ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯ

Date:

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

“ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಖಾಸಗಿ ಜಾಗದಲ್ಲಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳಿಂದ ಅಭಿಮಾನದಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿತ್ತು. ಅನ್ಯ ಸಮುದಾಯದವರು ವಿರೋಧಿಸಿದರೆಂಬ ಒಂದೇ ಕಾರಣದಿಂದ ಸ್ವಾತಂತ್ರ್ಯ ಸೇನಾನಿ, ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಸಂಗೊಳ್ಳಿ ರಾಯಣ್ಣನ ಪ್ರತಿಮೆ ತೆರವುಗೊಳಿಸುವ ಮುನ್ನ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಅಭಿಪ್ರಾಯ ಹಾಗೂ ಠರಾವನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಬಹುದಾಗಿತ್ತು. ಸರ್ಕಾರಿ ಜಾಗಗಳಲ್ಲಿ ಅನುಮತಿ ಪಡೆಯದೇ ಹಲವು ಹೆಸರಿನ ವೃತ್ತಗಳ ನಾಮಫಲಕಗಳು, ಮಹಾದ್ವಾರಗಳನ್ನು ನಿರ್ಮಿಸಿದ್ದು, ಗ್ರಾಮದ ಸೌಹಾರ್ದತೆಗೆ ಸಾಕ್ಷಿಯಾಗಿದ್ದರೂ ಸಹ, ಟ್ರಸ್ಟ್‌ನವರ ಖಾಸಗಿ ಸ್ಥಳದಲ್ಲಿ ಸ್ಥಾಪಿಸಿದ್ದ ಪ್ರತಿಮೆಯನ್ನು ತೆರವು ಗೊಳಿಸಿರುವುದು ಸಂಗೊಳ್ಳಿ ರಾಯಣ್ಣನವರಿಗೆ ಮಾಡಿದ ಅಪಮಾನವಾಗಿದೆ” ಎಂದು ಅಸಮಾಧಾನಪಟ್ಟರು.

ಸಂಗೊಳ್ಳಿ ರಾಯಣ್ಣ 1 1

“ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿಗೆ ಬ್ರಿಟೀಷರಿಗೆ ಸೋಲಿನ ರುಚಿಯನ್ನು ತೋರಿಸಿದ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟ ಹುತಾತ್ಮ, ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರು ಹುಟ್ಟಿದ್ದು ಆಗಸ್ಟ್ 15, ಅಂದು ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನವಾಗಿರುತ್ತದೆ.‌ ದೇಶಭಕ್ತ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರನ್ನು ಬ್ರಿಟಿಷರು ನೇಣಿಗೆ ಹಾಕಿದ ದಿನ ಜನವರಿ 26, ಅಂದು ಭಾರತ ಗಣರಾಜ್ಯವಾದ ದಿನವಾಗಿರುತ್ತದೆ. ಇಂತಹ ವೀರಪುರುಷ ಜಗತ್ತಿನಲ್ಲೇ ಅಪರೂಪ ಮತ್ತು ಭಾರತ ದೇಶದ ಹೆಮ್ಮೆಯೂ ಹೌದು. ಸಂಗೊಳ್ಳಿ ರಾಯಣ್ಣ ಯುವಕರಿಗೆ ಆದರ್ಶ, ಇಂತಹ ವೀರನ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚು ಪ್ರಚಾರ ಮಾಡಬೇಕಾಗಿತ್ತು. ಯುವಕರಲ್ಲಿ ದೇಶಪ್ರೇಮದ ಬಗ್ಗೆ ಜಾಗೃತಿ ಮೂಡಿಸಬೇಕಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಸ್ವಾತಂತ್ರ್ಯ ಉದ್ಯಾನವನಗಳನ್ನು, ಮೂರ್ತಿಗಳನ್ನು ಸ್ಥಾಪಿಸಬೇಕಿತ್ತು. ಆದರೆ ಸರ್ಕಾರಗಳು ಮಾಡಬೇಕಿದ್ದ ಕಾರ್ಯಗಳನ್ನು ಸಂಗೊಳ್ಳಿ ರಾಯಣ್ಣನವರ ಅಭಿಮಾನಿಗಳು ಮಾಡುತ್ತಿದ್ದಾರೆ. ಹೀಗಾಗಿ ರಾಯಣ್ಣನ ಪ್ರತಿಮೆಯನ್ನು ಮರುಸ್ಥಾಪನೆ ಮಾಡಬೇಕು” ಎಂದು ಅಭಿಮಾನಿಗಳು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗೃಹ ಕಾರ್ಮಿಕರ ಸಾಮಾಜಿಕ ಸುರಕ್ಷತೆ, ಭದ್ರತೆಗೆ ಆಗ್ರಹ

“ಭಾನುವಳ್ಳಿ ಗ್ರಾಮದಲ್ಲಿನ ಎಲ್ಲ ಸಮಾಜದವರ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಭಾನವಳ್ಳಿ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ದಾವಣಗೆರೆಯ ಜಿಲ್ಲಾಧಿಕಾರಿಯವರು ಗ್ರಾಮ ಪಂಚಾಯಿತಿಯ ಠರಾವಿಗೆ ಮಾನ್ಯತೆ ನೀಡಿ ಲೋಪದೋಷ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕುರುಬ ಜಿಲ್ಲಾ ಸಮಿತಿ, ಹರಿಹರ ತಾಲೂಕು ಸಮಿತಿ ಸಮಾಜದ ಎಲ್ಲ ಮುಖಂಡರು, ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...