ದಾವಣಗೆರೆ | ಜಿಲ್ಲಾಸ್ಪತ್ರೆಯಲ್ಲಿ ಕ್ಯಾಂಟಿನ್‌ಗಳ ಅಕ್ರಮ ಟೆಂಡರ್; ತನಿಖೆಗೆ ಒತ್ತಾಯ 

Date:

Advertisements

ದಾವಣಗೆರೆ-ಚಿಗಟೇರಿ ಜಿಲ್ಲಾಸತ್ರೆಯಲ್ಲಿ ಅಕ್ರಮವಾಗಿ ಕೆಲವೇ ಕೆಲವು ವ್ಯಕ್ತಿಗಳ ಹೆಸರಿಗೆ ಕ್ಯಾಂಟಿನ್‌ಗಳ ಟೆಂಡರ್ ನೀಡಿ, ಸರ್ಕಾರಿ ಅಧಿಕಾರಿಗಳು ಕೆಲವರ ಹಣದ ಆಮಿಷಕ್ಕೆ ಬಲಿಯಾಗಿ ಭ್ರಷ್ಟತೆಯಲ್ಲಿ ತೊಡಗಿದ್ದಾರೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಭೀಮ್ ಸೇನೆಯ ದಾವಣಗೆರೆ ಜಿಲ್ಲಾಧ್ಯಕ್ಷ ಆರ್ ಸೂರ್ಯಪ್ರಕಾಶ್ ಒತ್ತಾಯಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಜಿಲ್ಲೆಯಲ್ಲಿ ಒಳರೋಗಿಗಳಿಗೆ, ಹೊರ ರೋಗಿಗಳಿಗೆ, ಆಸ್ಪತ್ರೆಯ ಸಿಬ್ಬಂದಿಗಳಿಗೆ ಅನುಕೂಲವಾಗುವ ಉದ್ದೇಶಕ್ಕಾಗಿ ಕ್ಯಾಂಟಿನ್‌ಗಳನ್ನು ತೆರೆಯಬೇಕೆಂಬ ನಿಯಮಾವಳಿಗಳಿದ್ದು, ಅದಕ್ಕೆ ಸರ್ಕಾರಿ ಆದೇಶದಂತೆ ಕೆಲವೊಂದು ಮಾನದಂಡಗಳಿವೆ. ಅಂಗವಿಕಲರಿಗೆ, ವಿಧವೆಯವರಿಗೆ, ಪರಿಶಿಷ್ಟ ಜಾತಿ/ಪಂಗಡದವರಿಗೆ ಮತ್ತು ಸಹಕಾರಿ ಸಂಘಗಳ ಮಾಲೀಕರಿಗೆ ವರ್ಷಕ್ಕೊಮ್ಮೆ ಟೆಂಡರ್ ಪ್ರಕಟಣೆ ಹೊರಡಿಸಿ ಸರ್ಕಾರದ ಸುತ್ತೋಲೆಯಂತೆ ಪ್ರತಿ ತಿಂಗಳು ಬಾಡಿಗೆ, ವಿದ್ಯುತ್ ದರ ಪಾವತಿಸಿಕೊಂಡು ಸರ್ಕಾರದ ಖಜಾನೆಗೆ ಹಣ ಜಮೆ ಮಾಡಿಸಬೇಕೆಂಬ ನಿಯಮ ಇದೆ” ಎಂದರು.

“ದಾವಣಗೆರೆ-ಚಿಗಟೇರಿ ಜಿಲ್ಲಾಸತ್ರೆಯ ಆಡಳಿತ ವಿಭಾಗದ ಸಿಬ್ಬಂದಿಗಳು ಸೇರಿದಂತೆ ತ್ರಿಮೂರ್ತಿಗಳು ತಮಗೆ ಬೇಕಾದ ಏಜೆನ್ಸಿಗಳಿಗೆ ಟೆಂಡರ್‌ ನೀಡುತ್ತಾರೆ. ಈ ಕುರಿತು ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಮಾಹಿತಿ ಕೇಳಿದರೆ ಜಿಲ್ಲಾಸತ್ರೆಯ ಅಧಿಕಾರಿಗಳು ʼಟೆಂಡರ್‌ದಾರರು ನ್ಯಾಯಾಲಯದ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ನಾವು ಏನೂ ಮಾಡಲು ಆಗುವುದಿಲ್ಲʼವೆಂದು ಹಾರಿಕೆ ಉತ್ತರ ನೀಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು

Advertisements

“ಟೆಂಡರ್‌ದಾರರು ಉತ್ತಮ ಜೀವನ ನಡೆಸುತ್ತಿದ್ದು, ಇವರಿಗೆ ಕ್ಯಾಂಟಿನ್‌ಗಳನ್ನು ತೆರೆಯುವುದು ಒಂದು ಉದ್ಯೋಗವಾಗಿದೆ. ಬೇರೆ ನಿರುದ್ಯೋಗಿಗಳಿಗೆ ಅವಕಾಶವಿಲ್ಲದಂತಾಗಿದೆ. ಈ ಕುರಿತು ಹಿಂದೆ ಇದ್ದಂತಹ ಟೆಂಡರ್‌ದಾರರು ಸಹಾಯಕ ಆಡಳಿತಾಧಿಕಾರಿಗಳ ಸಲಹೆಯ ಮೇರೆಗೆ ಸುಖಾ-ಸುಮ್ಮನೆ ಜಿಲ್ಲಾಸ್ಪತ್ರೆ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ದಾವೆಯ ಯಾವುದೇ ವಿವರಗಳಾಗಲಿ, ಕಾರಣಗಳನ್ನಾಗಲಿ ನೀಡದೆ ಕ್ಯಾಂಟಿನ್ ಆಡಳಿತಾಧಿಕಾರಿಗಳು ಇವರಿಗೆ ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇವರು ಪ್ರತಿ ತಿಂಗಳು ಮಾಮೂಲಿನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನುವ ಆರೋಪವಿದ್ದು, ಟೆಂಡರಿನ ಕಾರ್ಯಾದೇಶವು ಮುಗಿದಿದ್ದರೂ ಯಾವುದೇ ಹೊಸದಾಗಿ ಟೆಂಡ‌ರ್ ನಡೆಸುವ ಪ್ರಕಟಣೆಯಿಲ್ಲದಂತೆ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಇವರ ವಿರುದ್ಧ ಶಿಸ್ತುಕ್ರಮ ಜರುಗಿಸಿ, ಭ್ರಷ್ಟತೆಯಲ್ಲಿ ಪಾಲ್ಗೊಂಡಿರುವ ಆರೋಗ್ಯ ಆಡಳಿತಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?  ದಾವಣಗೆರೆ | ಜಿಲ್ಲಾಸ್ಪತ್ರೆಯ ಮೇಲ್ಛಾವಣಿ ಪದರ ಕುಸಿತ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಆರೋಪ

“ಒಂದು ವೇಳೆ ಈ ಒಂದು ದೂರನ್ನು ಪರಿಗಣಿಸದೆ ಇದ್ದಲ್ಲಿ ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿ ತನಿಖೆಗೆ ಒಳಪಡಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಕೆ ರಾಘವೇಂದ್ರ, ಎನ್ ಸಂತೋಷ, ಪ್ರಕಾಶ್, ಶ್ರೀನಿವಾಸ್, ಚಂದನ್ ಬಳ್ಳಾರಿ, ಚೇತನ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X