ದಾವಣಗೆರೆ | ಕ್ರೀಡೆ ಜೀವನದ ಅವಿಭಾಜ್ಯ ಅಂಗ: ಜಿ ಬಿ ವಿನಯ್ ಕುಮಾರ್

Date:

ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಕೇವಲ ಪುಸ್ತಕ, ಓದಿಗೆ ಆದ್ಯತೆ ನೀಡಿದೆ, ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ. ದಾವಣಗೆರೆಯಲ್ಲಿ ಕ್ರೀಡಾ ಅಕಾಡೆಮಿ ಅಗತ್ಯ ಹೆಚ್ಚಾಗಿದೆ ಎಂದು ಇನ್‌ಸೈಟ್ಸ್‌ ಸಂಸ್ಥೆ ನಿರ್ದೇಶಕ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ ಬಿ ವಿನಯ್ ಕುಮಾರ್ ಅಭಿಪ್ರಾಯಪಟ್ಟರು.

- Advertisement -

ದಾವಣಗೆರೆ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆ-2024 ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಪಡುಕೋಣೆ ಅಕಾಡೆಮಿ ಮತ್ತು ದ್ರಾವಿಡ್ ಕ್ರೀಡಾ ಅಕಾಡೆಮಿಯಂತೆ ದಾವಣಗೆರೆಯಲ್ಲಿಯೂ ಕೂಡ ಕ್ರೀಡಾ ಅಕಾಡೆಮಿಯ ಅಗತ್ಯ ಹೆಚ್ಚಿದೆ. ಈ ಬಗ್ಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರು ಮತ್ತು ಸಂಸದರು ಆಸಕ್ತಿವಹಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಷ್ಟ್ರಮಟ್ಟದಲ್ಲಿ ಕ್ರೀಡೆಗಳಲ್ಲಿ ಉದ್ದೀಪನ ಮದ್ದು ಸೇವಿಸಿ ಪಾಲ್ಗೊಳ್ಳುವುದನ್ನು ನೋಡುತ್ತಿದ್ದೇವೆ. ಆದರೆ ಇದಕ್ಕೆ ಹೊರತಾಗಿ ಸಹಜವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ತುಂಬಾ ಮುಖ್ಯ. ಇದಕ್ಕಾಗಿ ದೇಹದಾರ್ಢ್ಯ, ಕರಾಟೆಯಂತಹ ದೈಹಿಕ ಚಟುವಟಿಕೆಯಂತಹ ಬೆಳವಣಿಗೆ ಸ್ಪರ್ಧೆಗಳು ಅಗತ್ಯ. ಈ ರೀತಿಯಾಗಿ ಪ್ರತಿ ಮನೆಗಳಿಂದಲೂ ಕ್ರೀಡಾಪಟುಗಳು ತಯಾರಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

“ಮಕ್ಕಳನ್ನು ಕೇವಲ ಓದಿನಲ್ಲಿ ಮುಳುಗಿಸಿ ಸಿಇಟಿ, ನೀಟ್, ಜೆಇಇ ತರಹದ ಪರೀಕ್ಷೆಗಳಿಗೆ ಕೂರಿಸುವ ಜತೆಗೆ ಕರಾಟೆ, ಕಬ್ಬಡ್ಡಿ ಸೇರಿದಂತೆ ಸಂಗೀತ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲು ಆದ್ಯತೆ ನೀಡಿ. ಇದು ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯವನ್ನೂ ಕೂಡ ಹೆಚ್ಚಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಬಿಡದಿ | ಮಂಚನಾಯಕನಹಳ್ಳಿಯಲ್ಲಿ ಹೆಚ್ಚಿದ ಕಳ್ಳತನ ಪ್ರಕರಣ; ಪೊಲೀಸರ ನಿರ್ಲಕ್ಷ್ಯ, ಆರೋಪ

“ಲಕ್ಷಾಂತರ ವಿದ್ಯಾರ್ಥಿಗಳು ಕರಾಟೆ ಅಭ್ಯಸಿಸಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆಯನ್ನು ದಾವಣಗೆರೆಯಲ್ಲಿ ನಡೆಸಲಾಗುತ್ತಿದೆ. ಇದು ದೇಶದ ಮೂಲೆ ಮೂಲೆಗೆ ತಲುಪಲಿ. ದಾವಣಗೆರೆಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮ ಕ್ರೀಡಾ ಸಂಸ್ಕೃತಿ ಹುಟ್ಟುಹಾಕಿದೆ. ಹೊಸ ಕ್ರೀಡಾ ಯುಗಕ್ಕೆ ನಾಂದಿ ಹಾಡುತ್ತಿದೆ. ಫಿಟ್ ಇಂಡಿಯಾ ಮಾಡುತ್ತಿರುವ ನಿಮಗೆಲ್ಲರಿಗೂ ಒಳ್ಳೆಯದಾಗಲಿ” ಎಂದು ಅಭಿನಂದಿಸಿದರು. ‌

ಕಾರ್ಯಕ್ರಮದಲ್ಲಿ ಕರಾಟೆ ಸ್ಪರ್ಧೆ ಆಯೋಜಕ ರೆನ್ಸಿ ಹೆಚ್ ಮಲ್ಲಿಕಾರ್ಜುನ್, ಹೆಚ್ ಎಂ ಕಾರ್ತಿಕ್, ಚನ್ನಕೇಶವ, ಲೋಹಿತ್ ಕುಮಾರ್, ಸಿದ್ದೇಶ್, ರಘು, ಸುಭಾಷ್ ಹೆಚ್ ಪಿ ಹಾಗೂ ಕರಾಟೆ ತರಬೇತುದಾರರು, ಕ್ರೀಡಾಪಟುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...