ದಾವಣಗೆರೆ | ಜೈನಮುನಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ

Date:

ಜೈನಮುನಿ ಹತ್ಯೆಗೈದ ಹಂತಕರಿಗೆ ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕೆಂದು ಮಹಾವೀರ ಸಂಘದ ಕಾರ್ಯಕರ್ತರು ಮತ್ತು ಜೈನ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಮುಖಂಡ ಗೌತಮ್ ಜೈನ್, “ಬೆಳಗಾವಿ ಜಿಲ್ಲೆಯ ಹಿರೇಕೊಡಿ ಗ್ರಾಮದ ‘ನಂದಿ ಪರ್ವತ’ ಆಶ್ರಮದಲ್ಲಿ ದಿಗಂಬರ ಜೈನ ಮುನಿಗ ಕಾಮಕುಮಾರ ನಂದಿ ಮಹಾರಾಜರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಮುನಿಗಳ ದೇಹವನ್ನು ವಿಕೃತಗೊಳಿಸಿ ಕೊಲೆ ಮಾಡಿರುವುದು ಅತ್ಯಂತ ಖಂಡನೀಯ. ಇಂತಹ ಕೃತ್ಯವನ್ನು ಸಮಾಜ ಖಂಡಿಸುತ್ತದೆ” ಎಂದು ಹೇಳಿದ್ದಾರೆ.

“ಕೃತ್ಯ ಎಸಗಿದ ಹಂತಕರನ್ನು ಬಂಧಿಸಿರುವ ಪೊಲೀಸರು, ತನಿಖೆಯನ್ನು ಮುಂದುವರಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಹಲವಾರು ಜಾಗರೂಕತೆಯನ್ನು ಕಾಪಾಡಿಕೊಂಡು ತನಿಖೆಯ ಕಾರ್ಯಾಚರಣೆ ಮುಂದುವರಿಸಬೇಕು. ಹಂತಕರಿಗೆ ಕಠಿಣಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜೈನ ಧರ್ಮದ ಮುನಿ, ಸಾಧುಸಂತರ ಮೇಲೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ತಡೆಯಬೇಕು. ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಕಾಪಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್, ಬಿ.ಎಸ್‌ ಸುನಿಲ್ ಕುಮಾರ್. ಸುದರ್ಶನ್ ಕುಮಾರ್, ಜಿನದತ್ತ ಎಸ್.ಟಿ ಟಾಕಪ್ಪ ಎಸ್.ಕೆ, ದೇವೆಂದ್ರಪ್ಪ, ಧನ್ಯಕುಮಾರ್, ಆದಿನಾಥ್, ಸುರೇಶ್ ಕುಮಾರ್, ನೇಮಿರಾಜ್ ಚಂದ್ರಪ್ರಭು ಸೇರಿದಂತೆ ಜೈನ ಸಮಾಜ ಬಾಂಧವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...