ದಾವಣಗೆರೆ |‌ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ದಸಂಸ ಆಗ್ರಹ

Date:

ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

ದಾವಣಗೆರೆ ನಗರಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿವಿಧ ಕಾರ್ಯಕ್ರಮಗಳ ನಿಮಿತ್ತ ಆಗಮಿಸಿದ್ದ ವೇಳೆ ಕಾರ್ಯಕರ್ತರು ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದಸಂಸ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ಮಾತನಾಡಿ, “ಸುಮಾರು 15 ವರ್ಷಗಳ ಹಿಂದೆ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ 2ನೇ ವರ್ಷದಲ್ಲಿ ಸಾಧನಾ ಸಮಾವೇಶ ನಡೆದಿತ್ತು. ಆ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ದಲಿತ ಪರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ ಪರಿಣಾಮವಾಗಿ ಅವರು ನಗರದಲ್ಲಿ ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಘೋಷಿಸಿ ತಕ್ಷಣವೇ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಅಂದಿನಿಂದ ಈವರೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಭವನ ನಿರ್ಮಾಣಕ್ಕೆ ಸೂಕ್ತ ಸ್ಥಳ ನಿಗದಿ ಆಗದೇ ಕಟ್ಟಡ ನಿರ್ಮಾಣ ಕಾಮಗಾರಿ ನೆನೆಗುದಿಗೆ ಬಿದ್ದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಹೆಚ್ ಆಂಜನೇಯ ಅವರು ಸಮಾಜ ಕಲ್ಯಾಣ ಮಂತ್ರಿಯಾಗಿದ್ದು, ಎಸ್‌ ಎಸ್ ಮಲ್ಲಿಕಾರ್ಜುನ್‌ ಅವರು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗಲೂ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಭವನ ನಿರ್ಮಾಣಕ್ಕೆ ಪ್ರಯತ್ನಗಳು ನಡೆದಿದ್ದವು. ಸಚಿವರಾಗಿದ್ದ ಎಸ್‌ ಎಸ್‌ ಮಲ್ಲಿಕಾರ್ಜುನ್‌’ ಅವರು ಸ್ವತಃ ತಾವೇ ಮುತುವರ್ಜಿ ವಹಿಸಿ ಭವನದ ನೀಲನಕ್ಷೆ ಹಾಗೂ ಅಂದಾಜು ವೆಚ್ಚ ತಯಾರು ಮಾಡಿಸಿ ಸೂಕ್ತ ಸ್ಥಳದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಿ ಕೊಡುವುದಾಗಿ ಘೋಷಣೆ ಮಾಡಿದ್ದರು. ಆಗಲೂ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಕೂಡ ಮಹಾನಗರ ಪಾಲಿಕೆ ಹಿಂಭಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿಸುವುದಾಗಿ ಭರವಸೆ ನೀಡಿದ್ದರು. ಆದರೂ ಕಾಣದ ಕೈಗಳ ಕೈವಾಡದಿಂದ ಆ ಭರವಸೆ ಹುಸಿಯಾಗಿದೆ” ಎಂದರು.

“ಪ್ರಸ್ತುತ ಸರ್ಕಾರದ ಸಮಾಜ ಕಲ್ಯಾಣ ಸಚಿವ ಡಾ ಎಚ್ ಸಿ ಮಹದೇವಪ್ಪನವರು ಇತ್ತೇಚೆಗೆ ದಾವಣಗೆರೆಗೆ ಭೇಟಿ ನೀಡಿದಾಗ ಭವನದ ವಿಷಯ ಪುನಃ ಮುನ್ನೆಲೆಗೆ ಬಂದು, ಈ ಬಾರಿ ಶತಾಯಗತಾಯ ಭವನ ನಿರ್ಮಾಣ ಮಾಡಿಸಲೇಬೇಕೆಂಬ ಹಠಕ್ಕೆ ಬಿದ್ದಿರುವ ದಲಿತ ಸಮುದಾಯ, ಹಲವು ದಲಿತ ಸಂಘಟನೆಗಳು, ರೈತ-ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ಪ್ರಗತಿಪರ ಚಿಂತಕರು, ಮಹಿಳಾ ಹೋರಾಟಗಾರ್ತಿಯರು, ವಕೀಲರು, ವಿವಿಧ ಶೋಷಿತ ಸಮಾಜಗಳ ಮುಖಂಡರು ಒಗ್ಗೂಡಿ “ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಸಂಚಾಲನ ಸಮಿತಿ”ಯನ್ನು ರಚಿಸಿಕೊಂಡು ಹೋರಾಟಕ್ಕೆ ಇಳಿದಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮದ್ಯದಂಗಡಿ ತೆರೆಯಲು ಪರವಾನಗಿ ನೀಡದಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಆಗ್ರಹ

“ದಾವಣಗೆರೆ ನಗರದ ಮಧ್ಯ ಭಾಗದ ಸೂಕ್ತವಾದ ಯಾವುದಾದರೊಂದು ಸ್ಥಳದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನ ನಿರ್ಮಿಸಬೇಕು. ಇಲ್ಲವೇ ದಾವಣಗೆರೆ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬಾಡಾ ಕ್ರಾಸ್‌ನಿಂದ ಶಾಮನೂರುವರೆಗಿನ ಬೈಪಾಸ್‌ ರಸ್ತೆಯ ಅಕ್ಕಪಕ್ಕ ಕನಿಷ್ಠ 2 ಎಕರೆ ಜಮೀನನ್ನು ಖರೀದಿಸಿ ಅಂಬೇಡ್ಕರ್ ಭವನ ನಿರ್ಮಿಸಬೇಕು” ಎಂದು ಜಿಲ್ಲೆಯ ದಲಿತರು, ಪ್ರಗತಿಪರರು ಒಕ್ಕೊರಲ ಬೇಡಿಕೆ ಸಲ್ಲಿಸಿದರು.

ಈ ವೇಳೆ ಐರಣಿ ಚಂದ್ರು, ರಾಮಚಂದ್ರಪ್ಪ, ಹೆಗ್ಗೆರೆ ರಂಗಪ್ಪ, ಪ್ರದೀಪ್, ಲಿಂಗರಾಜು, ತಿಮ್ಮಣ್ಣ, ವಿಜಯಲಕ್ಷ್ಮಿ, ವೀರೇಶ್, ಮಾಂತೇಶ್, ಜಯಪ್ಪ, ಬಸವರಾಜ್, ಚೌಡೇಶ್, ಹರಿಹರದ ಮಲ್ಲೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...