ದಾವಣಗೆರೆ | ಜಿಲ್ಲಾಸ್ಪತ್ರೆಯ ಮೇಲ್ಛಾವಣಿ ಪದರ ಕುಸಿತ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಆರೋಪ

Date:

ದಾವಣಗೆರೆ-ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ವಾರ್ಡ್‌ನಲ್ಲಿ ಏಕಾಏಕಿ ಮೇಲ್ಪಾವಣಿ ಕುಸಿದ ಘಟನೆ ನಡೆದಿದ್ದು, ವಾರ್ಡ್‌ನಲ್ಲಿದ್ದ ರೋಗಿಗಳು ಭಯಭೀತರಾಗಿದ್ದರು.

- Advertisement -

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಒಳರೋಗಿಯಾಗಿ ವಾರ್ಡ್‌ನಲ್ಲಿ ಮಲಗಿದ್ದ ರೋಗಿಗಳ ಮೇಲೆ ಮೇಲ್ಛಾವಣಿಯ ಒಳಪದರ ಕುಸಿದು ಬಿದ್ದಿದೆ. ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯ 71, 72ನೇ ವಾರ್ಡ್‌ನಲ್ಲಿ ರೋಗಿಗಳ ಮೇಲೆ ಮೇಲ್ಛಾವಣಿ ಕುಸಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ರೋಗಿಗಳು ಮಲಗಿದ್ದಾಗ ಏಕಾಏಕಿ ಮೇಲ್ಛಾವಣಿ ಬೀಳುತ್ತಿದ್ದಂತೆ ವಾರ್ಡ್‌ನಲ್ಲಿದ್ದ ರೋಗಿಗಳು ಭಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಮೇಲ್ಛಾವಣಿ ಕುಸಿದು ಬೀಳುತ್ತಿದ್ದಂತೆ ರೋಗಿಗಳು ಗಾಬರಿಯಿಂದ ಎದ್ದು ಓಡಿ ಹೋಗಿದ್ದಾರೆ. ಅಲ್ಲದೆ, ಬೆಡ್‌ ಮೇಲೆ ಮಣ್ಣು ಬಿದ್ದಿದೆ. ರೋಗಿಗಳ ಮೇಲೆ ಪೂರ್ತಿ ಮೇಲ್ಛಾವಣಿ ಕುಸಿದು ಬಿದ್ದಿದ್ದರೆ ಗತಿ ಏನು? ಚಿಕಿತ್ಸೆ ಪಡೆದು ರೋಗಿಗಳು ಗುಣಮುಖರಾಗಲು ಇಲ್ಲಿಗೆ ಬರುತ್ತಾರೆ. ಜೀವಕ್ಕೆ ಕಂಟಕವಾದರೆ ಯಾರಿಗೆ ಹೇಳುವುದು. ಆದರೆ, ಈ ವಾರ್ಡ್ ಮಾತ್ರವಲ್ಲ, ಬೇರೆ ಕಡೆಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಹಾಗಾಗಿ, ಇಂಥ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕು” ಎಂದು ರೋಗಿಗಳು ಮನವಿ ಮಾಡಿದ್ದಾರೆ.

“ಜಿಲ್ಲಾಸ್ಪತ್ರೆಗೆ ಬಡವರು ಚಿಕಿತ್ಸೆಗೆ ಬರುತ್ತಾರೆ. ಇದ್ದಕ್ಕಿದ್ದಂತೆ ಮತ್ತೊಂದು ಅನಾಹುತ ಸಂಭವಿಸಿದರೆ ಎಲ್ಲಿಗೆ ಹೋಗಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಕ್ರಮ ಜರುಗಿಸಬೇಕು. ಆರೋಗ್ಯ ಸಚಿವರು ಇತ್ತ ಗಮನ ಹರಿಸಬೇಕು. ಇಲ್ಲಿಗೆ ಭೇಟಿ ನೀಡಿ ಅವ್ಯವಸ್ಥೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ರೋಗಿಗಳ ಸಂಬಂಧಿಕರು ಆಗ್ರಹಿಸಿದ್ದಾರೆ.

“ಜಿಲ್ಲಾಸ್ಪತ್ರೆಯು 40ಕ್ಕೂ ಹೆಚ್ಚು ವರ್ಷ ಹಳೆಯದಾದ ಕಟ್ಟಡವಾಗಿದ್ದು, ಇಲ್ಲಿನ ಸ್ಥಳೀಯ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಂಘಟನೆಯ ಮುಖಂಡರು ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಉತ್ತಮ ಆರೋಗ್ಯ ವ್ಯವಸ್ಥೆ ಒದಗಿಸಲು ಒತ್ತಾಯಿಸುತ್ತಲೇ ಬಂದಿವೆ. ಈ ಮಧ್ಯೆ ಘಟನೆ ನಡೆದಿದ್ದು ರೋಗಿಗಳ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಇಲ್ಲಿನ ಅವ್ಯವಸ್ಥೆಗೆ ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯ, ಖಾಸಗಿ ಆಸ್ಪತ್ರೆಗಳ ಲಾಭಿ ಕಾರಣವಾಗಿದೆ” ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮೆಣಸಿನಕಾಯಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಸರ್ಕಾರವೇ ಖರೀದಿಸಬೇಕು: ಎಐಕೆಕೆಎಂಎಸ್‌

ಜಿಲ್ಲಾಸ್ಪತ್ರೆಯ ವ್ಯವಸ್ಥೆ ಬಗ್ಗೆ ರೋಗಿಗಳು ಅಕ್ರೋಶ ವ್ಯಕ್ತಪಡಿಸಿದ್ದು, ಆರೋಗ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕಿಡಿಕಾರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...