ದಾವಣಗೆರೆ | ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ: ದಸಂಸ ಆತಂಕ

Date:

ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ ಎದುರಾಗಿದ್ದು, ಸ್ವಲ್ಪವೇ ಮಣ್ಣು ಕುಸಿತ ಸಂಭವಿಸಿದರೂ ಭಾರೀ ಅನಾಹುತ, ಜೀವಹಾನಿಯಾಗುವ ಸಂಭವವಿದೆ. ಇತ್ತೀಚೆಗೆ ಇಂತಹ ಪ್ರಕರಣ ವರದಿಯಾಗಿದ್ದು, ಈಗ ಅಂತಹದೇ ಮತ್ತೊಂದು ಪ್ರಕರಣ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡು ಬಂದಿದ್ದು, ಇಂತಹ ಅವೈಜ್ಞಾನಿಕ, ಅನಧಿಕೃತ ಮಣ್ಣು ಸಾಗಾಟದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಈ ಕುರಿತು ಕದಸಂಸ ತಾಲೂಕು ಸಂಚಾಲಕ ಪಿ ಜೆ ಮಹಾಂತೇಶ್ ಪ್ರಕಟಣೆಗೆ ತಿಳಿಸಿದ್ದು, “ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ನದಿ ದಡದ ಪಟ್ಟಾ ಜಮೀನಿನಲ್ಲಿ 70 ಅಡಿಗೂ ಎತ್ತರದ ಹೈಟೆನ್ಷನ್ ಪವರ್ ಲೈನ್ ಟವರ್ ಮೂಲಕ 65,000 ಕೆವಿಯಷ್ಟು ಅಪಾರ ಪ್ರಮಾಣದ ವಿದ್ಯುತ್ ಪ್ರಸರಣವಾಗುತ್ತದೆ. ಮಣ್ಣು ಮಾಫಿಯಾದ ಕಿಡಿಗೇಡಿಗಳು ಟವರ್‌ಗೆ ಕೇವಲ ನಾಲ್ಕೈದು ಅಡಿಗಳ ಅಂತರದಲ್ಲಿ 15 ಅಡಿಗಳಷ್ಟು ಆಳ‌ದವರೆಗೆ ಮಣ್ಣು ಅಗೆದು ಗಣಿಗಾರಿಕೆ ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮಣ್ಣು ಸಾಗಾಟ ಮಾಡುವವರು ಟವರ್‌ಗೆ ಕೇವಲ ನಾಲ್ಕೈದು ಅಡಿಗಳ ಅಂತರದಲ್ಲಿ 15 ಅಡಿಗಳಷ್ಟು ಆಳ‌ವಾಗಿ ಮಣ್ಣು ಅಗೆದಿರುವುದರಿಂದ ಈ ಭಾಗದ ನದಿ ದಡದ ಮಣ್ಣು ಮೆದುವಾಗಿದ್ದು, ಒಂದೆರಡು ದಿನ ಮಳೆ ಸುರಿದರೂ ನೀರಿನೊಂದಿಗೆ ಮಣ್ಣು ಸವಕಳಿಯಾಗಿ ಟವರ್ ನೆಲಕ್ಕೆ ಉರುಳುವ ಸಾಧ್ಯತೆ ಇದೆ. ಹಾಗೇನಾದರೂ ಟವರ್ ಉರುಳಿ ಬಿದ್ದರೆ ಆ ಪ್ರದೇಶದ ಸುತ್ತಲೂ ಅಪಾರ ಪ್ರಮಾಣದ ಜೀವ, ಆಸ್ತಿ ಹಾನಿಯಾಗುತ್ತದೆ. ದಾವಣಗೆರೆ, ಹಾವೇರಿ ಹಾಗೂ ಇತರೆ ಜಿಲ್ಲೆಗಳಿಗೆ ಹಲವು ದಿನಗಳ ಕಾಲ ವಿದ್ಯುತ್ ಪ್ರಸಾರದಲ್ಲಿ ತಡೆಯುಂಟಾಗುತ್ತದೆ” ಎಂದರು.

ಮಣ್ಣು ಮಾಫಿಯಾ

“ಟವರ್‌ಗಳ ಮಾಲಿಕತ್ವ ವಹಿಸಿರುವ ಕೆಪಿಟಿಸಿಎಲ್‌ನವರಿಗೆ ಈ ವಿಷಯ ಹೇಳಿದರೆ, ‘ಹೌದು ವಿಷಯ ನಮ್ಮ ಗಮನಕ್ಕಿದೆ, ಜಮೀನಿನ ಮಾಲೀಕರಿಗೆ ಈಗಾಗಲೇ ನೋಟಿಸ್ ನೀಡಿದ್ದೇವೆʼ ಎನ್ನುತ್ತಾರೆ. ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಂದಾಯ ಇಲಾಖೆಯವರು, ‘ಮಣ್ಣು ಗಣಿಗಾರಿಕೆ ಮಾಡಿದ್ದಕ್ಕೆ ನೋಟಿಸ್ ನೀಡಿದ್ದೇವೆ, ರಾಜಧನ ಹಾಗೂ ದಂಡ ವಿಧಿಸಿದ್ದೇವೆ’ ಎಂದು ಸಿದ್ಧ ಉತ್ತರ ನೀಡುತ್ತಾರೆ. ಕೋಟ್ಯಂತರ ಮೌಲ್ಯದ ಮಣ್ಣನ್ನು ಅಕ್ರಮವಾಗಿ ಸಾಗಿಸಿದವರಿಗೆ ನೋಟಿಸ್ ಜಾರಿ ಮಾಡಿ ಜುಜುಬಿ ಮೊತ್ತದ ರಾಜಧನ, ದಂಡ ವಸೂಲಿ ಮಾಡಿದರೆ ಸಾಕೆಂಬ ಅಧಿಕಾರಿಗಳ ಧೋರಣೆ ಖಂಡನೀಯ. ವಿಷಯ ತಿಳಿದು ಅಲ್ಲಲ್ಲಿ ಮುಂದುವರೆದಿರುವ ಅಕ್ರಮ, ಅನಾಹುತ ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಮೌನವಹಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ತೋರಣಗಲ್ಲು ಅಪ್ರಾಪ್ತೆಯ ಅತ್ಯಾಚಾರ ಖಂಡನೆ; ಅರೋಪಿಗಳ ಬಂಧನಕ್ಕೆ ಎಸ್‌ಎಫ್‌ಐ ಒತ್ತಾಯ

“ನದಿ ದಡದ ಜಮೀನುಗಳಲ್ಲಿ ಕೆಂಪು ಮೆದು ಮಣ್ಣು ಹಾಗೂ ಅನ್ಯ ಪ್ರದೇಶದಲ್ಲಿ ಜಮೀನುಗಳಿಂದ ಅಕ್ರಮ ಗ್ರಾವೆಲ್ ಮಣ್ಣು ಸಾಗಣೆಯಿಂದ ತಾಲೂಕಿನ ಭೌಗೋಳಿಕ ಚಿತ್ರವನ್ನು ವಿಕೃತಗೊಳಿಸಲಾಗುತ್ತಿದೆ. ಸಹಸ್ರಾರು ಮರಗಳು ನೆಲಕ್ಕುರುಳಿಸಿದ್ದು, ಇದರಿಂದ ಜೀವ ವೈವಿಧ್ಯಕ್ಕೆ ಧಕ್ಕೆಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ಹಿಂದೆ ಜಿಲ್ಲಾಧಿಕಾರಿ, ಗಣಿ, ಕಂದಾಯ, ಕೃಷಿ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಂಘಟನೆಯಿದ ಮನವಿ ಸಲ್ಲಿಸಿದ್ದರೂ ತಾಲೂಕಿನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ವಿಷಯದ ಮಾಹಿತಿ ಇದ್ದರೂ ತವರು ಜಿಲ್ಲೆಯಲ್ಲಿನ ಅಕ್ರಮ ತಡೆಯದೆ ಗಣಿ ಇಲಾಖೆ ಸಚಿವರಾಗಿರುವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಮೌನವಹಿಸಿರುವುದೇಕೆ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...