ದಾವಣಗೆರೆ | ಶ್ರೀಕಾಂತ್ ಪೂಜಾರಿ ಬಂಧನಕ್ಕೆ ವಿರೋಧ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧಾರ

Date:

Advertisements

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕರಸೇವಕರು ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿರುವುದು ಹಾಗೂ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ವಿರೋಧಿಸಿ ಜನವರಿ 8ರಂದು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಇದು ಜಿಲ್ಲಾ ಬಿಜೆಪಿ ಘಟಕದಿಂದ ಆಯೋಜಿಸಿರುವ ಪ್ರತಿಭಟನೆಯಲ್ಲ. ಹಿಂದೂಗಳು, ಕರವೇ ಸೇವಕರು, ಶ್ರೀರಾಮಭಕ್ತರು ನಡೆಸುತ್ತಿರುವ ಹೋರಾಟ. ಬೆಳಿಗ್ಗೆ‌ 10.30ಕ್ಕೆ ನಗರದ ಪಿ ಜೆ ಬಡಾವಣೆಯ ಶ್ರೀರಾಮ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಹೇಳಿದರು.

“ಕಾರ್ಯಕ್ರಮಕ್ಕೆ ಹಿಂದೂ ಬಾಂಧವರು, ಕರ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡು ಪ್ರಭು ಶ್ರೀರಾಮನ ಕೃಪೆಗೆ ಪಾತ್ರರಾಗಬೇಕು” ಎಂದು ಕರೆ ನೀಡಿದರು.

Advertisements

“ನಾವು ಭಯೋತ್ಪಾದಕರಲ್ಲ, ಶಾಂತಪ್ರಿಯರು. ಹಿಂದೂಗಳು ಕಾನೂನು ಕೈಗೆತ್ತಿಕೊಳ್ಳದೇ ಶಾಂತಯುತವಾಗಿ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ. ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳಿ. ಪ್ರಭು ಶ್ರೀರಾಮಚಂದ್ರ ಒಳ್ಳೆಯದು ಮಾಡುತ್ತಾನೆ. ಬೆಳಿಗ್ಗೆ 10. 30ಕ್ಕೆ ಶ್ರೀರಾಮಮಂದಿರದಿಂದ ಭಜನೆ, ಘೋಷಣೆ ಮೂಲಕ ಮೆರವಣಿಗೆ ನಡೆಸುತ್ತೇವೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಪಾಲ್ಗೊಳ್ಳಬೇಕು. ತಾಕತ್ತಿದ್ದರೆ ನಮ್ಮನ್ನು ಸರ್ಕಾರ ಬಂಧಿಸಲಿ” ಎಂದು ಸವಾಲು ಹಾಕಿದರು.

“ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದ್ದು, ತಾಲಿಬಾನ್ ಆಡಳಿತ ನಡೆಸುತ್ತಿದೆ. ತುಘಲಕ್ ದರ್ಬಾರ್ ಸರ್ಕಾರ ಇದು. ಸಿದ್ದರಾಮಯ್ಯನವರು ಕರವೇ ಸೇವಕರು, ಶ್ರೀರಾಮನ ಭಕ್ತರು ಕ್ರಿಮಿನಲ್ಸ್ ಅಂತಾರೆ. ಡಿ ಕೆ ಶಿವಕುಮಾರ್ ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆಕೋರರನ್ನು ಅಮಾಯಕರು, ಸಹೋದರರು ಎನ್ನುತ್ತಾರೆ. ರಾಜ್ಯದಲ್ಲಿ ಇಂಥ ಕೆಟ್ಟ ಸರ್ಕಾರವಿದೆ. ಹಿಂದೂಗಳ ವಿರೋಧಿ ಸರ್ಕಾರವಾಗಿದ್ದು, ಇದು ತೊಲಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನ ನೀಡುವಂತೆ ಆಗ್ರಹ

“ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಹೋರಾಟ ತೀವ್ರ ಗೊಳಿಸುತ್ತೇವೆ. ರೈತರಿಗೆ ಕೇವಲ 105 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದ್ದಾರೆ. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳಿಗೆ ನೀಡಲು ಹಣವಿಲ್ಲ. ಮುಸ್ಲಿಮರಿಗೆ ನೀಡಲು ಹಣವಿದೆ. ಇದು ಯಾವ ನ್ಯಾಯ. ರೈತರಿಗೆ ಪರಿಹಾರವಾಗಿ ಕೂಡಲೇ ಹಣ ಬಿಡುಗಡೆ ಮಾಡಬೇಕು” ಎಂದು ರೇಣುಕಾಚಾರ್ಯ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X