ದಾವಣಗೆರೆ | ಹಸಿವಿನಿಂದ ಜ್ಞಾನತಪ್ಪಿ ಬಿದ್ದಿದ್ದ ವೃದ್ಧನ ರಕ್ಷಣೆ; ಮಾನವೀಯತೆ ಮೆರೆದ ಪೊಲೀಸ್‌ ಪೇದೆ

Date:

ಹಸಿವು ಮತ್ತು ಬಿಸಿಲಿನ ಪ್ರಖರತೆಯಿಂದ ಜ್ಞಾನತಪ್ಪಿ ಬಿದ್ದಿದ್ದ ವೃದ್ಧ ಭಿಕ್ಷುಕನೋರ್ವರಿಗೆ ಪೊಲೀಸ್ ಪೇದೆಯೊಬ್ಬರು ಮರುಜೀವ ನೀಡಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಜರುಗಿದೆ.

ತಾಲೂಕಿನ ಕುಂದೂರಿನ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದ ಕಾಂಪೌಂಡ್ ಪಕ್ಕ ಭಿಕ್ಷುಕನೊಬ್ಬ ಎಚ್ಚರತಪ್ಪಿ ಬಿದ್ದಿರುವುದನ್ನು ಕಂಡ ಕುಂದೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿ ಎಸ್ ಷಣ್ಮುಖ ಅವರು ಸಮೀಪದ ಕೂಲಂಬಿ ಉಪಠಾಣೆಯ ಪೊಲೀಸ್ ಮುಖ್ಯಪೇದೆ ಕೆ ರಾಜು ಮತ್ತು ಕುಂದೂರು ಗ್ರಾಮ ಪಂಚಾಯಿತಿಯ ಪಿಡಿಒ ವಿಜಯಗೌಡ ಅವರಿಗೆ ಮಾಹಿತಿ ಮುಟ್ಟಿಸುತ್ತಾರೆ.

ಮುಖ್ಯಪೇದೆ ಕೆ ರಾಜು ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿ, ಷಣ್ಮುಖ ಮತ್ತು ಪಿಡಿಒ ವಿಜಯಗೌಡ ಹಾಗೂ ಕೆಲವರ ಸಹಾಯದಿಂದ, ಬಹಳ ದಿನಗಳಿಂದ ಆಹಾರ ಸೇವಿಸದೆ ಬಿಸಿಲಿನ ತೀವ್ರತೆಗೆ ಜ್ಞಾನತಪ್ಪಿ ನಿತ್ರಾಣಗೊಂಡು ಬಿದ್ದಿದ್ದ ಭಿಕ್ಷುಕನಿಗೆ ನೀರು ಕುಡಿಸಿದರು. ಅವರು ಸ್ವಲ್ಪ ಚೇತರಿಸಿಕೊಂಡ ಬಳಿಕ ಊಟ ಮಾಡಿಸುತ್ತಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೈಸೂರು | ದೇವರಾಜ ಅರಸು ಜನಸಾಮಾನ್ಯರು ಸ್ಮರಿಸುವಂತಹ ನಾಯಕ: ಎಂಎಲ್‌ಸಿ ವಿಶ್ವನಾಥ್

“ಅನಾಮಧೇಯ ಭಿಕ್ಷುಕನ ಹೆಸರು ಮತ್ತು ಊರನ್ನು ಕೇಳಲು ಪ್ರಯತ್ನಿಸಿದಾಗ, ಆತ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದವರೆಂದು ತಿಳಿದುಬಂದಿದ್ದು, ಹೆಸರು ರಾಮ ಎಂಬುದು ಅಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.

“ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಹೊನ್ನಾಳಿಯ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿತ್ತು. ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಂಡಿದ್ದಾರೆ” ಮುಖ್ಯಪೇದೆ ಕೆ.ರಾಜು ಮಾಹಿತಿ ನೀಡಿದ್ದು, ಮಾನವೀಯತೆ ಮೆರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ...