ದಾವಣಗೆರೆ | ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟ; ಹಸು ಸಾವು

Date:

ವಿಶೇಷ ತಳಿಯ ಕೊಂಡುಕುರಿ ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟಿಸಿದ ಪರಿಣಾಮ ಹಸುವೊಂದು ತೀವ್ರವಾಗಿ ಗಾಯಗೊಂಡು ಅಸುನೀಗಿದ ಘಟನೆ ನಡೆದಿದೆ.

- Advertisement -

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೊಂಡುಕುರಿ ಅಭಯಾರಣ್ಯದಲ್ಲಿ ಕಾಡುಪ್ರಾಣಿಗಳ ಬೇಟೆಗಾರರು ಅಥವಾ ವನ್ಯಜೀವಿ ಕಳ್ಳಸಾಗಣೆದಾರರು ಇರಿಸಿದ ಕಚ್ಚಾಬಾಂಬ್ ಸಿಡಿದು ಮುಗ್ಧ ಹಸುವೊಂದು ದುರ್ಮರಣಕ್ಕೀಡಾಗಿದೆ. ಜೊತೆಯಲ್ಲಿದ್ದ ರೈತ ರಂಗನಾಥ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ಥಳೀಯರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಂದಿ, ಕೊಂಡುಕುರಿ ಅಥವಾ ಇತರ ಕಾಡುಪ್ರಾಣಿಗಳ ಬೇಟೆಗಾಗಿ ವನ್ಯಜೀವಿಗಳ ಬೇಟೆಗಾರರು ಅಥವಾ ಕಳ್ಳಸಾಗಣೆದಾರರು ಕಚ್ಚಾಬಾಂಬ್ ಇರಿಸಿರಬಹುದು. ಮುಗ್ಧ ಹಸು ಅದನ್ನು ತಿನ್ನಲು ಹೋಗಿ ಸ್ಪೋಟಗೊಂಡು ದವಡೆಯ ಭಾಗದಲ್ಲಿ, ಕುತ್ತಿಗೆಯ ಭಾಗದಲ್ಲಿ ತೀವ್ರ ಗಾಯಗಳಾಗಿ, ಮಾಂಸ ಖಂಡಗಳು ಕಿತ್ತುಬಂದಿದ್ದವು. ಇದರಿಂದ ಅಮಾಯಕ ಪ್ರಾಣಿಯೊಂದು ಬಲಿಯಾಗಿದೆ. ಈ ಕೃತ್ಯ ಮಾಡಿದ ದುರುಳರನ್ನು ಪತ್ತೆ ಹಚ್ಚಿ ಅವರನ್ನು ತೀವ್ರ ಶಿಕ್ಷೆಗೆ ಒಳಪಡಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೀಸಲು ಅರಣ್ಯ

“ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರಂಗಯ್ಯನದುರ್ಗ ಅರಣ್ಯ ಪ್ರದೇಶ ವಿಶೇಷ ಜಿಂಕೆ ಪ್ರಭೇದದ ವಿರಳ ಕೊಂಡುಕುರಿ ಪ್ರಾಣಿಗಳು ಇರುವ ಪ್ರದೇಶವಾಗಿದೆ. ಸಂರಕ್ಷಿತ ವನ್ಯಜೀವಿ ಅರಣ್ಯ ವಲಯವಾಗಿದೆ. ಇದು ದೇಶದಲ್ಲಿ ಬೇರೆಡೆ ಇಲ್ಲದ ವಿಶೇಷತಳಿಯಾಗಿದೆ. ಸಾಮಾನ್ಯವಾಗಿ ಜಿಂಕೆಗಳಲ್ಲಿ ಎರಡು ಕೊಂಬುಗಳಿದ್ದರೆ, ಜಿಂಕೆ-ಕೃಷ್ಣಮೃಗದ ರೀತಿಯಲ್ಲಿ ಕಂಡುಬರುವ ಕೊಂಡುಕುರಿಯಲ್ಲಿ ಎರಡು ಚಿಕ್ಕ ಕೊಂಬುಗಳು ಸೇರಿ ನಾಲ್ಕು ಕೊಂಬುಗಳಿರುತ್ತವೆ. ಇದರ ಸಂರಕ್ಷಣೆಗಾಗಿ ಅರಣ್ಯವನ್ನು ಕಾಯ್ದಿರಿಸಲಾಗಿದೆ. ಇಂತಹ ಸ್ಥಳದಲ್ಲಿ ಕಚ್ಚಾಬಾಂಬ್ ಸ್ಫೋಟಗೊಂಡಿರುವುದು ವಿಶೇಷತಳಿ ಅಭಿವೃದ್ಧಿಗೆ ಮತ್ತು ವನ್ಯಜೀವಿ ಸಂರಕ್ಷಣೆಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳ್ಳಸಾಗಾಣಿಕೆ ಬೇಟೆಗಾರರ ತಂಡಗಳು ಸಕ್ರಿಯವಾಗಿವೆ ಎನ್ನುವ ಸಂದೇಶ ಅರಣ್ಯ ಇಲಾಖೆಗೆ ರವಾನೆಯಾಗಿದ್ದು, ಈ ಕುರಿತು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿದೆ” ಎಂದರು.

