಯನ್ನು ಕೂಡ ನಡೆಸಲಾಗಿದೆ. ನಗರದ ಬಡಾವಣೆಗಳು, ಮುಖ್ಯ ರಸ್ತೆಗಳು, ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವ್ಯಾಪಕ ಪ್ರಚಾರ ಕೂಡ ನಡೆಸಲಾಗುತ್ತಿದ್ದು, ಬಂದ್ ಯಶಸ್ವಿಗೊಳಿಸಲು ಕರೆ ನೀಡಲಾಗಿದೆ. ವಿವಿಧ ಕಡೆ ಭಿತ್ತಿ ಪತ್ರಗಳನ್ನು ಅಂಟಿಸಿ ಬಿರುಸಿನ ಪ್ರಚಾರ ಮಾಡಲಾಯಿತು.

ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಹಾಗೂ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್ ಸೇರಿದಂತೆ ಯುಬಿಡಿಟಿ ಉಳಿಸಿ ಹೋರಾಟ ಸಮಿತಿಯ ಸದಸ್ಯರಾದ ಅಭಿಷೇಕ್, ಆದರ್ಶ್, ರೋಹಿತ್, ಗೌತಮ್, ಶಿವಕುಮಾರ್ ಹಾಗೂ ಎಐಡಿಎಸ್‌ಒನ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...