ದಾವಣಗೆರೆ | ಜನರ ಮುಖ್ಯ ಸಮಸ್ಯೆ ಪರಿಹರಿಸುವ ನೀತಿಗಳು ಜಾರಿಯಾಗದಿದ್ದರೆ, ಹೋರಾಟ ಅನಿವಾರ್ಯ; ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

Date:

ಮುಖ್ಯಮಂತ್ರಿಯವರು, ಸಚಿವರು, ಸಂಬಂಧಿತ ಅಧಿಕಾರಿಗಳು ಮತ್ತು ಜನಚಳವಳಿಗಳ ಮುಖಂಡರು ಸೇರಿದಂತೆ ಒಂದು ಜನತಾ ಅಧಿವೇಶನವನ್ನು ಕರೆದು ಜನರ ಬದುಕಿನ ಮುಖ್ಯ ಸಮಸ್ಯೆಗಳ ಕುರಿತು ಚರ್ಚೆ ಮಾಡಿ, ಜನಪರ ನೀತಿಗಳು ಮತ್ತು ಕಾರ್ಯಕ್ರಮಗಳು ಜಾರಿಯಾಗಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧವೂ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸಂಚಾಲಕ ನೂರ್ ಶ್ರೀಧರ್ ಎಚ್ಚರಿಸಿದರು.

- Advertisement -

ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ರೈತ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ರಾಷ್ಟ್ರವ್ಯಾಪಿ ಕರೆ ನೀಡಿರುವ ಹೋರಾಟದ ಭಾಗವಾಗಿ ದಾವಣಗೆರೆಯ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಳಿಕ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಯುಕ್ತ ಹೋರಾಟ-ಕರ್ನಾಟಕದ ರೈತ ಮತ್ತು ಕಾರ್ಮಿಕ ಕಾರ್ಯಕರ್ತರು ಹಾಗೂ ಮುಖಂಡರು ಜಯದೇವ ಸರ್ಕಲ್ ಮೂಲಕ ಉಪವಿಭಾಗಾಧಿಕಾರಿ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕೇಂದ್ರ ಸರ್ಕಾರ ಐತಿಹಾಸಿಕ ರೈತರ ಪ್ರತಿಭಟನೆಯ ನಂತರ ಮೂರು ಕಾಯ್ದೆಗಳನ್ನು ವಾಪಸ್ ಪಡೆಯುವುದು ಹಾಗೂ ಬೆಂಬಲ ಬೆಲೆ ನೀಡುವುದು ಸೇರಿದಂತೆ ಇತರ ಆಶ್ವಾಸನೆಗಳನ್ನು ನೀಡಿತ್ತು. ಈ ಆಶ್ವಾಸನೆಗಳನ್ನು ನೀಡಿದ್ದು ಬಿಟ್ಟರೆ ಈವರೆಗೂ ಕೂಡ ಅವುಗಳನ್ನು ಈಡೇರಿಸಿಲ್ಲ. ಅವರ ನೀತಿಗಳು ಕಾರ್ಪೊರೇಟ್ ಮಾರುಕಟ್ಟೆ ಪೂರೈಕೆಗಳಿಗೆ ಸಹಾಯಕವಾಗಿದ್ದು, ಐಸಿಎಆರ್ ಕೂಡ ಬಹುರಾಷ್ಟ್ರೀಯ ಕಂಪೆನಿಗಳೊಂದಿಗೆ ಅನೇಕ ಒಪ್ಪಂದಗಳಿಗೆ ಸಹಿ ಹಾಕಿದ್ದು, ಇವುಗಳು ರೈತರ ಶೋಷಿಸಲು ಕಾರಣವಾಗುತ್ತದೆ. ಕಾರ್ಮಿಕರ ನೀತಿಗಳನ್ನೂ ಕೂಡ ಬದಲಾಯಿಸಲು ಹೊರಟಿದ್ದೂ ಕೂಡಾ ಕಾರ್ಮಿಕರ ಶೋಷಣೆಗೆ ಕಾರಣವಾಗಿದೆ. ಹೀಗಾಗಿ ಕೂಡಲೇ ನಿಮ್ಮ ಮನೆಹಾಳು ನೀತಿಗಳನ್ನು ಬಿಟ್ಟು ಕಾರ್ಮಿಕರ, ರೈತಪರ ಮತ್ತು ಜನಪರ ನೀತಿಗಳನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

