ದಾವಣಗೆರೆ | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು: ಮಹಾಂತೇಶ್ ಅಂಗಡಿ

Date:

ಬಸವಣ್ಣನವರಿಗೆ ಅಪಮಾನವಾಗುವ ಮಾತುಗಳನ್ನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಂಗಡಿ ಎಚ್ಚರಿಕೆ ನೀಡಿದರು.

- Advertisement -

ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “12ನೇ ಶತಮಾನದ ಕಾಯಕ ಯೋಗಿ, ನುಡಿದಂತೆ ನಡೆದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಈ ನೆಲದ ಅಸ್ಮಿತೆ. ಕನ್ನಡ ನೆಲದ ಅಸ್ಮಿತೆ ಹಾಗೂ ಸಕಲ ಜೀವಾತ್ಮರಿಗೂ ಲೇಸನ್ನು ಬಯಸಿ, ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಾಮಾಜಿಕ ಸುಧಾರಣೆ ಮಾಡಿದವರು. ಕಳೆದ ಕೆಲ ದಿನಗಳ ಹಿಂದೆ ಶಾಸಕ ಬಸವನಗೌಡ ಯತ್ನಾಳ್ ಬಸವಣ್ಣನವರನ್ನು ಅಪಮಾನಗೊಳಿಸುವ ನಿಟ್ಟಿನಲ್ಲಿ ನೀಡಿರುವ ಹೇಳಿಕೆಯನ್ನು ನಾವು ಖಂಡಿಸುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಶಾಸಕ ಯತ್ನಾಳ್ ಬಹಿರಂಗವಾಗಿ ತನ್ನ ಹೇಳಿಕೆಗೆ ಕ್ಷಮೆ ಕೇಳದೇ ಹೋದರೆ ನಾವು ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ. ಎಂಬುದನ್ನು ಗಮನಕ್ಕೆ ತರುತ್ತೇವೆ” ಎಂದು ಎಚ್ಚರಿಸಿದರು.

“ಚಂದ್ರಶೇಖರ ಶ್ರೀ, ಪೇಜಾವರ ಶ್ರೀಗಳ ಇತ್ತೀಚಿನ ಹೇಳಿಕೆಗಳೂ ಕೂಡ ಸಂವಿಧಾನ ವಿರೋಧಿಯಾಗಿವೆ. ಅವು ಒಪ್ಪತಕ್ಕದ್ದಲ್ಲ. ಭಾರತದ ಸಂವಿಧಾನ, ಕಾನೂನಿನ ಮುಂದೆ ಯಾವುದೇ ಮಠಾಧೀಶರಾಗಲಿ, ರಾಜಕಾರಣಿಗಳಾಗಲಿ, ಬಂಡವಾಳಶಾಹಿಗಳಾಗಲಿ, ಶ್ರೀಮಂತರಾಗಲಿ ದೊಡ್ಡವರಲ್ಲ. ನಮ್ಮ ಸಂವಿಧಾನ ಎಲ್ಲರಿಗೂ ಒಂದೇ ಹಕ್ಕು ಕಲ್ಪಿಸಿಕೊಟ್ಟಿದೆ. ಹೀಗಾಗಿ ಸಮಾಜದ ಶಾಂತಿಗೆ, ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ರೀತಿಯಲ್ಲಿ ಯಾರೇ ನಡೆದುಕೊಂಡರೂ ನಾವು ಅದನ್ನು ಸೈದ್ಧಾಂತಿಕ ನೆಲೆಯಲ್ಲಿ ಖಂಡಿಸುತ್ತೇವೆ. ಸಂವಿಧಾನಕ್ಕೆ ಅವಮಾನವಾಗುವ ನಿಟ್ಟಿನಲ್ಲಿ ಯಾರೇ ಹೇಳಿಕೆ ನೀಡಿದರೂ ದೇಶದ್ರೋಹದ ಅಡಿಯಲ್ಲಿ ಬಂಧಿಸುವ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡ ವಿದ್ಯಾರ್ಥಿಗಳಿಗೆ ಯಶಸ್ಸು ಸಾಧ್ಯ: ಪ್ರೊ. ಬಿ ಎಸ್ ಶರ್ಫುದ್ದೀನ್

ಸುದ್ದಿಗೋಷ್ಠಿಯಲ್ಲಿ, ಶರಣ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಎಸ್ ಬಿ ರುದ್ರಗೌಡ ಗೋಪನಾಳ್, ಜಾಗೃತ ಭಾರತ ವಿಚಾರ ವೇದಿಕೆ ಸಂಚಾಲಕ ಕೆ ಎ ಓಬಳೇಶ್, ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಕುಸುಮ ಲೋಕೇಶ್, ಉಪಾಧ್ಯಕ್ಷೆ ವಿನೋದ ಅಜಗಣ್ಣನವರ, ಹಡಪದ ಅಪ್ಪಣ್ಣ ಸಮಾಜ ಜಿಲ್ಲಾಧ್ಯಕ್ಷ ಶಶಿಧರ್ ಬಸಾಪುರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...