ದಾವಣಗೆರೆ | ಅಮಿತ್‌ ಶಾ ರಾಜೀನಾಮೆಗೆ ದಲಿತಪರ ಸಂಘಟನೆಗಳ ಆಗ್ರಹ

Date:

ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿ ಮಾತನಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಮಂತ್ರಿಗಿರಿ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ ದಾವಣಗೆರೆ ಜಿಲ್ಲಾ ಸಮಿತಿ ಮತ್ತು ದಲಿತ ಸಂಘರ್ಷ ಸಮಿತಿಯ(ಪ್ರೊ.ಕೃಷ್ಣಪ್ಪ) ಮುಖಂಡರು, ಕಾರ್ಯಕರ್ತರು ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

- Advertisement -

ದಸಂಸ ಮುಖಂಡ ಮಂಜುನಾಥ ಕುಂದುವಾಡ ಮಾತನಾಡಿ, “ಸಂಸತ್ ಅಧಿವೇಶನದಲ್ಲಿ ಗೃಹ ಮಂತ್ರಿ ಅಮಿತ್ ಶಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಅಂಬೇಡ್ಕರ್‌ ಸ್ಮರಿಸುವ ಬದಲು ದೇವರನ್ನು ಸ್ಮರಿಸಿದ್ದರೆ ಏಳು ಜನ್ಮದಲ್ಲೂ ಸ್ವರ್ಗವನ್ನು ಕಾಣಬಹುದು” ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಮಿತ್ ಶಾ ಅವರು ನಾಲಿಗೆ ಮೇಲೆ ಹಿಡಿತವಿಲ್ಲದೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಗೌರವಿಸುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಅಮಿತ್‌ ಶಾ ಮುಖಾಂತರ ಸಂಘ ಪರಿವಾರದ ಮುಖವಾಡ ಕಳಚಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅಂಬೇಡ್ಕರ್ ಅವರ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಅಮಿತ್ ಶಾ ದೇಶದ ಶೋಷಿತ ಸಮುದಾಯಗಳಿಗೆ ಮತ್ತು ಸಂವಿಧಾನ ಶಿಲ್ಲಿಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಅಂಬೇಡ್ಕರ್ ಇಡೀ ಶೋಷಿತ ಸಮುದಾಯದ ಸ್ವಾಭಿಮಾನದ ಸಂಕೇತ. ದೇಶದ ಕಟ್ಟಕಡೆಯ ಜನತೆ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಿದಂತಹ ಮಾನವತಾವಾದಿ. ಸಾವಿರಾರು ವರ್ಷಗಳಿಂದ ದಮನಕ್ಕೆ ಒಳಗಾಗಿರುವ ಜನರನ್ನು ಕಾಪಾಡಲು ಯಾವುದೇ ದೇವರು ಬರಲಿಲ್ಲ. ಬದಲಿಗೆ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನ ಜಾರಿಯಾಯಿತು” ಎಂದರು.

ಕರ್ನಾಟಕ ಜನಶಕ್ತಿಯ ಜಿಲ್ಲಾ ಮುಖಂಡ ಸತೀಶ್ ಮಾತನಾಡಿ, “ಶೋಷಿತ ಸಮುದಾಯಗಳ ವಿಮೋಚನೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟು ಸಂವಿಧಾನದ ಮೂಲಕ ಎಲ್ಲ ವರ್ಗದ ಜನರ ಪ್ರಗತಿಗೆ ಸ್ವಾಭಿಮಾನ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಬೆಳೆಸುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು. ಅಮಿತ್ ಶಾ ಅವರ ಹೇಳಿಕೆ ದೇಶದ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಕೂಡಲೇ ಅಮಿತ್‌ ಶಾ ಅವರನ್ನು ಕೇಂದ್ರ ಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು. ಇದು ಸಂಘಪರಿವಾರ 100ನೇ ವರ್ಷಾಚರಣೆ ಆಚರಿಸುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರಿಂದ ಬಂದ ಸಂಘಪರಿವಾರದ ಮಾತಾಗಿದೆ. ಸಂವಿಧಾನ ಇದ್ದಿದ್ದರಿಂದಲೇ ಅಮಿತ್ ಶಾ ಸಂಸದ, ಮಂತ್ರಿಯಾಗಿರುವುದು. ಇದಕ್ಕೆ ಅಂಬೇಡ್ಕರ್ ಬರೆದ ಸಂವಿಧಾನವೇ ಕಾರಣ. ಹಾಗಾಗಿ ಅಮಿತ್‌ ಶಾ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು.‌ ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಇಡೀ ಶೋಷಿತ ಸಮುದಾಯ ಒಟ್ಟುಗೂಡಿ ಮನುವಾದಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಕಾಲ ದೂರವಿಲ್ಲ”ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಸಂಸ ಹರಿಹರ ತಾಲೂಕು ಸಂಚಾಲಕ ಮಹಾಂತೇಶ ಮಾತನಾಡಿ, “ದೇಶದ ಗೃಹ ಮಂತ್ರಿಯಾಗಿ ನೀವು ಜವಾಬ್ದಾರಿಯುತ ಹೇಳಿಕೆ ನೀಡಬೇಕು. ಈ ಹೇಳಿಕೆಯಿಂದ ಇಡೀ ಒಂದು ಸಮುದಾಯದ ವಿರುದ್ಧ ಮಾತನಾಡಿದಂತಾಗಿದೆ. ನೀವೂ ಕೂಡ ಮೋದಿ ಅನ್ನುತ್ತೀರಿ. ಅವರಿಂದ ಏನು ಸಿಕ್ಕಿದೆ. ಈ ದೇಶದ ಯುವಕರಿಗೆ ಪಕೋಡ ಮಾರಿ ಎನ್ನುತ್ತೀರಿ. ನಿರುದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಿ. ಅದರ ಬದಲು ಅಂಬೇಡ್ಕರ್ ಅವರನ್ನು ನಿಂದನೆ ಮಾಡಿದ್ದೀರಿ. ಮೋದಿಯವರಿಗೆ ಸಂವಿಧಾನದ ಮೇಲೆ ಗೌರವ ಇದ್ದರೆ ಅಮಿತ್ ಶಾ ರಾಜೀನಾಮೆ ಪಡೆಯಿರಿ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಮಿತ್ ಶಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ವಿಜಯಲಕ್ಷ್ಮಿ, ಬುಳ್ಸಾಗರ ಸಿದ್ಧರಾಮಣ್ಣ, ಹನುಮಂತಪ್ಪ, ಮಹಾಂತೇಶ್, ಚಿತ್ರಲಿಂಗಪ್ಪ, ತುರ್ಚಘಟ್ಟ ನಾಗರಾಜ್, ತುರ್ಚಘಟ್ಟ ಖಾಲಿದ್ ಅಲಿ, ಮಹಾಂತೇಶ್ ಹಾಲವರ್ತಿ, ಹಾಲೇಶ್ ಕುಂದುವಾಡ, ತ್ಯಾಗರಾಜ್ ಹುಚ್ಚವ್ವನಹಳ್ಳಿ, ಜೀವನ್ ಆಣಬೇರು, ಹನುಮಂತ ಕಡ್ಲೆಬಾಳು, ನಾಗರಾಜ್ ಆನೆಕೊಂಡ, ಮಂಜು ಮಾಗಾನಳ್ಳಿ, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಪವಿತ್ರ, ಸತೀಶ್, ಹನುಮಂತಪ್ಪ, ಸುರೇಶ್ ಸಿಡ್ಲಪ್ಪ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...