ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

Date:

ದಾವಣಗೆರೆ ಜಿಲ್ಲೆ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತದಲ್ಲಿ 17 ಕೋಟಿಗೂ ಹೆಚ್ಚು ಹಣದ ದುರುಪಯೋಗ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ, ಯಾವುದೇ ಕಾರಣಕ್ಕೆ ಸಮಾಪನೆ ತೆರವು ಮಾಡಬಾರದು ಎಂದು ಸಹಕಾರ ಸಂಘದ ಮಾಜಿ ನಿರ್ದೆಶಕರು ಹಾಗೂ ಸದಸ್ಯರು ಆಗ್ರಹಿಸಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಎಸ್ ಎನ್ ಚನ್ನಬಸಪ್ಪ, ಎಂ ಎಸ್ ಮಲ್ಲಿಕಾರ್ಜುನ, ಆರ್ ಎಸ್ ಗುರು ಶಾಂತಪ್ಪ ಜಂಟಿಯಾಗಿ ಮಾತನಾಡಿ, “2009ರಿಂದ 2018ರ ಅವಧಿಯಲ್ಲಿನ ಆಡಳಿತ ಮಂಡಳಿಯಲ್ಲಿ ಇದ್ದ ಕೆಲವರು ಆಡಳಿತದಲ್ಲಿ ಲೋಪ ಎಸಗಿದ್ದು, ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಈ ಕುರಿತು ಸಹಕಾರ ಇಲಾಖೆಯ ಅಧಿಕಾರಿಗಳಿಂದ ಕಲಂ 65, 68, 69ರ ಅಡಿಯಲ್ಲಿ ತನಿಖೆ ನಡೆಸಿ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತವನ್ನು ಸಮಾಪನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಅಂದಿನ ಆಡಳಿತ ಮಂಡಳಿಯಲ್ಲಿದ್ದ ಸದಸ್ಯರ ಅಭಿಪ್ರಾಯಗಳಿಗೆ ಕಿವಿಗೊಡದೆ ಏಕಪಕ್ಷೀಯವಾಗಿ ಏಕಸ್ವಾಮ್ಯವನ್ನು ಸಾಧಿಸುವ ಉದ್ದೇಶದಿಂದ ಆಮಿಷ ಒಡ್ಡಿ, ಬೆದರಿಸಿ ತಾನು ಹೇಳಿದಂತೆ ಮಾಡಿಸಿಕೊಂಡಿದ್ದಾರೆ. ಅಲ್ಲದೇ ಸಂಘದ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ” ಎಂದು ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? ಗದಗ | ರೈತ – ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಸಿಐಟಿಯು ಒತ್ತಾಯ

“ಸಹಕಾರ ಸಂಘದಲ್ಲಿ ರೈತರ ಚಟುವಟಿಕೆಗಳನ್ನು ಬಿಟ್ಟು ಇನ್ನಿತರ ಅಕ್ರಮ ಚಟುವಟಿಕೆ ಮಾಡುತ್ತಾ, ಒತ್ತಾಯಪೂರ್ವಕವಾಗಿ ನಿರ್ದೇಶಕರ ಸಹಿ ಪಡೆದು ಸಂಘದಲ್ಲಿ ದುರಾಡಳಿತ, ಹಣ ದುರುಪಯೋಗ ಮಾಡಿದ್ದಾರೆ. ಹಾಗಾಗಿ ಈ ಎಲ್ಲ ದುರುಪಯೋಗಗಳ ಕುರಿತು ಸಮಗ್ರ ತನಿಖೆ ನಡೆಸಿ, ರೈತರು, ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ನೂತನವಾಗಿ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತವನ್ನು ಆರಂಭಿಸಲು ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಎನ್‌ ಇ ಶಿವಕುಮಾರ್, ಎಂ ಆರ್ ಕುಬೇಂದ್ರಪ್ಪ, ಹೆಚ್ ಜಿ ಮರುಳಸಿದ್ದಪ್ಪ, ಆರ್ ಜಿ ನರೇಶ್‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...