ದಾವಣಗೆರೆ | ಅಕ್ರಮ ಆರೋಪ; ಮಹಾನಗರ ಪಾಲಿಕೆ ಬಿಲ್‌ ಕಲೆಕ್ಟರ್‌ ಅಮಾನತು

Date:

ಭೂ-ಅಕ್ರಮ ಆರೋಪದ ಹಿನ್ನೆಲೆ ದಾವಣಗೆರೆ ಮಹಾನಗರ ಪಾಲಿಕೆ‌ ಬಿಲ್ ಕಲೆಕ್ಟರ್ ಸುನಿತಾ ಅವರನ್ನು ಅಮಾನತು ಮಾಡಿ ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ.

- Advertisement -

ಉದ್ಯಾನಕ್ಕೆ ಮೀಸಲಿಟ್ಟ‌ ಜಾಗವನ್ನು ಅಕ್ರಮವಾಗಿ ಖಾತಾ ಉತಾರ ನೀಡುವ ಮೂಲಕ ಕರ್ತವ್ಯ ಲೋಪ ಎಸಗಿದ ಆರೋಪ ಸುನಿತಾ ಮೇಲಿತ್ತು. ಇವರು ಡೋರ್ ನಂ 1882/81ಎನಲ್ಲಿ ಡಿ ಎಲ್ ರಾಮಚಂದ್ರಪ್ಪ ಎಂಬುವವರ ಹೆಸರಿಗೆ ಮೇಲಾಧಿಕಾರಿಗಳ ಆದೇಶವಿಲ್ಲದ ಹಾಗೂ ಯಾವುದೇ ಅಧಿಕೃತ ಷರಾ ಇಲ್ಲದೇ ಹೆಚ್ಚುವರಿಯಾಗಿ ಸೇರ್ಪಡೆ ಮಾಡಿದ್ದರು. ಖಾತೆ ಸೇರಿಸಲು ಯಾವುದೇ ಮೂಲ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸದೇ 2022 ಆಗಸ್ಟ್‌ 11ರಂದು ನಮೂನೆ-3 ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸದರಿ ಖಾತಾ ಎಕ್ಸ್‌ಟ್ಯಾಕ್ ಆಧಾರದ ಮೇಲೆ ಸುಧಾ ಬಿ ಹಾಗೂ ಪೂಜಾ ಟಿ ಎಂಬುವವರು ಸಬ್ ರೆಜಿಸ್ಟಾರ್ ಕಚೇರಿಯಲ್ಲಿ 2022ರ ಆಗಸ್ಟ್‌ 15ರಂದು ದಾನ ಪತ್ರದ ಆಧಾರದ ಮೇಲೆ ನೋಂದಾವಣೆ ಮಾಡಿಸಿಕೊಂಡು, 2022ರ ಅಕ್ಟೋಬರ್‌ 10ರಂದು ಖಾತಾ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಾರ್ಡ್‌ ನಂಬರ್-20 ರ ಸಾರ್ವಜನಿಕರು, ಆಯುಕ್ತರಿಗೆ ದೂರು ನೀಡಿದ್ದರು. ಸರ್ವೆ ನಂ. 51ರ ಉದ್ಯಾನ ಜಾಗವನ್ನು ಖಾಸಗಿ ವ್ಯಕ್ತಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಸದರಿ ಸ್ವತ್ತನ್ನು ಯಾವುದೇ ಕಾರಣಕ್ಕೂ ಖಾತೆ ಮಾಡಬಾರದೆಂದು ದೂರು ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನೀರಿಗಾಗಿ ವಿದ್ಯಾರ್ಥಿಗಳ ಪರದಾಟ

ಆಯುಕ್ತರು ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಉಪ ಆಯುಕ್ತರು(ಕಂದಾಯ) ಹಾಗೂ ಎಸ್ಟೇಟ್‌ ಆಫೀಸರ್‌ಗೆ ಆದೇಶಿದ್ದರು. ಇದೀಗ ತನಿಖಾ ವರದಿ ಸಲ್ಲಿಸಿದ್ದು, ʼಮೇಲಾಧಿಕಾರಿ ಆದೇಶ ಇಲ್ಲದೆ, ಸುನೀತಾ ಅವರು ಖಾತೆ ಪುಸ್ತಕದಲ್ಲಿ ಹೆಸರು ಸೇರಿಸಿದ್ದರುʼ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಕ್ರಮಗೊಂಡಿರುವ ಪಾಲಿಕೆ ಆಯುಕ್ತರು ಅಮಾನತುಗೊಳಿಸಿ ಮುಂದಿನ
ತನಿಖೆಗೆ ಆದೇಶ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...