ದಾವಣಗೆರೆ | ಸಂಘಪರಿವಾದ ಮುಖಂಡನ ಹೇಳಿಕೆಗೆ ಪ್ರತಿಯಾಗಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾತ ಪೊಲೀಸರ ಬಲೆಗೆ

Date:

Advertisements

ದಾವಣಗೆರೆಯಲ್ಲಿ ಸಾರ್ವಜನಿಕ ಹಿಂದೂ ಗಣಪತಿಗಳ ಒಕ್ಕೂಟದಿಂದ ನಾಗಮಂಗಲ ಘಟನೆ ಖಂಡಿಸಿ ನಡೆಸಿದ್ದ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಹೇಳಿಕೆಗೆ ಪ್ರತಿಯಾಗಿ ಅದೇ ರೀತಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ನಗರದ ಮಂಡಕ್ಕಿ ಭಟ್ಟಿ ಲೇಔಟ್‌ನ ಕಿಡಿಗೇಡಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ನಗರದ ಮಂಡಕ್ಕಿ ಭಟ್ಟಿ ಲೇಔಟ್‌ನ ಸೈಯದ್ ನೂರ್ ಅಹಮದ್ ಬಂಧಿತ ಆರೋಪಿ. ದಾವಣಗೆರೆಯ ಬಸವ ನಗರದ ಪೊಲೀಸರು ಆರೋಪಿಯನ್ನು ಹರಿಹರ ನಗರದಲ್ಲಿ ಬಂಧಿಸಿದ್ದಾರೆ.

ಆರೋಪಿಯನ್ನು ದಾವಣಗೆರೆಯ ಒಂದನೇ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಪ್ರಶಾಂತ್ ಅವರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಆತನನ್ನು ದಾವಣಗೆರೆಯ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Advertisements

ನಾಗಮಂಗಲದಲ್ಲಿ ಗಣೇಶಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದಿದ್ದ ಕಲ್ಲುತೂರಾಟಕ್ಕೆ ಸಂಬಂಧಿಸಿದಂತೆ ಸಂಘಪರಿವಾರವು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದವು. ಈ ವೇಳೆ ಸಂಘಪರಿವಾರದ ಮುಖಂಡ ಸತೀಶ್ ಪೂಜಾರಿ ಪ್ರಚೋದನಕಾರಿ ಮಾತುಗಳನ್ನು ಆಡಿದ್ದರು. ಇದಕ್ಕೆ ಪ್ರತಿಯಾಗಿ ಸೈಯದ್ ನೂರ್ ಅಹಮದ್ ಕೂಡ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಮರುದಿನ ಬೇತೂರು ರಸ್ತೆಯ ಅರಳಿಮರ ಸರ್ಕಲ್ ಬಳಿ ವೆಂಕಟೇಶ್ವರ ಸರ್ಕಲ್‌ನಲ್ಲಿ ನಡೆದ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಹೋರಾಟದ ಪ್ರಕರಣ ನಡೆದಿತ್ತು.

ಇದನ್ನು ಓದಿದ್ದೀರಾ? ಮಂಡ್ಯ | ಪ್ರವಾದಿ ಮಹಮ್ಮದ್ ಲೇಖನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ನಿರ್ಮಲಾನಂದ ಸ್ವಾಮೀಜಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಪೊಲೀಸ್ ಠಾಣೆಗಳಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಸಂಘಪರಿವಾರದ ಮುಖಂಡ ಸತೀಶ್ ಪೂಜಾರಿಯನ್ನು ದಾವಣಗೆರೆ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X