ದಾವಣಗೆರೆ | ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ; ಸಿಎಂ ಬಳಿ ನಿಯೋಗ ಹೋಗುವಂತೆ ಶಾಸಕ ಬಿ ಪಿ ಹರೀಶ್ ಸಲಹೆ

Date:

Advertisements

ಹರಿಹರ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಗರಸಭೆ ಸದಸ್ಯರೆಲ್ಲ ಒಟ್ಟಾಗಿ ಸಿಎಂ ಸಿದ್ದರಾಮಯ್ಯನವರ ಬಳಿಗೆ ನಿಯೋಗ ಹೋಗಿ ಅನುದಾನ ಕೋರಿಕೆ ಇಡೋಣ ಎಂದು ಶಾಸಕ ಬಿ ಪಿ ಹರೀಶ್ ಸಲಹೆ ನೀಡಿದರು.

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ಸಭಾಂಗಣದಲ್ಲಿ ನೂತನ ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, “ಸಾರ್ವಜನಿಕರು ನಗರಸಭೆಯ ಆಡಳಿತ ವ್ಯವಸ್ಥೆ ನೋಡಿ ಬೇಸರಗೊಂಡಿದ್ದಾರೆ. ನಗರಸಭೆ ವ್ಯವಸ್ಥೆ ಹದಗೆಟ್ಟಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವಾದರಿಂದ, ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಅಧೋಗತಿಯತ್ತ ಸಾಗಿದೆ” ಎಂದು ಹೇಳಿದರು.

“ಹಲವಾರು ಗ್ರಾಮೀಣ ಭಾಗದ ಕೆರೆಗಳಿಗೆ ಹರಿಹರದಿಂದಲೇ ನೀರು ಸರಬರಾಜಾಗುತ್ತದೆ. ಆದರೆ, ಹರಿಹರದ ಜನತೆಗೆ ಬೇಸಿಗೆ ಕಾಲದಲ್ಲಿ ಕುಡಿಯಲು ನೀರಿಲ್ಲದೇ ಪರದಾಡುವಂತಾಗಿದೆ. ಇದಕ್ಕೆ ಯಾವುದೇ ಯೋಜನೆ, ನೀರು ಶೇಖರಣಾ ಸಂಗ್ರಹಾಗಾರ ಇಲ್ಲ. ಮೊದಲು ಇಲ್ಲಿನ ಜನರಿಗೆ ನೀರು ಕೊಟ್ಟು ನಂತರ ಜಗಳೂರು ಸೇರಿದಂತೆ ಇತರೆ ಕೆರೆಗಳಿಗೆ ಸರಬರಾಜಾಗುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿಕೊಂಡು ಹೋರಾಟ ಮಾಡಬೇಕಿದೆ. ಕೆರೆಗಳಿಗೆ ನೀರು ಸರಬರಾಜಾಗುವ ಜಾಕ್‌ವೆಲ್ ಹತ್ತಿರ ಪ್ರತ್ಯೇಕವಾದ ಪೈಪ್‌ಲೈನ್ ವ್ಯವಸ್ಥೆ ಮಾಡಿಕೊಂಡು ಆ ಮೂಲಕ ನಗರದ ಜನತೆಗೆ ನೀರು ಸರಬರಾಜು ಮಾಡಬೇಕಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೆ ಆರ್ ಪೇಟೆ ಪುರಸಭೆ ಉಪಾಧ್ಯಕ್ಷರಾಗಿ ಸೌಭಾಗ್ಯ ಉಮೇಶ್ ಆಯ್ಕೆ

“ನಗರದಲ್ಲಿ ಹರಿಹರ-ದಾವಣಗೆರೆ ವಾಟರ್ ಹೌಸ್ ಬಳಿ ಇರುವ ಜಾಗದಲ್ಲಿ ನೀರು ಶೇಖರಣಾ ಘಟಕದ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ನೀಲ ನಕ್ಷೆಯನ್ನು ತಯಾರಿಸಿದ್ದು, ಶೇಖರಣಾ ಘಟಕಕ್ಕೆ ಅದು ಸಮಂಜಸವಾದ ಸ್ಥಳವಲ್ಲವೆಂದು ತಜ್ಞರು ನನಗೆ ವರದಿ ನೀಡಿದ್ದಾರೆ. ನಗರಸಭೆಯ ಸರ್ವ ಸದಸ್ಯರನ್ನು ಒಗ್ಗೂಡಿಸಿಕೊಂಡು ಸಿಎಂ ಬಳಿ ನಿಯೋಗ ಹೋಗಿ, ಕುಡಿಯುವ ನೀರಿನ ಶೇಖರಣಾ ಘಟಕ ಸ್ಥಾಪನೆ ಸೇರಿದಂತೆ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಬಗೆಯ ಸಹಕಾರವನ್ನು ನೀಡುವಂತೆ ಕೋರಿಕೆ ಇಡೋಣ” ಎಂದು ತಿಳಿಸಿದರು.

ಇದೇ ವೇಳೆ ಹರಿಹರ ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿದರು. ನಗರಸಭೆ ಅಧ್ಯಕ್ಷರಾಗಿ ಜೆಡಿಎಸ್ ಕವಿತಾ ಮಾರುತಿ ಬೇಡರ್ ಮತ್ತು ಉಪಾಧ್ಯಕ್ಷರಾಗಿ ಜಂಬಣ್ಣಗುತ್ತೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X