ದಾವಣಗೆರೆ | ಮೊಹರಂ ಹಬ್ಬದ ಪೀರಾ ದೇವರ ಮೂರ್ತಿಯನ್ನೇ ಕಳವುಗೈದ ದುರುಳರು!

Date:

ಕಳ್ಳತನ, ದರೋಡೆ ಮತ್ತು ಪಿಕ್ ಪಾಕೆಟ್‌ನಂತಹ ಪ್ರಕರಣಗಳು ಸಾಮಾನ್ಯವಾಗಿ ನಾವು ಕೇಳುವುದುಂಟು. ಅದರಲ್ಲೂ ಕೆಲವು ಕಳ್ಳರು, ದರೋಡೆಕೋರರು ದೇವರುಗಳ, ದೇವಸ್ಥಾನದ, ಮಸೀದಿ ಮಂದಿರಗಳ ಹಣದ ಪೆಟ್ಟಿಗೆ, ಹಣದ ಬಂಡಾರ ಆಭರಣಗಳನ್ನು ಕದ್ದೊಯ್ಯುವ ಪ್ರಕರಣಗಳು ವರದಿಯಾಗುತ್ತದೆ. ಆದರೆ, ಈ ಒಂದು ಪ್ರಕರಣದಲ್ಲಿ ಪೂಜೆ ಮಾಡಲು ಇಟ್ಟಿದ್ದ ದೇವರ ಮೂರ್ತಿಯನ್ನೇ ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಹಿಂದೂ-ಮುಸ್ಲಿಮರಿಬ್ಬರೂ ಭಾವೈಕ್ಯತೆಯಿಂದ ಜೊತೆಗೂಡಿ ಆಚರಿಸುವ ಮೊಹರಂ ಹಬ್ಬದ ಸಂದರ್ಭದಲ್ಲಿ ಪೂಜೆಗೆ ಇಡಲಾಗುವ ಪೀರಾ ದೇವರ ಮೂರ್ತಿಯನ್ನೇ ಕದ್ದೊಯ್ದಿರುವ ಬಗ್ಗೆ ವರದಿಯಾಗಿದೆ. ದಾವಣಗೆರೆ ನಗರದ ಸಮೀಪದ ಹಳೇ ಕುಂದವಾಡ ಗ್ರಾಮದಲ್ಲಿ ಈ ಬೆಳವಣಿಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕುಂದವಾಡ ಗ್ರಾಮದ ಗ್ರಾಮಸ್ಥರು ಬಹಳ ಹಿಂದಿನಿಂದಲೂ ಮೊಹರಂ ಹಬ್ಬವನ್ನು ಭಾವೈಕ್ಯತೆಯಂತೆ ಆಚರಣೆ ಮಾಡುತ್ತಿದ್ದಾರೆ. ಈ ಬಾರಿ ಕೂಡ ವಿಶೇಷವಾಗಿ ಆಚರಣೆಗೆ ಗ್ರಾಮಸ್ಥರು ಸಜ್ಜಾಗಿದ್ದರು. ಆದರೆ, ಇದೀಗ ಹಬ್ಬಕ್ಕೆ ಒಂದು ವಾರ ಬಾಕಿ ಉಳಿದಿದ್ದು, ಯಾರೋ ಕಿಡಿಗೇಡಿಗಳು ಪೆಟ್ಟಿಗೆ ಒಡೆದು ದೇವರನ್ನೇ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.

ವರ್ಷಕ್ಕೆ ಒಂದು ಬಾರಿ ಮೊಹರಂ ಹಬ್ಬದ ಸಂದರ್ಭದಲ್ಲಿ ಪೀರಾ ದೇವರನ್ನು ಹೊರ ತೆಗೆದು ಐದು ದಿನಗಳ ಕಾಲ ಗ್ರಾಮದ ರಾಜಬೀದಿಯಲ್ಲಿ ಪ್ರತಿಷ್ಠಾಪಿಸಿ ವಿಶೇಷವಾಗಿ ಹಬ್ಬವನ್ನು ಆಚರಣೆ ಮಾಡುವುದು ಇಲ್ಲಿನ ಪದ್ಧತಿ. ಆದರೆ ಇದೀಗ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಪೆಟ್ಟಿಗೆಯಲ್ಲಿ ಇದ್ದಂತಹ ಮೊಹರಂ ಹಬ್ಬದ ಅಲಿ, ಪೀರಾ ದೇವರ ಮೂರ್ತಿಯನ್ನೇ ಯಾರೋ ಖದೀಮರು ಕದ್ದೊಯ್ದಿದ್ದಾರೆ.

