ದಾವಣಗೆರೆ | ನಾಟಕ ಬಿಟ್ಟು ಪರಿಹಾರ ನೀಡಿ, ಇಲ್ಲವೇ ಮತ ಕೇಳಬೇಡಿ: ಕುರುಬೂರು ಶಾಂತಕುಮಾರ್

Date:

Advertisements

ಬರಗಾಲದಿಂದ ತತ್ತರಿಸಿ ರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲ ಅಧಿಕಾರ ಹಿಡಿಯಲು ಪೈಪೋಟಿ – ನಡೆಸುತ್ತಿದ್ದಾರೆ. ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ಈ ರಾಜ್ಯ ಸರ್ಕಾರಗಳು ರೈತರ ಬರದ ಸಂಕಷ್ಟವನ್ನು ಈ ಕಾಲದಲ್ಲಿ ಜಗಳವಾಡುತ್ತಾ ಮನರಂಜನೆ ನೀಡುತ್ತಿದ್ದಾರೆ. ಇದರಿಂದ ರೈತರ ಹೊಟ್ಟೆ ತುಂಬುವುದಿಲ್ಲ. ʼಈ ನಾಟಕ ಬಿಡಿ, ಪರಿಹಾರ ನೀಡಿ. ಇಲ್ಲವೇ ಮತ ಕೇಳಲು ಬರಬೇಡಿʼ ಎಂದು ಮತ ಕೇಳಲು ಬರುವ ಅಭ್ಯರ್ಥಿಗಳನ್ನು ಊರಿಂದ ಹೊರಗಿಡಿ” ಎಂದು ರೈತರಿಗೆ ಕರೆ ನೀಡಿದರು.

“ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರೂ ಇಲ್ಲವಾಗಿದ್ದಾರೆ. ರಾಜ್ಯದಲ್ಲಿ ದನಕರುಗಳಿಗೆ ಕುಡಿಯುವ ನೀರು, ಮೇವು ಸಿಗದಂತಾಗಿದೆ. ಅಧಿಕಾರಿಗಳು ಚುನಾವಣೆ ಕಾರಣ ಹೇಳಿ ರೈತರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ರಾಜಕೀಯ ಪಕ್ಷದ ಮುಖಂಡರು ಅಧಿಕಾರ ಹಿಡಿಯುವ ಹುಚ್ಚಿನಲ್ಲಿ ತೇಲಾಡುತ್ತಿದ್ದಾರೆ. ಬರಗಾಲದ ನೀರಿನ ಸಮಸ್ಯೆಯಿಂದ ರೈತರ ಬೆಳೆಗಳು ಒಣಗುತ್ತಿವೆ. ಕೊಳವೆ ಬಾವಿಗಳಲ್ಲಿ ನೀರು ಹಿಂಗುತ್ತಿವೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಇದು ರಾಜಕೀಯ ಪಕ್ಷಗಳಿಗೆ ಕಾಣುತ್ತಿಲ್ಲವೇ, ರೈತರು ಎಚ್ಚೆತ್ತುಕೊಂಡು ಸ್ವಾಭಿಮಾನದಿಂದ ಹಳ್ಳಿಗಳಲ್ಲಿ ಗುಡಿ ಗೋಪುರ ಕಟ್ಟುವ ಚಿಂತನೆ ಮಾಡುವ ಬದಲು, ಕೆರೆ ಕಟ್ಟೆಗಳ ಹೂಳೆತ್ತುವ ಮೂಲಕ ಪುನಶ್ವೇತನಗೊಳಿಸುವ ಹಾಗೂ ಹೊಸದಾಗಿ ಕೆರೆಕಟ್ಟೆ ನಿರ್ಮಿಸುವ ಕೆಲಸದಲ್ಲಿ ಶ್ರದ್ದೆ ವಹಿಸಿದರೆ ಮುಂದಿನ ತಲೆಮಾರಿಗೆ ಕೊಳವೆ ಬಾವಿಗಳಲ್ಲಿ ನೀರು ಶೇಖರಣೆಯಾಗಿ ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗುತ್ತದೆ. ಇಂದಿನ ರಾಜಕಾರಣಿಗಳಿಗೆ ಇದೆಲ್ಲ ಕಾಣುವುದಿಲ್ಲ. ಅವರಿಗೆ ಬೇಕಾಗಿಯೂ ಇಲ್ಲ” ಎಂದು ಆರೋಪಿಸಿದರು.

Advertisements

“ಬಂಡವಾಳ ಶಾಹಿಗಳ ₹14 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ. ಪ್ರವಾಹ ಹಾನಿ ಅತಿವೃಷ್ಟಿ, ಅನಾವೃಷ್ಟಿ ಬರಗಾಲದ ನಷ್ಟ ಪರಿಹಾರದ ಬಗ್ಗೆ ಯಾವುದೇ ಬಗೆಯ ಗಂಭೀರ ಚಿಂತನೆ ನಡೆಸುತ್ತಿಲ್ಲ. ಈ ರೀತಿಯಾಗಿ ಸರ್ಕಾರಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೋದಿ-ಅಮಿತ್ ಶಾ ಬಳಿ ಮನುಷ್ಯರನ್ನು ಶುದ್ಧಗೊಳಿಸಬಲ್ಲ ವಾಷಿಂಗ್ ಮಷೀನ್ ಇದೆ : ಮಲ್ಲಿಕಾರ್ಜುನ ಖರ್ಗೆ

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಲ್ಲೂರ್ ರವಿಕುಮಾರ್, ಪೂಜಾರ್, ಅಂಜನಪ್ಪ ಹತ್ತಳ್ಳಿ, ದೇವರಾಜ್, ಬಸವರಾಜ್, ಅಶೋಕ್, ವಕೀಲ ಮಂಜುನಾಥ್, ತಿರುಮಲ್ಲೇಶ್, ಕರಬಸಪ್ಪ, ಬಸಣ್ಣ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X