ದಾವಣಗೆರೆ | ಪೊಲೀಸರು ಬಂಧಿಸಿ ಕರೆತರುವಾಗ ಸೇತುವೆಯಿಂದ ಬಿದ್ದು ಆರ್‌ಟಿಐ ಕಾರ್ಯಕರ್ತ ಸಾವು

Date:

  • ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ನಿ ದೂರು
  • ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು

ಪೊಲೀಸರು ಬಂಧಿಸಿ ಕರೆತರುವಾಗ ತಪ್ಪಿಸಿಕೊಳ್ಳುವ ಯತ್ನದಲ್ಲಿ ಫ್ಲೈ ಓವರ್ ಮೇಲಿಂದ ಬಿದ್ದು ಆರ್‌ಟಿಐ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಆದರೆ, ಆತನ ಕುಟುಂಬ ಪೊಲೀಸರ ಮೇಲೆ ಕೊಲೆ ಆರೋಪ ಮಾಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ ನಿವಾಸಿಯಾದ ಹರೀಶ್ ಮೃತ ಆರ್‌ಟಿಐ ಕಾರ್ಯಕರ್ತ. ನಕಲಿ ದಾಖಲೆ ಸೃಷ್ಠಿಸಿ ಬೇರೊಬ್ಬರ ಸೈಟ್ಅನ್ನು ಹರೀಶ್ ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆಂಬ ಆರೋಪ ಇತ್ತು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆವರಗೆರೆ ಗ್ರಾಮದ ಸರ್ವೇ ನಂ 240/2ಬಿರಲ್ಲಿರುವ ಮೂರು ನಿವೇಶನಗಳ ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದಲ್ಲದೆ, ಬೇರೊಬ್ಬ ಮಹಿಳೆಯೊಬ್ಬರಿಂದ ನಕಲಿ ಕ್ರಯದ ಕರಾರು ಪತ್ರ ನೋಂದಣಿ ಮಾಡಿಸಿದ್ದಾರೆ ಎಂಬ ಆರೋಪ ಹರೀಶ್ ವಿರುದ್ಧ ಕೇಳಿ ಬಂದಿತ್ತು. ಈ ಸಂಬಂಧ ಈಚೆಗೆ ಆಸ್ತಿ ಮೂಲ ಮಾಲೀಕ ಎಂದು ಕೆ ಬಾಬುರಾವ್ ಎಂಬುವರು ಸುದ್ದಿಗೋಷ್ಠಿ‌ ಸಹ ನಡೆಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹರೀಶ್‌ಗೆ ಇತನ ಪತ್ನಿಯ ಊರಾದ ಚನ್ನಗಿರಿ ಕಾಕನೂರ ಗ್ರಾಮದಿಂದ ಪೊಲೀಸರು ಶನಿವಾರ ಕರೆ ತಂದಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಸುರೇಶ್​ ಪತ್ನಿಯಿಂದ ಎಸ್ ಐ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧ ದೂರು ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರೀಶ್ ಕುಟುಂಬದ ಸದಸ್ಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಅವಸಾನದ ಅಂಚಿನಲ್ಲಿರುವ ಯುರೋಪಿಯನ್ನರ ಸ್ಮಶಾನ

ಹರೀಶ್ ಹಳ್ಳಿ ವಿರುದ್ಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಶನಿವಾರ ರಾತ್ರಿ ಬಂಧಿಸಿ ಕರೆತರುವಾಗ ತಪ್ಪಿಸಿಕೊಳ್ಳುವ ಯತ್ನದಲ್ಲಿ ತೋಳಹುಣಸೆ ಸಮೀಪ ಫ್ಲೈ ಓವರ್ ಮೇಲಿಂದ ಬಿದ್ದು ಗಂಭೀರ ಗಾಯವಾಗಿತ್ತು, ಬಳಿಕ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದ ಎಂದು ಹೇಳಲಾಗಿತ್ತು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹರೀಶ್‌, ಚನ್ನಗಿರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...