ಮಹಿಳೆಯರು ಉದ್ಯೋಗ ಮಾಡುವ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪನಿಬಂಧಕಿ ಎಚ್ ಅನ್ನಪೂರ್ಣ ತಿಳಿಸಿದ್ದಾರೆ.
“ಮಹಿಳೆಯರ ಮೇಲಾಗುವ ಲೈಂಗಿಕ ಕಿರುಕುಳ ತಡೆಗಟ್ಟುವ ಹಾಗೂ ನಿಷೇಧಿಸುವ ಉದ್ದೇಶದಿಂದ ಪ್ರತಿ 3 ವರ್ಷಗಳಿಗೊಮ್ಮೆ ಆಂತರಿಕ ದೂರು ಸಮಿತಿಯನ್ನು ಪುನರ್ ರಚಿಸಬೇಕಾಗಿರುತ್ತದೆ. ಜಿಲ್ಲೆಯಲ್ಲಿ 10 ಮತ್ತು 10ಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಹಕಾರ ಸಂಘಗಳು ಹಾಗೂ ಸಂಘ-ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ಸಮಿತಿ ರಚನೆ ಮಾಡಬೇಕಾಗಿದ್ದು, ಆ ಸಮಿತಿಯಲ್ಲಿ ಒಬ್ಬರು ಅಧ್ಯಕ್ಷರು, ಮೂವರು ಸದಸ್ಯರು ಹಾಗೂ ಒಬ್ಬ ಸದಸ್ಯ ಕಾನೂನಿನ ಪರಿಣಿತರಾಗಿರಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕೊಪ್ಪ-ಶೃಂಗೇರಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಶೇಂಧಿ ದರ್ಬಾರ್
“ಎಲ್ಲ ಸಂಘ ಸಂಸ್ಥೆಗಳು ಆಂತರಿಕ ದೂರು ಸಮಿತಿಯನ್ನು ರಚಿಸಿ, ಸಮಿತಿ ಆದೇಶದ ಪ್ರತಿಯೊಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ವರದಿ ನೀಡಬೇಕು” ಎಂದು ಸೂಚಿಸಿದ್ದಾರೆ.