ದಾವಣಗೆರೆ | ಚಲೋ ಬೆಳಗಾವಿ-ಅಂಬೇಡ್ಕರ್ ಜಾಥಾ; ಸಾಮಾಜಿಕ ನ್ಯಾಯಕ್ಕೆ ಎಸ್‌ಡಿಪಿಐ ಆಗ್ರಹ

Date:

Advertisements

ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿಲ್ಲ. ಕೇವಲ ನೆಪ ಮಾತ್ರದ ಮೌಖಿಕ ಹೇಳಿಕೆ ನೀಡಿ ಕಣ್ಣೊರೆಸುವ ತಂತ್ರ ಮಾಡುತ್ತಿದೆ ಎಂದು ಎಸ್‌ಡಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಅಜರುದ್ದೀನ್ ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ಕಾರದ ಈ ಅಸಹಾಯಕ ಯು-ಟರ್ನ್ ಚಾಳಿಯನ್ನು ಖಂಡಿಸಿ, ಜನಾಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ -2ನ್ನು ಹಮ್ಮಿಕೊಂಡಿದ್ದೇವೆ‌” ಎಂದು ತಿಳಿಸಿದರು.

“ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು. ಮುಸ್ಲಿಮರ 2ಬಿ ಮೀಸಲಾತಿಯನ್ನು ಪುನರ್‌ ಸ್ಥಾಪಿಸಿ ಶೇ.8ಕ್ಕೆ ಏರಿಸಬೇಕು. ಕಾಂತರಾಜ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಿ ಮತ್ತು ಜಾರಿಗೊಳಿಸಬೇಕು. ವಕ್ಫ್‌ ಆಸ್ತಿಗಳ ರಕ್ಷಣೆ, ಒಕ್ಕೂಟ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿ ಜಾರಿಗೆ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಬಾರದೆನ್ನುವ ನಿರ್ಣಯವನ್ನು ಸದನದಲ್ಲಿ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

“ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಅಭಿವೃದ್ಧಿ ಯೋಜನೆ ಬಿಟ್ಟು ಬೇರೆ ಯಾವುದೇ ಯೋಜನೆಗಳಿಗೆ ಬಳಸಬಾರದು. 2025-26ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹10,000 ಕೋಟಿ ಮೀಸಲಿಡಬೇಕು. ಖಾಸಗಿ ವಲಯದಲ್ಲಿ ಮೀಸಲಾತಿ ಕಲ್ಪಿಸುವುದು ಮುಂತಾದ ಬೇಡಿಕೆಗಳೊಂದಿಗೆ, ದಲಿತ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಈ ಸಮುದಾಯಗಳ ಸಾಂವಿಧಾನಿಕ ಹಕ್ಕು ರಕ್ಷಣೆ ಕಾಯಿದೆ ಮತ್ತು ಯೋಜನೆಗಳಿಗಾಗಿ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ “ಚಲೋ ಬೆಳಗಾವಿ, ಅಂಬೇಡ್ಕರ್ ಜಾಥಾ-2ನ್ನು ಡಿಸೆಂಬರ್‌ 10ರಿಂದ ಆರಂಭವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.17, 18ರಂದು ಸಿಐಟಿಯು ಪ್ರತಿಭಟನೆ

“ಸದರಿ ಜಾಥವು ಡಿಸೆಂಬರ್‌ 10ರಂದು ಉಡುಪಿಯಿಂದ ಪ್ರಾರಂಭವಾಗಿ ವಿವಿಧ ಜಿಲ್ಲೆಗಳ ಮೂಲಕ 13ರ ಬೆಳಿಗ್ಗೆ 10ಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ ನಗರಕ್ಕೆ ತಲುಪಿ ಪ್ರೊ. ಬಿ ಕೃಷ್ಣಪ್ಪನವರ ಸಮಾಧಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಜಾಥಾವು ಫಕೀರಸ್ವಾಮಿ ಮಠದವರೆಗೆ ತಲುಪಿ ತದನಂತರ ಕಾಲ್ನಡಿಗೆಯೊಂದಿಗೆ ಶಿವಮೊಗ್ಗ ವೃತ್ತ, ಹರಪನಹಳ್ಳಿ ವೃತ್ತದ ಮೂಲಕ ಹರಿಹರ ತಾಲೂಕು ಕಚೇರಿಗೆ ಬಂದು ಸಭಾ ಕಾರ್ಯಕ್ರಮ ನಡೆಸಿ ರಾಣೆಬೆನ್ನೂರಿನ ಕಡೆಗೆ ಮುಂದುವರೆಯಲಿದೆ” ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕೋಶಾಧಿಕಾರಿ ಎ ಆರ್ ತಾಹೀರ್, ಜಿಲ್ಲಾಧ್ಯಕ್ಷ ಯಾಹಿಯ, ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಝ್ ಅಹಮದ್, ಹರಿಹರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಮಿವುಲ್ಲ ಮುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X