ದಾವಣಗೆರೆ | ಕಾಂಗ್ರೆಸ್‌ ಅವಧಿಯಲ್ಲಿ ನಡೆದ ಅಕ್ರಮಕ್ಕೆ ಬಿಜೆಪಿಯನ್ನು ದೂರುವುದು ಸರಿಯಲ್ಲ: ಮಾಜಿ ಮೇಯರ್

Date:

Advertisements

ದಾವಣಗೆರೆ ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತಾವಧಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ನಾವು ಭೂ ಕಬಳಿಕೆಯ ವಿರುದ್ಧ ಇದ್ದೇವೆ. ಬೇಕಿದ್ದರೆ ಕಾಂಗ್ರೆಸ್‌ ಸರ್ಕಾರ ತನಿಖೆ ನಡೆಸಲಿ ಎಂದು ಬಿಜೆಪಿ ಮುಖಂಡ, ಮಾಜಿ ಮೇಯರ್ ಎಸ್‌.ಟಿ ವೀರೇಶ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ನಗರದ 23ನೇ ವಾರ್ಡ್‌ನ ಎಸ್.ಎಸ್‌ ಬಡಾವಣೆಯಲ್ಲಿ ಖಾಲಿ ನಿವೇಶನವನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆ ಬಗ್ಗೆ ಪರಿಶೀಲಿಸಿದಾಗ ಅಕ್ರಮವು ಇದೇ ವರ್ಷದ ಜೂನ್‌ನಲ್ಲಿ ನಡೆದಿದೆ. ಆ ವೇಳೆಗೆ ಕಾಂಗ್ರೆಸ್‌ ಅಧಿಕಾರದಲ್ಲಿತ್ತು” ಎಂದು ಹೇಳಿದ್ದಾರೆ.

ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್ ಮಾತನಾಡಿ, “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಕ್ರಮ ನಡೆದಿದೆ. ಆದರೆ, ಅವರು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ” ಎಂದರು.

Advertisements

“ಸರ್ಕಾರ ಅವರದ್ದೇ ಇರುವಾಗ ಅಕ್ರಮವಾಗಿದ್ದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ತರಾತುರಿಯಲ್ಲಿ ಪತ್ರಿಕಾಗೋಷ್ಠಿನಡೆಸಿದ್ದು ಏಕೆ? ಇದು ಜನರನ್ನು ಗೊಂದಲಕ್ಕೀಡು ಮಾಡುವ ಕೆಲಸವಾಗಿದೆ” ಎಂದರು.

“ಮಾಜಿ ಮೇಯರ್ ಬಿ.ಜಿ ಅಜಯ್ ಕುಮಾರ್‌ ಮಾತನಾಡಿ, “ದಾವಣಗೆರೆ ಉತ್ತರ ಹಾಗೂ ದಕ್ಷಿಣದಲ್ಲಿ ಆಶ್ರಯ ಮನೆ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಎಸ್.ಎಸ್ ಮಲ್ಲಿಕಾರ್ಜುನ್ ಅವರು ಆರೋಪ ಮಾಡಿದ್ದಾರೆ. ದಕ್ಷಿಣದಲ್ಲಿ ಕಾಂಗ್ರೆಸ್ ಶಾಸಕರೇ ಇದ್ದು, ಅವರ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ಅವರೇ ಹೇಳಿದಂತಲ್ಲವೇ” ಎಂದರು.

ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ರೇಖಾ ಗಂಡಗಾಳೆ, ಕೆ.ಎನ್ ವೀರೇಶ್, ಸೋಗಿ ಶಾಂತಕುಮಾರ್, ಎಲ್.ಡಿ ಗೋಣೆಪ್ಪ, ಶಿವಾನಂದ್‌, ಪಕ್ಷದ ಮುಖಂಡರಾದ ಸುರೇಶ್‌,ನಾಗಪ್ಪಶ್ರೀನಿವಾಸ್ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X