ದಾವಣಗೆರೆ | ಮಳೆಯಿಂದ ನಗರದ ಹಲವೆಡೆ ಅಪಾರ ಹಾನಿ

Date:

ಬುಧವಾರ ಸಂಜೆಯಿಂದ ಪ್ರಾರಂಭವಾಗಿ ರಾತ್ರಿಯಿಡೀ ಸುರಿದ ಮಳೆಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಪಾರ ಹಾನಿ ಸಂಭವಿಸಿದೆ.

- Advertisement -

ವಾಯುಭಾರ ಕುಸಿತದಿಂದ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಬುಧವಾರ ಸಂಜೆಯಿಂದ ನಿರಂತರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ಥವ್ಯಸ್ಥಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದಾವಣಗೆರೆ ನಗರದ ಪಿಸಾಳೆ ಕಾಂಪೌಂಡ್‌ನ ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಇಲ್ಲಿನ ನಿವಾಸಿಗಳು ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಹಳೇ ಪಿಬಿ ರಸ್ತೆಯ ಪಕ್ಕದಲ್ಲೇ ಇರುವ ಪಿಸಾಳೆ ಕಾಂಪೌಂಡ್ ತಗ್ಗು ಪ್ರದೇಶದಲ್ಲಿ ಇರುವ ಕಾರಣ ಮಳೆ ನೀರು ವಸತಿ ಪ್ರದೇಶದೊಳಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಮನೆಯಲ್ಲಿರುವ ಸಾಮಗ್ರಿಗಳು, ದವಸ ಧಾನ್ಯಗಳು ಕೂಡ ನೀರುಪಾಲಾಗಿವೆ.‌ ಮನೆಯಲ್ಲಿದ್ದ ನೀರನ್ನು ಹೊರ ಹಾಕುವ ಕೆಲಸವನ್ನು ಇಲ್ಲಿನ ಸ್ಥಳೀಯರು ಮಾಡುತ್ತಿದ್ದಾರೆ. ಬೈಕ್ ಗಳು ಕೂಡ ಮುಳುಗಡೆಯಾಗಿವೆ.

WhatsApp Image 2024 10 17 at 5.00.11 PM

ಪಿಸಾಳೆ ಕಾಂಪೌಂಡ್‌ನಲ್ಲಿದ್ದ ನೀರನ್ನು ಪಾಲಿಕೆ ಸಿಬ್ಬಂದಿ ಹೊರ ಹಾಕುವಲ್ಲಿ ನಿರತರಾಗಿದ್ದಾರೆ. ಉಳಿದಂತೆ ನಗರದ ಹಲವು ಭಾಗದಲ್ಲಿಯೂ ಮಳೆನೀರು ಮನೆಗಳಿಗೆ ನುಗ್ಗಿದ್ದು ಹಾನಿ ಸಂಭವಿಸಿದೆ.

ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಕೆರೆಯು ತುಂಬಿ ಕೋಡಿ ಹರಿದಿದ್ದು, ಕೆರೆ ಅಂಗಳಕ್ಕೆ ಹೊಂದಿಕೊಂಡಂತಿದ್ದ ಸುಮಾರು 35 ರಿಂದ 40 ಮನೆಗಳಿಗೆ ನೀರು ನುಗ್ಗಿದೆ. ಗ್ರಾಮದ ಸರ್ಕಾರಿ ಪಾಠಶಾಲೆಯಲ್ಲಿ ಗಂಜಿ ಕೇಂದ್ರ ತೆರೆದಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಲ್ಲಿ ಆಶ್ರಯ ನೀಡಲಾಗಿದೆ. ಜಗಳೂರು ತಾಲೂಕಿನ ಬಹುತೇಕ ಕೆರೆಗಳಿಗೆ ಉತ್ತಮ ಮಳೆಯಿಂದ ನೀರು ಹರಿದಿದ್ದು ತುಂಬುವ ಹಂತದಲ್ಲಿವೆ.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮೂರು ನಾಲ್ಕು ದಿನಗಳು ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದ್ದು, ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ತಿಳಿಸಿದೆ.

WhatsApp Image 2024 10 17 at 5.00.12 PM 2
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...