ದಾವಣಗೆರೆ | ಒಳಮೀಸಲಾತಿಗೆ ಆಯೋಗ ರಚನೆ; ಮತ್ತೊಂದು ಮೂರ್ಖ ಭರವಸೆ: ಮಾದಿಗ ಜಾಗೃತಿ ಸಮಿತಿ

Date:

Advertisements

ಸುಪ್ರೀಂ ಕೋರ್ಟ್ ನ ಸೂಚನೆಯಂತೆ, ಒಳ ಮೀಸಲಾತಿಯನ್ನು ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಜಾಗೃತಿ ಸಮಿತಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿತು.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಮುಖಂಡರು, ಒಳಮಿಸಲಾತಿಗಾಗಿ ಮಾದಿಗ ಸಮುದಾಯ ಕಳೆದ 30 ವರ್ಷಗಳಿಂದ ಅನೇಕ ಹೋರಾಟ ಮಾಡುತ್ತಾ ಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಹೋರಾಟದ ಫಲವಾಗಿ 2004 ರಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದ ನೇತೃತ್ವದ ಎಸ್.ಎಂ. ಕೃಷ್ಣ ಸರ್ಕಾರ ಹೋರಾಟದ ಮನವಿಗೆ ಸ್ಪಂದಿಸಿ ಹೈಕೋರ್ಟನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಎ.ಜೆ. ಸದಾಶಿವ ರವರ (ಆಯೋಗ) ರಚನೆ ಮಾಡಿ ನೂರಾರು ಕೋಟಿ ವ್ಯಯಮಾಡಿ ನಿಕಟವಾದ ವರದಿಯನ್ನು ತಯಾರು ಮಾಡಿತು ಎಂದರು.

ನಂತರ ಸದಾನಂದ ಗೌಡರ ಸರ್ಕಾರ ವರದಿಯನ್ನು ಅನುಷ್ಠಾನಗೊಳಿಸಲು ಪ್ರಯತ್ನಪಟ್ಟಿತು. ನಂತರ ಅನೇಕ ಸಮಸ್ಯೆಗಳ ನೆಪವೊಡ್ಡಿ ಸದಾಶಿವ ಆಯೋಗದ ವರದಿ ಮೂಲೆ ಗುಂಪಾಯಿತು. ಮತ್ತು ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಸಮುದಾಯದ ನ್ಯಾಯಕ್ಕೋಸ್ಕರ ಮಾಧುಸ್ವಾಮಿ ಆಯೋಗವನ್ನು ರಚನೆ ಮಾಡಿತ್ತು. ಈ ಆಯೋಗವು ವರದಿಯ ಎಲ್ಲಾ ದತ್ತಾಂಶಗಳನ್ನು ಕೂಲಂಕುಶವಾಗಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಅದರ ಫಲವಾಗಿ ಬಸವರಾಜ ಬೊಮ್ಮಾಯಿ ರವರ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 2% ಹೆಚ್ಚಿಸುವುದರೊಂದಿಗೆ ಮಾದಿಗ ಸಮುದಾಯಕ್ಕೆ ಶೇಕಡಾ 6%, ಛಲವಾದಿ ಸಮುದಾಯಕ್ಕೆ 5.5%, ಕೊರಚ,ಲಂಬಾಣಿ, ಭೋವಿ ಜಾತಿಗಳಿಗೆ 4%, ಇತರೆ 1.5% ಸಣ್ಣ ಮಟ್ಟ ಸಮುದಾಯಗಳಿಗೆ ನ್ಯಾಯ ಸಮ್ಮತವಾಗಿ ಮೀಸಲಾತಿಯನ್ನು ಹಂಚಿಕೆ ಮಾಡಿತ್ತು ಎಂದು ತಿಳಿಸಿದರು.

Advertisements
ದಾವಣಗೆರೆ

ಆದರೆ ಸಮಾಜವಾದಿ ಹಿನ್ನೆಲೆಯಿಂದ ಬಂದಿರುವಂತಹ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತೇನೆಂದು ಹೇಳುತ್ತಾ ಬಂದಿರುವ ಸಿದ್ದರಾಮಯ್ಯ ಸರ್ಕಾರವನ್ನು ನಮ್ಮ ಸಮುದಾಯವು ಹಿಂದಿನಿಂದಲೂ ಬೆಂಬಲಿಸಿತ್ತು. ಆದರೆ ನಮ್ಮ ಬೇಡಿಕೆಯನ್ನು ಅತಿ ಲಘುವಾಗಿ ತೆಗೆದುಕೊಂಡಿದ್ದರಿಂದ ನಮ್ಮ ಸಮುದಾಯ ಉಗ್ರವಾಗಿ ಖಂಡಿಸುತ್ತದೆ. ಈಗಲೂ ಸಹ ಮೂರು ಕ್ಷೇತ್ರಗಳ ಉಪ ಚುನಾವಣಾ ಸಂದರ್ಭದಲ್ಲಿಯೂ ಮೂರು ತಿಂಗಳ ಸಮಯದಲ್ಲಿ ಹೊಸದಾಗಿ ಆಯೋಗ ರಚನೆ ಮಾಡಿ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳುತ್ತಿರುವುದು ಈ ಸಮುದಾಯಕ್ಕೆ ಮಾಡುತ್ತಿರುವ ಮತ್ತೊಂದು ಮೂರ್ಖ ಭರವಸೆ ಎಂದುಕೊಳ್ಳಬೇಕಾಗುತ್ತದೆ ಕಿಡಿಕಾರಿದರು.

ಇದನ್ನು ಓದಿದ್ದೀರಾ? ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಆದ್ದರಿಂದ ಸಮಾಜವಾದಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಕಷ್ಟದ ಸಂದರ್ಭದಲ್ಲಿ ಅಹಿಂದ ಸಮುದಾಯವನ್ನು ಜಪಿಸುವ ನೀವು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯ ಈ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ ಸಾಮಾಜಿಕವಾಗಿ ಶೋಷಣೆಗೊಳಗಾಗಿರುವ ಈ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಈ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾದಿಗ ಜಾಗೃತಿ ಸಮಿತಿಯ ಆಲೂರು ನಿಂಗರಾಜ್, ಗುಡ್ಡಪ್ಪ, ಜಯಪ್ರಕಾಶ್ ಎಂ, ಚಂದ್ರಪ್ಪ, ಜಿ ಎಚ್ ನಾಗರಾಜ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎಂ. ಹಾಲೇಶ್, ಹೆಗ್ಗೆರೆ ರಂಗಪ್ಪ, ರವಿಕುಮಾರ್, ಶಿವಣ್ಣ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X