ದಾವಣಗೆರೆ | ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸಿ ಸಿಪಿಐ ಪ್ರತಿಭಟನೆ

Date:

ರಾಜ್ಯಕ್ಕೆ ಜಿಎಸ್‌ಟಿ ತಾರತಮ್ಯ, ಅಭಿವೃದ್ಧಿಗೆ ಅನುದಾನದಲ್ಲಿ ವಿಳಂಬ ಮತ್ತು ಅನ್ಯಾಯ ವಿರೋಧಿಸಿ, ಸಿಪಿಐನಿಂದ ಕೇಂದ್ರ ಸರ್ಕಾರದ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.

ಅನುದಾನ, ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಸಂಸತ್ ಸದಸ್ಯರ ಜವಾಬ್ದಾರಿಯನ್ನು ಪ್ರಶ್ನಿಸಿ, ಜಿಎಸ್‌ಟಿ ತೆರಿಗೆ ಹಣ ಪರಿಹಾರ ಸೇರಿದಂತೆ ಹಲವು ಅನುದಾನಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ ಸಿಪಿಐ ದಾವಣಗೆರೆ ಜಿಲ್ಲಾ ಮಂಡಳಿ ಕಾರ್ಯದರ್ಶಿ ಆವರಗೆರೆ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆ ಲೋಕಸಭಾ ಸದಸ್ಯ ಜಿ ಎಂ ಸಿದ್ದೇಶ್ವರ ಅವರ ಸಂಸತ್ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಂಸದರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿರುವ ಭಾರತ, ಸಂವಿಧಾನ ಆಶಯದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ದೇಶದ ಜನತೆಯ ಪರವಾಗಿ ಆಡಳಿತವನ್ನು ನಡೆಸಬೇಕಾಗಿದೆ. ದೇಶ ಮುನ್ನಡೆಸಲು ಹಾಗೂ ರಾಜ್ಯಗಳನ್ನು ಸರ್ವ ವ್ಯಾಪಿಯಾಗಿ ಸಫಲಗೊಳಿಸಲು ಭಾರತದ ಒಕ್ಕೂಟದ ವ್ಯವಸ್ಥೆಯೊಳಗಿರುವ ರಾಜ್ಯಗಳ ಮೂಲಕ ಸಂಗ್ರಹವಾಗುವ ವಸ್ತುಗಳು, ಆಸ್ತಿಗಳು, ವಾಹನಗಳು ಇತ್ಯಾದಿ ಮೇಲಿನ ತೆರಿಗೆ ಸೆಸ್ ರೂಪದಲ್ಲಿ ಸಂಗ್ರಹಿಸುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗವನ್ನು ರಚಿಸಲಾಗಿದ್ದರೂ, ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ವಿಷಯದಲ್ಲಿ ಅನ್ಯಾಯ ಮಾಡಿದೆ” ಎಂದು ಆರೋಪಿಸಿದರು.

ಸಹಕಾರ್ಯದರ್ಶಿ ಎಚ್ ಜಿ ಉಮೇಶ್ ಆವರಗೆರೆ ಮಾತನಾಡಿ, “ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲ್ಲಬೇಕಾದ ತೆರಿಗೆ ಹಣದಲ್ಲಿ ತಾರತಮ್ಯ ಮಾಡುವುದನ್ನು ಕೈ ಬಿಟ್ಟು ರಾಜ್ಯಗಳ ಅಭಿವೃದ್ಧಿಗೆ ಸಹಕರಿಸಬೇಕು. ಇದನ್ನು ಸರಿಪಡಿಸಲು ಸಂಸತ್ ಸದಸ್ಯರು ಲೋಕಸಭೆಯಲ್ಲಿ ಒತ್ತಾಯಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಜೆಟ್‌ ಅಧಿವೇಶನ; ರೈತ ಮುಖಂಡರೊಂದಿಗೆ ಪೂರ್ವಭಾವಿ ಸಭೆ

ಸಿಪಿಐ ಪಕ್ಷದ ಆವರಗೆರೆ ವಾಸು, ಜಿಲ್ಲಾ ಖಜಾಂಚಿ ಆನಂದರಾಜ್, ಮುಖಂಡರುಗಳಾದ ಷಣ್ಮುಖ ಸ್ವಾಮಿ, ಸಿ ರಮೇಶ್, ಎಸ್ ಎಂ ಮೋಹಿಸ್ಸೀನ್, ಶೇಖರ ನಾಯಕ್, ಸಾವಿತ್ರಮ್ಮ, ಕೃಷ್ಣಪ್ಪ, ನಿಟ್ಟುವಳ್ಳಿ ಬಸವರಾಜ್, ವಿ ಲಕ್ಷ್ಮಣ, ನಾಗಮ್ಮ, ಭಾಗ್ಯ, ಸುರೇಶ್, ಎಚ್ ಪಿ ಉಮಾಪತಿ, ತಿಪ್ಪೇಶ್ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ದಾವಣಗೆರೆ | ಹೊಸಬರಿಗೆ ಅವಕಾಶ ಕೇಳಿದ್ದರಲ್ಲಿ ತಪ್ಪೇನಿದೆ: ಮಾಜಿ ಸಚಿವ ರೇಣುಕಾಚಾರ್ಯ

ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಾಗ ಹೊಸಮುಖಗಳಿಗೆ...