ದಾವಣಗೆರೆ | ಅವೈಜ್ಞಾನಿಕ ಸೇತುವೆ ನಿರ್ಮಾಣದ ವಿರುದ್ಧ ರಸ್ತೆ ತಡೆ ಪ್ರತಿಭಟನೆ; 40ಕ್ಕೂ ಅಧಿಕ ಮಂದಿ ಬಂಧನ

Date:

Advertisements

ದಾವಣಗೆರೆಯ ಹಳೆ ಕುಂದುವಾಡದಿಂದ ಬನ್ನಿಕೋಡಿಗೆ ಸಂಪರ್ಕ ಕಲ್ಪಿಸುವಂತೆ ಸೇತುವೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿರುವುದನ್ನು ವಿರೋಧಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಿದ 40ಕ್ಕೂ ಅಧಿಕ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ.

ನೇರವಾಗಿ ಸಂಪರ್ಕ ಕಲ್ಪಿಸುವ ವೈಜ್ಞಾನಿಕ ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಹಳೆ ಕುಂದುವಾಡ ಗ್ರಾಮಸ್ಥರು ಹೆದ್ದಾರಿ ಬಂದ್ ಮಾಡುವ ಮೂಲಕ ಬೆಳಿಗ್ಗೆ 9ರಿಂದಲೇ ಕಾಮಗಾರಿ ನಿಲ್ಲಿಸುವಂತೆ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಗ್ರಾಮಸ್ಥರನ್ನು ವಶಕ್ಕೆ ಪಡೆದರು.

ಗ್ರಾಮದ ಮುಖಂಡ ಮಂಜುನಾಥ್ ಕುಂದವಾಡ ಮಾತನಾಡಿ, “ಬನ್ನಿಕೋಡು ರಸ್ತೆಗೆ ಸಂಪರ್ಕ ಕಲ್ಪಿಸುವ ಸೇತುವೆ  ನಿರ್ಮಾಣಕ್ಕೆ ಹಲವು ವರ್ಷಗಳಿಂದ ಮನವಿ ಸಲ್ಲಿಸಿದ್ದು, ಅವೈಜ್ಞಾನಿಕವಾಗಿ ದೂರದಲ್ಲಿ ತಿರುವಿನಿಂದ ಕೂಡಿದ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ. ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿಯಂತೆ ತೋರುತ್ತದೆ. ಈ ಹಿನ್ನಲೆಯಲ್ಲಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಜನರ ಅನುಕೂಲದ ದೃಷ್ಟಿಯಿಂದ ನೇರವಾಗಿ ರಸ್ತೆಯನ್ನು ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.

Advertisements

“ಈ ರಸ್ತೆ ಮುಂದೆ ಸಾಗಿ ಹರಿಹರ ಶಿವಮೊಗ್ಗ ಹೆದ್ದಾರಿಗೆ ಕೂಡಿಕೊಳ್ಳಲಿದ್ದು, ನೂರಾರು ವಾಹನಗಳು ಇಲ್ಲಿ ಸಂಚರಿಸುತ್ತವೆ. ತಿರುವಿನಿಂದ ಕೂಡಿದ ಅವೈಜ್ಞಾನಿಕ ಸೇತುವೆಯಿಂದ ಇಲ್ಲಿ ಅಪಘಾತಗಳು ಸಂಭವಿಸಿದರೆ ಜೀವಹಾನಿಯಾಗುವ ಸಂಭವವಿದ್ದು, ಇದರ ನೇರ ಪರಿಣಾಮ ಕುಂದುವಾಡ ಗ್ರಾಮಸ್ಥರು ಅನುಭವಿಸುವಂತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಹೂಳಲು ಸ್ಮಶಾನವಿಲ್ಲದೆ ತಿ. ನರಸೀಪುರದಿಂದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಲೆಮಾರಿ ಕೊರಚ ಸಮುದಾಯ

ಮಾಜಿ ಮೇಯರ್ ಗುರುನಾಥ್, ಮಂಜುನಾಥ್ ಕುಂದುವಾಡ, ಗೌಡ್ರು ಮಂಜುನಾಥ್, ದಯಾನಂದ್, ಮಂಜುನಾಥ್ ಎಚ್ ಜಿ, ಮಧು, ಅಣ್ಣಪ್ಪ, ಮಾರುತಿ, ಜಿ ಎಚ್ ಗಣೇಶ, ಮಿಟ್ಲಕಟ್ಟೇ ಚಂದ್ರಪ್ಪ, ರಾಜು ಎನ್ ಟಿ, ಶ್ರೀನಿವಾಸ್ ಎಚ್ ಎಸ್, ಮಹಂತೇಶ್, ಚಂದ್ರಪ್ಪ ಸೇರಿದಂತೆ 40ಕ್ಕೂ ಅಧಿಕ ಮಂದಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ನಿರತರಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X