“2023ರಲ್ಲಿ ಕರ್ನಾಟಕ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳು ಸೇರಿದಂತೆ ಜನ ಚಳವಳಿಗಳು ಮುಂದಿಡುತ್ತಿದ್ದ ಬಹಳಷ್ಟು ಬೇಡಿಕೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿ ಭರವಸೆ ನೀಡಿದ್ದರು. ಕೇವಲ ಗ್ಯಾರಂಟಿಗಳನ್ನು ಬಿಟ್ಟರೆ ಬೇರೆ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಬಿಜೆಪಿಯ ಜನವಿರೋಧಿ ನೀತಿಗಳನ್ನು ತೆಗೆದು ಜನಪರ ನೀತಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಬೆಂಬಲಿಸಿದ್ದೆವು. ಆದರೆ ಒಂದೂವರೆ ವರ್ಷದ ನಂತರವೂ ಬಿಜೆಪಿಯ ಜನವಿರೋಧಿ ನೀತಿಗಳನ್ನು ಹಿಂಪಡೆದಿಲ್ಲ. ಬದಲಿಗೆ ಅವುಗಳನ್ನು ಮುಂದುವರೆಸಲಾಗುತ್ತಿದೆ” ಎಂದು ನೂರ್ ಶ್ರೀಧರ್ ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ಹಿಂದಿನ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದ ಕೃಷಿ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಬಹುದಾಗಿತ್ತು. ಆದರೆ ವಾಪಸ್ ಪಡೆಯುವ ಕೆಲಸ ಮಾಡಿಲ್ಲ. ಕಾರ್ಮಿಕರ ಕೆಲಸದ ಸಮಯವನ್ನು 8 ಗಂಟೆಯಿಂದ 12 ಗಂಟೆಗೆ ಏರಿಸಿದ್ದ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆದಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಜನತಾ ಅಧಿವೇಶನ ಕರೆಯಬೇಕೆಂಬ ಒತ್ತಾಯ ಮಾಡುತ್ತಿದ್ದೇವೆ. ಆ ಮೂಲಕ ರೈತ ಮುಖಂಡರು ಕಾರ್ಮಿಕ ಮಖಂಡರು ಮತ್ತು ಜನಚಳವಳಿಗಳ ಮುಖಂಡರು ಸೇರಿದಂತೆ ಅಲ್ಲಿ ರೈತ, ಕಾರ್ಮಿಕರ, ಜನಸಾಮಾನ್ಯರ ಸಮಸ್ಯೆಗಳ ಚರ್ಚೆಯಾಗಿ ಒಪ್ಪಿತ ನೀತಿಗಳನ್ನು ಕೂಡಲೇ ಜಾರಿ ಮಾಡಬೇಕಾಗುತ್ತದೆ. ಇಲ್ಲದಿದ್ದಲ್ಲಿ ನಿಮ್ಮ ವಿರುದ್ಧ ಕೂಡ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳುತ್ತೇವೆ” ಎಂದು ಎಚ್ಚರಿಸಿದರು.

WhatsApp Image 2024 11 26 at 12.57.12 PM

ಸಂಚಾಲಕ ಮಧು ತೊಗಲೇರಿ ಮಾತನಾಡಿ, “ಸರ್ಕಾರಗಳು ರೈತರು ಮತ್ತು ಕಾರ್ಮಿಕರ ಜನಸಾಮಾನ್ಯರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ. ರೈತ ಕಾರ್ಮಿಕರ ವಿರೋಧಿ ಕಾನೂನುಗಳನ್ನು ಜಾರಿಗೆ ತಂದು ಆಡಳಿತ ನಡೆಸುತ್ತಿವೆ. ಈ ಕೂಡಲೇ ಇದನ್ನು ಕೈ ಬಿಟ್ಟು ಕಾರ್ಮಿಕರ ರೈತರ ಪರವಾದ ಕಾನೂನುಗಳನ್ನು ಜಾರಿಗೆ ತಂದು ಅವರ ಬೆನ್ನಿಗೆ ನಿಲ್ಲಬೇಕು. ಇಲ್ಲವಾದಲ್ಲಿ ಸರ್ಕಾರಗಳ ವಿರುದ್ಧ ಜನಾಕ್ರೋಶ ಮುಂದುವರೆಯಲಿದೆ” ಎಂದು ತಿಳಿಸಿದರು.

ಎಐಟಿಯುಸಿ ಕಾರ್ಮಿಕ ಮುಖಂಡ ಉಮೇಶ್ ಅವರಗೆರೆ ಮಾತನಾಡಿ “ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಶ್ರೀಮಂತರನ್ನು ಅತೀ ಶ್ರೀಮಂತಗೊಳಿಸುವ ಕಾರ್ಯದಲ್ಲಿ, ರೈತರು ಮತ್ತು ಕಾರ್ಮಿಕರನ್ನು ಬಡವರನ್ನಾಗಿಸುವ ನೀತಿಗಳನ್ನು ಜಾರಿಗೆ ತರುತ್ತಿವೆ. ರೈತರ ಪರವೆಂದು ಹೇಳಿಕೊಂಡು ಬಂದ ಸರ್ಕಾರಗಳೂ ಕೂಡ ವಂಚಿಸುತ್ತಿವೆ. ಸರ್ಕಾರ ಕೂಡಲೇ ಎಚ್ಚೆತ್ತು ರೈತ ಮತ್ತು ಕಾರ್ಮಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀತಿಗಳನ್ನು ರೂಪಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತುರ್ತಾಗಿ ಒಳಮೀಸಲಾತಿ ನೀಡುವಂತೆ ದಲಿತ ಸಂಘಟನೆಗಳ ಆಗ್ರಹ

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಹೊನ್ನೂರು ಮುನಿಯಪ್ಪ, ಅರುಣ್ ಕುಮಾರ್ ಕುರುಡಿ, ಗುಮ್ಮನೂರು ಮಂಜುನಾಥ್, ಬುಳ್ಳಾಪುರ ಹನುಮಂತಪ್ಪ, ಬುಳ್ಳಾಪುರ ಪರಮೇಶ್ವರಪ್ಪ, ಮರುಳಸಿದ್ದಯ್ಯ, ಕಾರ್ಮಿಕ ಮುಖಂಡರಾದ ಉಮೇಶ್ ಆವರಗೆರೆ, ಆವರಗೆರೆ ಚಂದ್ರು, ಶಿವಕುಮಾರ್, ರಮೇಶ್, ಲಕ್ಷ್ಮಣ್, ಮಂಜುನಾಥ್ ಕೈದಾಳೆ, ಮಂಜುನಾಥ್ ಕುಕ್ಕುವಾಡ, ಸತೀಶ್ ಕೈದಾಳೆ, ನಾಗಸ್ಮಿತ, ಜನಶಕ್ತಿಯ ಸತೀಶ್ ಅರವಿಂದ್, ಪವಿತ್ರ ಅರವಿಂದ್, ರಾಮಾಂಜನೇಯ, ಆದಿಲ್ ಖಾನ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...