ದಾವಣಗೆರೆ | ಚುನಾವಣೆಯಲ್ಲಿ ಪಂಚಮಸಾಲಿ ಸಮಾಜ ತಟಸ್ಥವಾಗಿರಲು ಸ್ವಾಭಿಮಾನ ಯುವಪಡೆ ಕರೆ

Date:

Advertisements

ದಾವಣಗೆರೆ ಜಿಲ್ಲೆಯ ಪಂಚಮಸಾಲಿ ನಾಯಕರು ಪ್ರಸ್ತುತ ಲೋಕಸ ಚುನಾವಣೆಯಲ್ಲಿ ತಟಸ್ಥವಾಗಿ ಇರಬೇಕು ಎಂದು ಪಂಚಮಸಾಲಿ ಸ್ವಾಭಿಮಾನ ಯುವಪಡೆ ಒತ್ತಾಯಿಸಿದೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಯುವಪಡೆಯ ಕಾರ್ಯದರ್ಶಿ ಮಂಜುನಾಥ್ ಸುಗ್ಗೇರ್ ಮಾತನಾಡಿ, “ದಾವಣಗೆರೆ ಜಿಲ್ಲೆ ಆದಾಗಿನಿಂದಲೂ ಸರ್ಕಾರಗಳು ಬದಲಿ ಆದರೂ ಒಂದು ಸಮುದಾಯದ್ದೇ ಆಡಳಿತವಿದೆ. ಪಂಚಮಸಾಲಿ ಸಮಾಜದ ಮಹಿಮಾ ಪಟೇಲ್, ಎಚ್ ಎಸ್ ಶಿವಶಂಕರ್, ತೇಜಸ್ವಿ ಪಟೇಲ್ ಹಾಗೂ ಎಚ್ ಎಸ್ ನಾಗರಾಜ್ ಅವರೊಂದಿಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಹೇಗೆ ನಡೆದುಕೊಂಡಿದ್ದಾರೆ ಎಂಬುದನ್ನು ಅವಲೋಕಿಸಬೇಕಾದ ಸುಸಂದರ್ಭ ಬಂದಿದೆ” ಎಂದರು.

“ಎಸ್ ಎಸ್ ಮಲ್ಲಿಕಾರ್ಜುನ ಅವರು ಸಚಿವರಾಗಿದ್ದರೂ 2014ರ ಲೋಕಸಭಾ ಚುನಾವಣೆಯಲ್ಲಿ ಮಹಿಮಾ ಪಟೇಲ್ ಅವರಿಗೆ ಟಿಕೆಟ್ ತಪ್ಪಿಸಲು ಸ್ಪರ್ಧಿಸಿದರು. ಜೆಡಿಎಸ್ ವರಿಷ್ಠರ ಮಾತಿನಂತೆ ನಡೆಯುವ ಶಿವಶಂಕರ್ ಒಂದು ಬಾರಿ ಕಾಂಗ್ರೆಸ್, ಒಂದು ಬಾರಿ ಬಿಜೆಪಿ ಬೆಂಬಲಿಸುತ್ತಾ ವೈಯಕ್ತಿಕ ವರ್ಚಸ್ಸನ್ನು ಕಳೆದುಕೊಳ್ಳುತ್ತಿದ್ದಾರೆ. ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಸಹಕಾರ ನೀಡಬೇಕೆಂಬ ಬೇಡಿಕೆಯೊಂದಿಗೆ ಜಿ ಎಂ ಸಿದ್ದೇಶ್ವರ ಅವರನ್ನು ಬೆಂಬಲಿಸುತ್ತಾ ಬಂದಿರುವ ಎಚ್ ಎಸ್ ನಾಗರಾಜ್ ಬರಿಗೈಯಲ್ಲಿ ಕೂತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಕಾಂಗ್ರೆಸ್‌ನಲ್ಲಿ ಇಲ್ಲದಿದ್ದರೂ ಜಾತ್ಯತೀತ ನಿಲುವಿಗೆ ಬದ್ಧರಾಗಿ 2009ರಿಂದ ಎಲ್ಲ ಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುತ್ತಾ ಬಂದ ತೇಜಸ್ವಿ ಪಟೇಲ್ ವಿಧಾನಸಭಾ ಚುನಾವಣೆಗೆ ಟಿಕೆಟ್ ತೆಗೆದುಕೊಳ್ಳುವುದು ಹಾಗಿರಲಿ, ಕನಿಷ್ಟ ಗೌರವವನ್ನೂ ಪಡೆಯಲಿಲ್ಲ. ಆದ್ದರಿಂದ ಈ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜ ತಟಸ್ಥವಾಗಿ, ಮತದಾನದಿಂದ ದೂರ ಉಳಿಯಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಾಟಕ ಬಿಟ್ಟು ಪರಿಹಾರ ನೀಡಿ, ಇಲ್ಲವೇ ಮತ ಕೇಳಬೇಡಿ: ಕುರುಬೂರು ಶಾಂತಕುಮಾರ್

ಸುದ್ದಿಗೋಷ್ಟಿಯಲ್ಲಿ ಯುವ ಪಡೆಯ ಅಧ್ಯಕ್ಷ ಚನ್ನಬಸಪ್ಪ ಚಿಕ್ಕಮೇಗಳಗೆರೆ, ಶರಣಪ್ಪ ಸೇರಿದಂತೆ ಸಮಾಜದ ಇತರ ಬಾಂಧವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X