ಸ್ಥಳೀಯ ಪತ್ರಕರ್ತ ಅಜ್ಜಯ್ಯ ಮದಕರಿ ಮಾಹಿತಿ ನೀಡಿ, “ಸಂರಕ್ಷಿತ ಕೊಂಡುಕುರಿ ಅರಣ್ಯ ಪ್ರದೇಶದಲ್ಲಿ ಇದು ವಿಶೇಷ ತಳಿಯಾಗಿದ್ದು, ಇಲ್ಲಿ ಕಚ್ಚಾಬಾಂಬ್ ಸ್ಫೋಟಿಸಿ ಹಸು ಮರಣ ಹೊಂದಿರುವುದು ಆಘಾತ ತರಿಸಿದೆ. ಇದರ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ತಪಾಸಣೆಯನ್ನು ನಡೆಸಿದ್ದು, ಇತರ ಯಾವುದೇ ಬಾಂಬ್‌ಗಳು ಸಿಕ್ಕಿರುವ ವರದಿಯಾಗಿಲ್ಲ. ಕೂಡಲೇ ಅರಣ್ಯ ಇಲಾಖೆ ಕಚ್ಚಾಬಾಂಬ್ ಇರಿಸಿದ ದುಷ್ಟರನ್ನು ಬಂಧಿಸಿ, ಅರಣ್ಯ ರಕ್ಷಣೆಗೆ, ವಿಶೇಷ ತಳಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ : ಜಿಲ್ಲಾಧಿಕಾರಿ

ಈ ಬಗ್ಗೆ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಮಾಹಿತಿ ನೀಡಿ “ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಜನರಿಗೆ ಸಾಕಷ್ಟು ಜಾಗೃತಿ ಮೂಡಿಸಿದರೂ ಕೂಡಾ ಇಂತಹ ಘಟನೆ ನಡೆದಿರುವುದು ತೀವ್ರ ಬೇಸರದ ಸಂಗತಿ. ವಲಯ ಅರಣ್ಯಾಧಿಕಾರಿಯವರಿಗೆ ಕಾಡಂಚಿನ ಗ್ರಾಮಗಳ ಜನರಿಗಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಸೂಚನೆ ನೀಡಿದ್ದು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಈ ದಿನ.ಕಾಮ್‌ ಕೊಂಡುಕುರಿ, ಅರಣ್ಯ ವನ್ಯಜೀವಿ ಪರಿಪಾಲಕ ಟಿ ಜಿ ರವಿಕುಮಾರ್ ಅವರನ್ನು ಸಂಪರ್ಕಿಸಿದಾಗ ಪರ್ತಿಕ್ರಿಯಿಸಿದ್ದು, “ಕಚ್ಚಾಬಾಂಬ್‌ನಿಂದ ಹಸು ತೀರಿಹೋಗಿರುವುದು ನಿಜವಾಗಿಯೂ ತೀವ್ರ ನೋವುಂಟು ಮಾಡಿದೆ. ಕೊಂಡುಕುರಿ ಸೇರಿದಂತೆ ಅಳಿವಿನಂಚಿನಲ್ಲಿರುವ ಅನೇಕ ಪ್ರಭೇದಗಳು ಕೊಂಡುಕುರಿ ಅರಣ್ಯ ಪ್ರದೇಶದಲ್ಲಿದ್ದು, ಅವುಗಳ ಸಂರಕ್ಷಣೆಯಾಗಬೇಕಿದೆ. ಅಂತಾರಾಷ್ಟ್ರೀಯ ವನ್ಯಜೀವಿಗಳ ಕಳ್ಳಸಾಗಣೆದಾರರ ಜಾಲ ಹೆಚ್ಚಾಗಿದ್ದು, ಇದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕಿದೆ” ಎಂದರು.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...