ದಾವಣಗೆರೆ | ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ, ಬಹುಮತದಿಂದ ಗೆಲ್ಲಿಸಿ: ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್

Date:

ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.

- Advertisement -

ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿ, “ನಿಮ್ಮೆಲ್ಲರ ಆಶೀರ್ವಾದ ಕೇಳಲು ಮನೆ ಬಾಗಿಲಿಗೆ ಬಂದಿದ್ದೇನೆ. ಗ್ರಾಮ ಪಂಚಾಯಿತಿ ಸದಸ್ಯರು, ಅಧ್ಯಕ್ಷರು, ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ನನಗೆ ಆಶೀರ್ವದಿಸಲು ಕೆಲಸ ಮಾಡಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಚುನಾವಣೆಗೆ ಇನ್ನು ಕೇವಲ ಒಂದೇ ತಿಂಗಳು ಬಾಕಿ ಇದೆ. ಮುಂದಿನ ತಿಂಗಳು ಮೇ 7ರಂದು ಮತ ಚಲಾಯಿಸುವ ದಿನ. ಹಾಗಾಗಿ ಎಲ್ಲರೂ ಕೂಡ ಇನ್ನು 30 ದಿನಗಳ ಕಾಲ ಎಲ್ಲರ ಮನೆ ಬಾಗಿಲಿಗೆ ಹೋಗಿ ಕಾಂಗ್ರೆಸ್‌ ಗ್ಯಾರಂಟಿಗಳನ್ನು ತಿಳಿಸಿ ಮತ ಕೇಳಿ. ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, 200 ಯೂನಿಟ್ ಕರೆಂಟ್ ಉಚಿತವಾಗಿ ನೀಡಿದ್ದು, ವಿದ್ಯಾನಿಧಿ ಕೂಡ ಜಾರಿಗೊಳಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಜನರ ನೆರವಿಗೆ ಧಾವಿಸಿರುವ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ, ನಡೆಯುತ್ತಿದೆ” ಎಂದು ಹೇಳಿದರು.

“ಹದಿನೈದು ದಿನಗಳ ಹಿಂದೆ ಜಗಳೂರು ತಾಲೂಕಿನ ಚೌಡಮ್ಮ ಜಾತ್ರೆಗೆ ಬಂದಿದ್ದೆ. ದೇವಿಯ ಆಶೀರ್ವಾದ ಈಗಾಗಲೇ ಪಡೆದುಕೊಂಡಿದ್ದೇನೆ. ಜನರ ಆಶೀರ್ವಾದ ಬರಬೇಕಿದೆ. ಒಳ್ಳೆಯ ಬಹುಮತದಿಂದ ನೀವೆಲ್ಲರೂ ಗೆಲ್ಲಿಸುತ್ತೀರೆಂಬ ವಿಶ್ವಾಸ ಇದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಖಂಡನೆ; ದೇಶಾದ್ಯಂತ ಉಪವಾಸ ಸತ್ಯಾಗ್ರಹ

ಜಗಳೂರು ಶಾಸಕ ಬಿ ದೇವೇಂದ್ರಪ್ಪ, ಅಸಗೋಡು ಜಯಸಿಂಹ, ಕೆ ಪಿ ಪಾಲಯ್ಯ, ಸಂಶೀರ ಅಹ್ಮದ್ ಸೇರಿದಂತೆ ಸ್ಥಳೀಯ ನಾಯಕರು, ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...