ದಾವಣಗೆರೆ | ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಜತೆಗೆ ಮೊಟ್ಟೆ ನೀಡಲು ನಿರ್ಧಾರ: ಸಚಿವ ರಹೀಂ ಖಾನ್

Date:

2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಡವರಿಗಾಗಿ ಆರಂಭಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ​ ಬಡವರ ಹಸಿವು ನೀಗಿಸುವ ತಾಣವಾಗಿದೆ. ಇಲ್ಲಿ ತನಕ ಕ್ಯಾಂಟಿನ್​​ ಮೆನ್ಯೂನಲ್ಲಿ ಅನ್ನ ಸಾಂಬಾರ್​​, ಚಪಾತಿ, ತಿಂಡಿ ಕೇವಲ 10 ರೂಪಾಯಿಗೆ ಕೊಡಲಾಗುತ್ತಿತ್ತು. ಇದೀಗ ಸರ್ಕಾರ ಊಟದ ಮೆನ್ಯೂನಲ್ಲಿ ಮೊಟ್ಟೆ ಕೊಡಲು ನಿರ್ಧರಿಸಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್​ ಸುಳಿವು ನೀಡಿದ್ದಾರೆ.

- Advertisement -

ಇಂದಿರಾ ಕ್ಯಾಂಟೀನ್‌ಗಳಲ್ಲಿ ಪರಿಶೀಲನೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೂಲಿ ಕಾರ್ಮಿಕರು, ಬಡಜನರಿಗೆ ಪ್ರೋಟಿನ್​​​​ ನೀಡುವ ಉದ್ದೇಶದಿಂದ ನಮ್ಮ ಮೊಟ್ಟೆ ಕೊಡಬೇಕೆಂದು ನಿರ್ಧರಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಇಂದಿರಾ ಕ್ಯಾಂಟೀನ್ ಯೋಜನೆ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಅವರು 2013ರಲ್ಲಿ ಸಿಎಂ ಆಗಿದ್ದಾಗ 196 ಕ್ಯಾಂಟೀನ್‌ಗಳನ್ನು ತೆರೆದರು. ನಮ್ಮ‌ ಸರ್ಕಾರ ಇರುವ ತನಕ ಈ ಇಂದಿರಾ ಕ್ಯಾಂಟೀನ್​ಗಳು ಚೆನ್ನಾಗಿ ನಡೆದವು. ತದನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸಮಸ್ಯೆಗೆ ಸಿಲುಕಿದವು. ಪುನಃ ಸಿಎಂ ಆಗಿ ಸಿದ್ದರಾಮಯ್ಯ ಅವರು ನೇಮಕವಾದ ಬಳಿಕ, ಮುಚ್ಚಿದ್ದ ಕ್ಯಾಂಟೀನ್​ಗಳನ್ನು ತೆರೆಸಿದರು. ಇದೀಗ ಮತ್ತೆ 186 ನೂತನ ಇಂದಿರಾ ಕ್ಯಾಂಟೀನ್​ಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ 100ಕ್ಕೂ ಅಧಿಕ ಕ್ಯಾಂಟೀನ್‌ ಪ್ರಾರಂಭವಾಗಿವೆ. ಉಳಿದ ಕ್ಯಾಂಟೀನ್‌ಗಳು ಶೀಘ್ರದಲ್ಲೇ ಕಾರ್ಯಾರಂಭ ಆಗಲಿವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ” ಎಂದು ರಹೀಂ ಖಾನ್ ಹೇಳಿದ್ದಾರೆ. ‌

ಈ ಸುದ್ದಿ ಓದಿದ್ದೀರಾ? ಮಂಡ್ಯ | ಎಲ್ಲ ವಂಚಿತ ಶ್ರಮಿಕ ನಿವಾಸಿಗಳಿಗೂ ಹಕ್ಕುಪತ್ರ ವಿತರಿಸಲು ತೀರ್ಮಾನ

“ಕೇಂದ್ರ ಸರ್ಕಾರ ವಿವಾದಿತ ಬಿಲ್​(ಮಸೂದೆ)ಗಳನ್ನು ತರುವ ಬದಲು ಜನಸಾಮಾನ್ಯರಿಗೆ ಉಪಯೋಗವಾಗುವಂತಹ ಬಿಲ್​ ತರಲಿ.‌ ಅಲ್ಲದೆ ಸಿಗರೇಟ್​, ಕುಡಿತ, ಗುಟ್ಕಾ ಚಟದಿಂದ ಜನತೆ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿವಾಹಿತ ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಿಗರೇಟ್, ಕುಡಿತ, ಗುಟ್ಕಾ ವಿರುದ್ಧ ಬಿಲ್ ತಂದು ಜನರಿಗೆ ಆಸರೆ ಆಗಲಿ” ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...