ದಾವಣಗೆರೆ | ಬಜೆಟ್‌ನಲ್ಲಿ ಬಿಸಿಯೂಟ ತಯಾರಕರ ವೇತನ 6,000 ರೂ. ಹೆಚ್ಚಳಕ್ಕೆ ಒತ್ತಾಯ

Date:

Advertisements

ರಾಜ್ಯ ಸರ್ಕಾರ 2023ರ ಜುಲೈ ತಿಂಗಳಿನಲ್ಲಿ ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರ ವೇತನವನ್ನು ₹6000ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಎಐಟಿಯುಸಿ ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ ದಾವಣಗೆರೆ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ಪ್ರಸ್ತುತ ವರ್ಷದ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭಲ್ಲಿ ಎಐಟಿಯುಸಿ ನಾಯಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಚರ್ಚಿಸಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಆರನೇ ಗ್ಯಾರಂಟಿಯಾಗಿ ಬಿಸಿಯೂಟ ತಯಾರಕರಿಗೆ ಈಗಿರುವ ವೇತನಕ್ಕೆ ಬದಲಾಗಿ ₹6000ಕ್ಕೆ ಹೆಚ್ಚಿಸಲಾಗುವುದು ಎಂದು ಬೆಳಗಾವಿಯ ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಘೋಷಿಸಿದ್ದರು” ಎಂದರು.

“ಪ್ರಸ್ತುತದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ತಮ್ಮ ಪ್ರಣಾಳಕೆಯಲ್ಲಿ ಆರನೇ ಗ್ಯಾರಂಟಿಯಾಗಿ ಘೋಷಿಸಿದಂತೆ 2023ರ ಜುಲೈ ತಿಂಗಳಲ್ಲಿ ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ₹6,000ಕ್ಕೆ ವೇತನವನ್ನು ಹೆಚ್ಚಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಿರಿಯ ದೇವದಾಸಿ ಮಹಿಳೆಯರ ಪಿಂಚಣಿ ಹೆಚ್ಚಳಕ್ಕೆ ಒತ್ತಾಯ

ಬಿಸಿಯೂಟ ತಯಾರಕ ಫೆಡರೇಶನ್ ರಾಜ್ಯ ಕಾರ್ಯದರ್ಶಿ ಆವರಗೆರೆ ಚಂದ್ರು, ಗದಿಗೇಶ್ ಪಾಳೇರ್, ಸದಸ್ಯರುಗಳಾದ
ಬಿ ಸಿ ಮಂಜುಳಾ, ಇಂದ್ರಮ್ಮ, ಶಾರದಮ್ಮ, ಪಾರ್ವತಮ್ಮ, ಹುಲಿಗಮ್ಮ, ಸರೋಜಾ, ಬಸಮ್ಮ, ವಿಜಯಮ್ಮ, ದೇವಿ ಕುಮಾರಿ ಸೇರಿದಂತೆ ಇತರರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X