ದಾವಣಗೆರೆ | ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು; ಕಿಟಕಿ ಗಾಜು ಹಾನಿ

Date:

Advertisements

ಧಾರವಾಡದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು, ರೈಲಿನ ಸಿ ಕೋಚ್‌ನ ಗಾಜಿನ ಕಿಟಕಿಗೆ ಹಾನಿಯಾಗಿದೆ.

ದಾವಣಗೆರೆ ನಗರದ ಕರೂರು-ದೇವರಾಜ ಅರಸ್ ಬಡಾವಣೆ ಮಾರ್ಗ ಮಧ್ಯೆ ಜಿಎಂಐಟಿ ಕ್ಯಾಂಪಸ್ ಹಿಂಭಾಗ ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ವಂದೇ ಭಾರತ್ ರೈಲು ಕರೂರು ಗೂಡ್ಸ್ ಶೆಡ್ ಕಡೆಯಿಂದ ದೇವರಾಜ ಅರಸು ಬಡಾವಣೆ ಮಾರ್ಗವಾಗಿ ಜಿಎಂಐಟಿ ಕ್ಯಾಂಪಸ್ ಹಿಂಭಾಗ ಚಲಿಸುತ್ತಿರುವ ವೇಳೆ ರೈಲಿನ ಎಡಬದಿಗೆ ಯಾರೋ ಕಿಡಿಗೇಡಿಗಳು ಬಲವಾಗಿ ಕಲ್ಲು ಹೊಡೆದಿದ್ದಾರೆ. ಕಲ್ಲೇಟಿನಿಂದ ರೈಲಿನ 3 ಹಾಗೂ 4ನೇ ಬೋಗಿಯ ಗಾಜು ಹೊರಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದಂತೆ ರೈಲ್ವೆ ಅಧಿಕಾರಿಗಳು ಕಿಟಕಿ ಪರಿಶೀಲನೆ ನಡೆಸಿ ಬಳಿಕ ದಾವಣಗೆರೆ ರೈಲ್ವೆ ಪೊಲೀಸ್ ಇಲಾಖೆಗೆ ಈ ಬಗ್ಗೆ ದೂರು ನೀಡಿದ್ದಾರೆ.

Advertisements

ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸ್ ಸಿಬ್ಬಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯಿಂದ ಪ್ರಯಾಣಿಕರು ಕೆಲಕಾಲ ಆತಂಕಗೊಂಡ ದೃಶ್ಯ ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ಚಾಲನೆ

ಬೆಂಗಳೂರು ಧಾರವಾಡ ಮಧ್ಯೆ ಜೂನ್ 27 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಿದ ಕೆಲವೇ ದಿನಗಳಲ್ಲಿ ಈ ಘಟನೆ ಜರುಗಿದ್ದು, ರೈಲ್ವೆ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

“ರೈಲ್ವೆ ಸಾರ್ವಜನಿಕ ಇಲಾಖೆಯಾಗಿದ್ದು ರೈಲ್ವೆ ಸುರಕ್ಷತೆ ಕಾಯಿದೆ ಪ್ರಕಾರ ರೈಲ್ವೆ ಆಸ್ತಿಗಳಿಗೆ ಹಾನಿ ಮಾಡುವುದು ಶಿಕ್ಷಾರ್ಹ ಅಪರಾಧ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X