ದಾವಣಗೆರೆ | ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರ ಮುಷ್ಕರ

Date:

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿದ್ದ 24 ಗಂಟೆಗಳ ರಾಷ್ಟ್ರವ್ಯಾಪಿ ವೈದ್ಯರ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಎಲ್ಲ ವೈದ್ಯರು ಬೆಂಬಲ ನೀಡಿ ಪ್ರತಿಭಟನೆ ನಡೆಸಿದರು.

- Advertisement -

ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ‌ಎಸಗಿ ಕೊಲೆ ನಡೆಸಿರುವುದನ್ನು ಖಂಡಿಸಿ ಭಾನುವಾರ ಬೆಳಿಗ್ಗೆ 6 ಗಂಟೆಯಿಂದಲೇ ವೈದ್ಯರು ಮುಷ್ಕರಕ್ಕೆ ಮುಂದಾದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿದರೆ ಯಾವುದೇ ಸೇವೆ ಲಭ್ಯವಿರಲಿಲ್ಲ. ಎಲ್ಲ ವೈದ್ಯರು‌ ಆಸ್ಪತ್ರೆಯ ಹೊರರೋಗಿಗಳ‌ ಸೇವೆ ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ದಾವಣಗೆರೆ ನಗರದ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿಯೂ‌ ಕೂಡ ಬಂದ್‌ನ ಬ್ಯಾನರ್‌ಗಳು ಕಂಡುಬಂದಿದ್ದು, ರೋಗಿಗಳು ಚಿಕಿತ್ಸೆಗೆ ಪರದಾಟ ನೆಡೆಸಿದರು. ಭಾರತೀಯ ವೈದ್ಯಕೀಯ ಸಂಘದ ಮುಷ್ಕರಕ್ಕೆ ರಾಜ್ಯದ ಐಎಂಎ ಘಟಕವೂ ಬೆಂಬಲ ವ್ಯಕ್ತಪಡಿಸಿದ ಹಿನ್ನೆಯಲ್ಲಿ ದಾವಣಗೆರೆಯಲ್ಲಿ ಸರ್ಕಾರಿ ವೈದ್ಯರುಗಳೂ ಕೂಡಾ ಮುಷ್ಕರಕ್ಕೆ ಬೆಂಬಲ ನೀಡಿದ ಕಾರಣ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸಿದರು. ಖಾಸಗಿ ಕ್ಲಿನಿಕ್‌ಗಳೂ ಸಹಕಾರ್ಯನಿರ್ವಹಿಸದೆ ಬಂದ್ ಮಾಡಿ ವೈದ್ಯರ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.

“ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಕ್ರೂರ ಅಪರಾಧ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ ಕ್ರಮವನ್ನೂ ಭಾರತೀಯ ವೈದ್ಯಕೀಯ ಸಂಘ ತೀವ್ರವಾಗಿ ಖಂಡಿಸಿದೆ. ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಆರ್ಥಿಕ ಪರಿಹಾರ ನೀಡುವುದು ತನಿಖೆ ಮತ್ತು ವಿಚಾರಣೆಯ ತ್ವರಿತ ಟ್ರ್ಯಾಕಿಂಗ್ ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷರು ಒತ್ತಾಯಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಸ್‌ಎಫ್‌ಐ ಆಗ್ರಹ

“ವೈದ್ಯರ ಮೇಲಿನ ಹಿಂಸಾಚಾರ ನಿಲ್ಲಿಸುವಂತೆ, ಆಸ್ಪತ್ರೆ ಸುರಕ್ಷಿತ ವಲಯಗಳೆಂದು ಘೋಷಿಸುವುದು ಮತ್ತು ವೈದ್ಯಕೀಯ ವೃತ್ತಿಪರರಿಗೆ ಸಾಕಷ್ಟು ಭದ್ರತೆ ಒದಗಿಸುವ ಕುರಿತು ಕೇಂದ್ರ ಕಾನೂನನ್ನು ತಕ್ಷಣದ ಅನುಷ್ಠಾನ ಮಾಡಬೇಕು” ಎಂದು ಸಂಘ ಒತ್ತಾಯಿಸಿದೆ.

ಕಾರ್ಯಕ್ರಮಕ್ಕೂ ಮುನ್ನ ದಾವಣಗೆರೆ ನಗರದಲ್ಲಿ ಜಯದೇವ ವೃತ್ತದಿಂದ ನೂರಾರು ಕಿರಿಯ ವೈದ್ಯರು ಪಾದಯಾತ್ರೆ ಮೂಲಕ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆವರೆಗೂ ಸಾಗಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಮೇಣದ ಬತ್ತಿ ಹೊತ್ತಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...