ದಾವಣಗೆರೆ | ಹನಿ ನೀರಾವರಿ ಸಹಾಯಧನ ಕಡಿತ; ಕಾಂಗ್ರೆಸ್ ವಿರುದ್ಧ ಬಿಜೆಪಿಗರ ಆಕ್ರೋಶ

Date:

Advertisements

ಹನಿ ನೀರಾವರಿ ಸಹಾಯಧನ ಕಡಿತಗೊಳಿಸಿರುವುದನ್ನು ಖಂಡಿಸಿದ ದಾವಣಗೆರೆ ಜಿಲ್ಲಾ ಬಿಜೆಪಿ ವಕ್ತಾರ ಬಿ ಎಂ ಸತೀಶ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹನಿ ನೀರಾವರಿ ಯೋಜನೆಗೆ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು ದಿಢೀರನೆ ಶೇ.75 ರಿಂದ ಶೇ.45ಕ್ಕೆ ಇಳಿಸಿದ್ದು 2024-25ನೇ ಸಾಲಿನ ಆರ್ಥಿಕ ವರ್ಷಕ್ಕೆ ಅನ್ವಯವಾಗಲಿದೆಯೆಂದು ರಾಜ್ಯದ ಕಾಂಗ್ರೆಸ್‌ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರ ರೈತರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರತಿ ಹನಿಗೆ ಅಧಿಕ ಬೆಳೆ ಘೋಷಣಾ ವಾಕ್ಯದಡಿ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆ ಹೆಚ್ಚಿಸಲು ಹನಿ, ತುಂತುರು ನೀರಾವರಿಯಂತಹ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದಾಗಿದೆ. ನೀರಿನ ಬಳಕೆಯ ಸಾಮರ್ಥ್ಯ ಮತ್ತು ಸೂಕ್ತ ನಿರ್ವಹಣೆಯಿಂದ ಬೆಳೆಗಳ ಉತ್ಪಾದನೆ ಹೆಚ್ಚಿಸಿ, ರೈತರ ‘ಆದಾಯʼವನ್ನು ದ್ವಿಗುಣಗೊಳಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ” ಎಂದರು.

Advertisements

“ಈ ಮೊದಲು ರೈತರಿಗೆ ಶೇ.75ರಷ್ಟು ಸಬ್ಸಿಡಿ ದೊರೆಯುತ್ತಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.27 ಮತ್ತು ರಾಜ್ಯ ಸರ್ಕಾರದ ಪಾಲು ಶೇ.48ರಷ್ಟಿತ್ತು. ಕೇಂದ್ರದ ಬಿಜೆಪಿ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಶೇ.27ರಷ್ಟು ಸಬ್ಸಿಡಿ ಮುಂದುವರೆಸಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಬ್ಸಿಡಿಯನ್ನು ಶೇ.48ರ ಬದಲಿಗೆ ಶೇ.18ಕ್ಕೆ ಇಳಿಸಿ ಆದೇಶ ಹೊರಡಿಸಿದೆ. ಇದರಿಂದ ರೈತರಿಗೆ ಸಿಗುತ್ತಿದ್ದ ಸಬ್ಸಿಡಿ ಶೇ.75 ರಿಂದ ಶೇ.45ಕ್ಕೆ ಇಳಿಕೆಯಾಗಿದೆ. ಇದರಿಂದ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಸಂಕಷ್ಟ ತಂದೊಡ್ಡಿದೆ. ಗ್ಯಾರಂಟಿ ಯೋಜನೆಗಳ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಯೋಜನೆಗಳು ನಿಂತಲ್ಲೇ ನಿಂತಿವೆ. ರಾಜ್ಯ ಸರ್ಕಾರದಲ್ಲಿ ಆರ್ಥಿಕ ಶಿಸ್ತು ಇಲ್ಲವಾಗಿದ್ದು, ಆರ್ಥಿಕವಾಗಿ ದಿವಾಳಿಯಾಗಿದೆ” ಎಂದು ಆರೋಪಿಸಿದರು.

