ವೀರಶೈವ ಲಿಂಗಾಯತ ಎಲ್ಲ ಒಳಪಂಗಡವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿಯ ವೀರಶೈವ ಪಂಚಮಸಾಲಿ ಗುರುಪೀಠದಲ್ಲಿ ನೆಡೆಯುತ್ತಿರುವ ಹರ ಜಾತ್ರೆಯಲ್ಲಿ ಮಾತನಾಡಿದರು.
“ವೀರಶೈವರು ಹಾಗೂ ಲಿಂಗಾಯತರು ಬೇರೆ ಬೇರೆ ಅಲ್ಲ. ಎಲ್ಲರೂ ಒಂದೆ. ವೀರಶೈವ ಲಿಂಗಾಯತರು ಒಳಪಂಗಡಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಎಲ್ಲ ವೀರಶೈವ ಲಿಂಗಾಯತರು ಒಂದೇ ಎಂಬುದನ್ನು ತಿಳಿಯಬೇಕು. ಸಮಾಜದಲ್ಲಿ ಒಡಕುಂಟಾಗಲು ಯಾರೂ ಅವಕಾಶ ನೀಡಬಾರದು” ಎಂದರು.
ಈ ಸುದ್ದಿ ಓದಿದ್ದೀರಾ? ಕಾಸರಗೋಡು | ಕಬ್ಬಿನ ಜ್ಯೂಸ್ ಅಂಗಡಿಯಲ್ಲಿ ತೆರೆದುಕೊಂಡ ಪುಸ್ತಕ ಭಂಡಾರ
“ವೀರಶೈವ ಲಿಂಗಾಯತ ಸಮುದಾಯದ ಬಡ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸರ್ಕಾರ ಶಿಫಾರಸು ಮಾಡಲಿ. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿ ಸೇರ್ಪಡೆಗೆ ಶಿಫಾರಸು ಮಾಡಬೇಕು. ಇತ್ತೀಚೆಗೆ ಪಂಚಮಸಾಲಿ ಸಮುದಾಯ ಸಂಘಟಿತವಾಗಿ ಹೆಚ್ಚು ಬೆಳವಣಿಗೆ ಹೊಂದುತ್ತಿರುವುದು ಸಂತಸದ ವಿಚಾರ” ಎಂದು ಹರ್ಷ ವ್ಯಕ್ತಪಡಿಸಿದರು