ದಾವಣಗೆರೆ | ಮರಕುಂಬಿ ಪ್ರಕರಣದ ತೀರ್ಪು ಸ್ವಾಗತಾರ್ಹ: ದಸಂಸ ಕುಂದವಾಡ ಮಂಜುನಾಥ

Date:

Advertisements

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಿ ಚಂದ್ರಶೇಖರ್ ಅವರು ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾವಣಗೆರೆ ಘಟಕ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷದ ಪ್ರಕರಣದಲ್ಲಿ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,000 ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿರುವುದು ದಲಿತ ದೌರ್ಜನ್ಯ ತಡೆಗೆ ಒಂದು ಉತ್ತಮ ಹೆಜ್ಜೆಯೆಂದೇ ಹೇಳಬಹುದು” ಎಂದು ಹೇಳಿದರು.‌

ದಸಂಸ ಮಂಜುನಾಥ 1

“2014ರ ಆಗಸ್ಟ್ 28ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ “ಪವರ್” ಸಿನಿಮಾ ನೋಡಲು ಟಿಕೆಟ್ ಪಡೆಯುವ ವೇಳೆ ದಲಿತರು ಮತ್ತು ಸವರ್ಣೀಯರ ನಡುವೆ ಜಗಳವಾಗಿತ್ತು. ಗ್ರಾಮಕ್ಕೆ ಸವರ್ಣೀಯರನ್ನು ಕರೆದುಕೊಂಡು ಬಂದು ಅದೇ ಗ್ರಾಮದ ಮಾದಿಗ ಸಮುದಾಯದ ಜನರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಲ್ಲದೆ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು. ಇದೀಗ ಕೊಪ್ಪಳದ ಸೆಷನ್ಸ್ ನ್ಯಾಯಾಧೀಶರಾದ ಚಂದ್ರಶೇಖರ್ ಅವರು ಇಡೀ ದೇಶವೇ ತಿರುಗಿ ನೋಡುವಂತಹ ತೀರ್ಪು ನೀಡಿದ್ದಾರೆ. ಇತಿಹಾಸದ ಪುಟದಲ್ಲಿ ಅಳಿಸಲಾಗದೆ ಉಳಿದುಕೊಳ್ಳುವ ತೀರ್ಪು ಇದಾಗಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಮೀಸುತ್ತಿರುವ ದೀಪಾವಳಿ; ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಮುಂಜಾಗೃತೆ

“ಜಾತಿ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದ್ದು, ದೇಶದಲ್ಲಿ ಅಪರೂಪದ ಪ್ರಕರಣವಾಗಿದೆ. ಗಂಗಾವತಿ ತಾಲೂಕಿನ ಮರಕುಂಬಿ ಪ್ರಕರಣಕ್ಕಿಂತ ಕ್ರೂರವಾಗಿ ಈ ನಾಡಿನಲ್ಲಿ ಈ ಹಿಂದೆ ನಡೆದಿದ್ದರೂ ಕೂಡ ಶೇ.99 ಪ್ರಕರಣಗಳಲ್ಲಿ ಅಪರಾಧಿಗಳು ಶಿಕ್ಷೆಯಿಂದ ಪಾರಾಗಿರುವ ಸಂದರ್ಭಗಳನ್ನೂ ಕೂಡಾ ನಾವು ನೋಡಿದ್ದೇವೆ. ಘನ ಘೋರವಾದ ಕಂಬಾಲಪಲ್ಲಿಯ ಪ್ರಕರಣ ಕೂಡ ಇದೆ. ದಲಿತರ ಸಜೀವ ದಹನ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗಲಿಲ್ಲ. ದಲಿತರ ಮೇಲೆ ಎಂತಹದೇ ದೌರ್ಜನ್ಯ ನಡೆದರೂ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಬಹುದೆನ್ನುವ ಅಭಿಪ್ರಾಯ ಮೂಡಿದ ಸನ್ನಿವೇಶದಲ್ಲಿ ಕೊಪ್ಪಳ ಜಿಲ್ಲಾ ನ್ಯಾಯಾಲಯದ ತೀರ್ಪು ಬಹಳ ಮಹತ್ವವನ್ನು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ವತಿಯಿಂದ ನ್ಯಾಯಾಂಗಕ್ಕೆ ಮತ್ತು ನ್ಯಾಯಾಧೀಶರಿಗೆ ಅಭಿನಂದನೆಗಳು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X