ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

Date:

ದಾವಣಗೆರೆ ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲಿನ ಮಳೆ ಸುರಿದಿದ್ದು, ನೀರಿಲ್ಲದೆ ಕಂಗೆಟ್ಟಿರುವ ರೈತರ ಮೊಗದಲ್ಲಿ ಸಂತಸ ತಂದಿದೆ. ಭಾರೀ ಗಾಳಿ ಜತೆಗೆ ದಿಗಿಲು ಹುಟ್ಟಿಸುವಂತಹ ಸಿಡಿಲು ಮಿಂಚು ಜೋರಾಗಿದ್ದು, ಹಲವೆಡೆ ಮರಗಿಡಗಳು ರೆಂಬೆಗಳು ಮುರಿದು ಬಿದ್ದು, ರಸ್ತೆ ಮಾರ್ಗಗಳು, ಕೆಲವೆಡೆ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಸಿಡಿಲಿನ ಹೊಡೆತಕ್ಕೆ ಬರೋಬ್ಬರಿ 25 ಮೇಕೆಗಳು ಆಹುತಿಯಾದ ಘಟನೆ ವರದಿಯಾಗಿದೆ.

- Advertisement -

ದಾವಣಗೆರೆ ತಾಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು 16 ಆಡುಗಳು ಸೇರಿದಂತೆ 25 ಮೇಕೆಗಳು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ದಾವಣಗೆರೆ ತಾಲೂಕಿನ ಸುತ್ತಮುತ್ತ ಗುರುವಾರ ಸಂಜೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಿತು. ಎಂದಿನಂತೆ ಈಚಘಟ್ಟ ಗ್ರಾಮದ ರೈತ ಪಾಪ್ಯಾನಾಯ್ಕ ಮತ್ತು ರೇವತಿಬಾಯಿ ಅವರು ತಮ್ಮ ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದರು. ಮಳೆ ಜೋರಾಗಿ, ಗುಡುಗು ಆರಂಭವಾದಾಗ ಮೇಕೆಗಳು ಮರದ ಕೆಳಗೆ ಬಂದು ಆಶ್ರಯಿಸಿವೆ. ಈ ವೇಳೆ ಸಿಡಿಲಿನ ಹೊಡೆತಕ್ಕೆ 16 ಆಡುಗಳು ಮತ್ತು 9 ಗಂಡು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

ಈ ವೇಳೆ ಸ್ಥಳದಲ್ಲಿದ್ದ ಪಾಪ್ಯಾನಾಯ್ಕ ಅವರು ಉಳಿದ ಮೇಕೆಗಳನ್ನು ಅಟ್ಟಿಕೊಂಡು ಬರಲೆಂದು ಸಿಡಿಲು ಬಡಿದ ಸ್ಥಳದಿಂದ ದೂರ ಹೋಗಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಾಜು ₹4 ರಿಂದ ₹5 ಲಕ್ಷ ನಷ್ಟವಾಗಿದ್ದು, ಸ್ಥಳಕ್ಕೆ ಸ್ಥಳೀಯ ಶಾಸಕ ಕೆ ಎಸ್ ಬಸವಂತಪ್ಪ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಪೊಲೀಸರು, ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...