ಮೊಹರಂ 1

ಪೆಟ್ಟಿಗೆಯಲ್ಲಿದ್ದ ಐದು ದೇವರ ಮೂರ್ತಿಯ ಪೈಕಿ ಎರಡು ದೇವರ ಮೂರ್ತಿಯನ್ನು ಮಾತ್ರ ಖದೀಮರು ಕದ್ದೊಯ್ದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ದೇವರ ಪತ್ತೆ ಮಾಡಲು ಹುಡುಕಾಟ ಆರಂಭಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ನೊಂದಿಗೆ ಮಾತನಾಡಿದ ದಸಂಸದ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ, “ಬಹಳ ಹಿಂದಿನಿಂದಲೂ ಸಾಮರಸ್ಯದಿಂದ ಊರಿನ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಮೊಹರಂ ಹಬ್ಬವನ್ನು ಆಚರಿಸುತ್ತಾ ಬಂದಿದ್ದೆವು. ಆದರೆ ಈಗ ದೇವರನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಮ್ಮೆಲ್ಲರಿಗೂ ಆಶ್ಚರ್ಯ ಮತ್ತು ದಿಗ್ಭ್ರಾಂತಿಯನ್ನು ಉಂಟು ಮಾಡಿದೆ. ಮೊಹರಂ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ದೇವರ ವಿಗ್ರಹವನ್ನು ಪತ್ತೆ ಮಾಡಿ ಊರಿನಲ್ಲಿ ಮೊಹರಂ ಹಬ್ಬ ಮತ್ತೆ ಹಿಂದಿನಂತೆ ಎಲ್ಲರ ಸಾಮರಸ್ಯ ಮತ್ತು ಸಹಬಾಳ್ವೆಯಿಂದ ನಡೆಸಿಕೊಂಡು ಹೋಗಲು ಕ್ರಮ ಕೈಗೊಳ್ಳಬೇಕಾಗಿದೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ನೊಂದಿಗೆ ಪ್ರತಿಕ್ರಿಯಿಸಿದ ಹಳೆ ಕುಂದವಾಡದ ಮೊಹರಂ ಆಚರಣೆ ಸಮಿತಿಯ ಮುಖಂಡ ನಬಿ, “ಕಳೆದ ಮಂಗಳವಾರ ಅಲಿ ಮತ್ತು ಪೀರಾ ದೇವರುಗಳು ಕಳವಾಗಿರುವ ಸಂಶಯವಿದೆ. ಐದು ದೇವರ ಮೂರ್ತಿಗಳನ್ನು ಒಟ್ಟಿಗೆ ಇಟ್ಟಿದ್ದು, ಅದರಲ್ಲಿ ಮುಖ್ಯವಾದ ಅಲಿ ಮತ್ತು ಪೀರಾ ದೇವರ ಮೂರ್ತಿ ಕಳವಾಗಿವೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವ್ಯಕ್ತಿಯೊಬ್ಬರ ಮೇಲೆ ನಮಗೆ ಅನುಮಾನವಿದ್ದು, ಅವರ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗಿದೆ. ಆದರೆ ಪೊಲೀಸರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಲಿಂಗಸುಗೂರು | ಭಕ್ತರ ವೇಷದಲ್ಲಿ ಬಂದು ಮಠದಿಂದ ₹40 ಲಕ್ಷ ಮೌಲ್ಯದ ಸೊತ್ತು ದರೋಡೆಗೈದ ಕಳ್ಳರು!

“ಈ ಬಗ್ಗೆ ಕೇಳಿದರೆ ಬೆರಳಚ್ಚು, ಇತರ ಅಧಿಕಾರಿಗಳು ಎಫ್‌ಎಸ್‌ಎಲ್‌ನಿಂದ ಬರಬೇಕಾಗಿದೆ. ಬರಲು ಒಂದು ವಾರ ಹಿಡಿಯುತ್ತದೆ ಎನ್ನುತ್ತಿದ್ದಾರೆ. ಆದರೆ ಇನ್ನು ಕೆಲವೇ ಆರೇಳು ದಿನಗಳಲ್ಲಿ ಮೊಹರಂ ಹಬ್ಬವಿದ್ದು , ದೇವರ ಮೂರ್ತಿ ಇಲ್ಲದೆ ಮೊಹರಂ ಹಬ್ಬವನ್ನು ಹೇಗೆ ಮಾಡುವುದು? ಹಬ್ಬ ಮುಗಿದ ನಂತರ ದೇವರುಗಳ ಪತ್ತೆಗೆ ಕ್ರಮ ಕೈಗೊಂಡರೆ ನಮಗೆ ಉಪಯೋಗವೇನು? ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಗಮನವಹಿಸಿ ಶೀಘ್ರವಾಗಿ ಕ್ರಮ ಕೈಗೊಂಡು, ಸಹಕರಿಸಬೇಕು” ಎಂದು ಮುಖಂಡ ನಬಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...