“ಮೊದಲಿಗೆ ಹಾಲಿನ ಮಾರಾಟ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ನೀಡಿದ ಬೆನ್ನಲ್ಲೇ ಕೋಚಿಮುಲ್ (ಕೋಲಾರ- ಚಿಕ್ಕಬಳ್ಳಾಪುರ) ಹಾಲು ಒಕ್ಕೂಟ ರೈತರಿಂದ ಖರೀದಿಸುವ ದರವನ್ನು ₹2 ಕಡಿಮೆ ಮಾಡಿ ಆದೇಶ ಹೊರಡಿಸಿದೆ. ಹಾಲು ಉತ್ಪಾದನೆ ಹೆಚ್ಚಾಗಿದೆ ಎಂಬ ಕಾರಣ ನೀಡಿ, ಇಂದು ಬೆಳಿಗ್ಗೆಯಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಪ್ರತಿ ಲೀಟ‌ರ್ ದರವನ್ನು 33.40 ರಿಂದ 31.40 ಇಳಿಸಿ ಆದೇಶಿಸಲಾಗಿದೆ. ರೈತರು ಹೆಚ್ಚು ಹಾಲು ಉತ್ಪಾದಿಸುತ್ತಿದ್ದಾರೆ. ರೈತರ ಹಾಲಿನ ಉತ್ಪಾದನಾ ಸಾಮರ್ಥ್ಯ ಕುಗ್ಗಿಸಬೇಕು ಎಂಬ ಕುತಂತ್ರದಿಂದ ಹಾಲಿನ ಖರೀದಿ ದರ ಕಡಿತ ಮಾಡಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಉದಾಹರಣೆಯಾಗಿದೆ” ಎಂದು ಆರೋಪಿಸಿದರು.

“ರೈತರ ಸಾಮರ್ಥ್ಯದ ಕಗ್ಗೊಲೆ. ಇಂತಹ ರೈತ ವಿರೋಧಿ, ಜನವಿರೋಧಿ ಸರ್ಕಾರ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿಯೇ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಾಲಿನ ದರ ಹೆಚ್ಚಿಸಿಲ್ಲ. ಪ್ರತಿ ಪ್ಯಾಕೆಟ್‌ನಲ್ಲಿ 50 ಎಂಎಲ್ ಹೆಚ್ಚು ನೀಡಿ ₹2.10ರ ಬದಲು ₹2 ಹೆಚ್ಚಳ ಮಾಡಿದೆಯೆಂದು ಸಮರ್ಥಿಸಿಕೊಂಡ ಆರ್ಥಿಕ ತಜ್ಞ ಎಂದು ಕರೆಸಿಕೊಳ್ಳುವ 15 ಬಾರಿ ಬಜೆಟ್ ಮಂಡಿಸಿರುವ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಲಿನ ಉತ್ಪಾದನೆ ಹೆಚ್ಚಳದ ಕಾರಣ ನೀಡಿ, ರೈತರಿಂದ ಖರೀದಿಸುವ ದರವನ್ನು ಕಡಿಮೆ ಮಾಡಿರುವುದಕ್ಕೆ ಏನು ಹೇಳುತ್ತಾರೆ?. ಎಲ್ಲ ದರಗಳನ್ನು ಹೆಚ್ಚಿಸಿ ಇದೀಗ ರೈತರಿಗೆ ಹೊರೆ ಮಾಡಲು ಹೊರಟಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ; ಶ್ರೀಗಳಿಂದ ಉತ್ತಮ ಸ್ಪಂದನೆ

ಮಳಲ್ಕೆರೆ ಸದಾನಂದ, ಬಲ್ಲೂರು ಬಸವರಾಜ್, ಕಟ್ಟೂರು ಶಿವಕುಮಾರ್, ಆರನೇಕಲ್ಲು ವಿಜಯಕುಮಾರ್, ಅಣಜಿ ಗುಡ್ಡಶ್, ಬಾತಿ ಬಿ ಕೆ ಶಿವಕುಮಾರ್, ಅಣಬೇರು ಶಿವಪ್ರಕಾಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X