ದಾವಣಗೆರೆ | ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ; ತಪ್ಪಿತಸ್ಥರ ಕ್ರಮಕ್ಕೆ ಕುರುಬರ ಸಂಘ ಆಗ್ರಹ

Date:

ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘ, ದಾವಣಗೆರೆ ಜಿಲ್ಲಾ ಕುರುಬರ ಸಂಘ ಹಾಗೂ ಸಮಾಜದ ಹಲವು ಸಂಘಟನೆಗಳ ಸದಸ್ಯರು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಸಮಾಜದ ಮುಖಂಡ, ನಿವೃತ್ತ ಸಬ್ ರಿಜಿಸ್ಟ್ರರ್ ಮಲ್ಲಿಕಾರ್ಜುನಪ್ಪ ಮಾತನಾಡಿ, “ಕಳೆದ ಜನವರಿ 29ರ ಮಧ್ಯಾಹ್ನ ಸುಮಾರು 2 ಗಂಟೆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ
ಕುಮಾರಸ್ವಾಮಿ, ಮಾಜಿ ಸಚಿವ ಸಿ ಟಿ ರವಿ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ನಡೆದ ಹನುಮಧ್ವಜದ ವಿವಾದದ ಪ್ರತಿಭಟನೆಯ ಮೆರವಣಿಗೆ ಸಮಯದಲ್ಲಿ ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಮಂಡ್ಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ, ಗಾಜುಗಳನ್ನು ಧ್ವಂಸಗೊಳಿಸಿದ್ದಾರೆ. ಇಂಥ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಮಾಜದ ಮುಖಂಡ ಎಸ್ ಎಸ್ ಗಿರೀಶ್ ಮಾತನಾಡಿ, “ಕಟ್ಟಡದ ಮೇಲೆ ಇದ್ದ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಈಗ ಸ್ಥಳೀಯರನ್ನು ಕೇಳಿದಾಗ ಪ್ರತಿಭಟನಾಕಾರರು ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚುವ ಹುನ್ನಾರ ನಡೆಸಿದ್ದು, ಬೆಳಕಿಗೆ ಬಂದಿದೆ. ಈ ವಿವಾದವನ್ನು ರಾಜಕೀಯ ದುರುದ್ದೇಶಕ್ಕಾಗಿ ಸೃಷ್ಟಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಶೋಷಿತರ ಸಮಾವೇಶ ಯಶಸ್ವಿಯಾಗಿರುವುದನ್ನು ಸಹಿಸಲಾಗದೆ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯಗಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಈ ದಬ್ಬಾಳಿಕೆ ಮತ್ತು ನೀಚ ಕೃತ್ಯವನ್ನು ಸಮರ್ಥವಾಗಿ ಎದುರಿಸಲು ರಾಜ್ಯದಲ್ಲಿರುವ ಕುರುಬ ಸಮಾಜ ಶಕ್ತವಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ. ಕುರುಬ ಸಮಾಜದ ಸಹನೆ ಮತ್ತು ತಾಳ್ಮೆಯನ್ನು ಪರೀಕ್ಷಿಸಬೇಡಿ” ಎಂದು ಎಚ್ಚರಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಭಕ್ತ ಕನಕದಾಸರು ಕುರುಬರು ಹಿಂದೂಗಳು ಎಂಬುದನ್ನು ಕಲ್ಲು ತೂರಿದ ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕು. ಇಂತಹ ಪ್ರಯತ್ನಕಾರಿ ಕೃತ್ಯಗಳಿಂದ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಕೂಡಲೇ ನಿಲ್ಲಿಸಬೇಕು. 2023ರ ವಿಧಾನಸಭಾ ಚುನಾವಣೆಯ ಮುಂಚೆ ತಾವು ಧರ್ಮ ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ. ಈಗ ಜಾತಿ ಜಾತಿಗಳ ಮಧ್ಯೆ ವಿಷ ಬೀಜವನ್ನು ಹೆಚ್ಚಿಸುವ ಕೆಲಸಕ್ಕೆ ಕೈ ಹಾಕಿದ್ದೀರಿ. ಸಮಾಜದಲ್ಲಿ ಸಾಮರಸ್ಯದಿಂದ ಕೂಡಿ ಬಾಳ್ವೆ ನಡೆಸುತ್ತಿರುವ ಎಲ್ಲ ಸಮುದಾಯಗಳನ್ನು ಒಡೆದು ಆಳುವ ನೀತಿಯನ್ನು ಈ ಕೂಡಲೇ ನಿಲ್ಲಿಸದಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ತಕ್ಕ ರೀತಿ ಪಾಠವನ್ನು ಎರಡು ಪಕ್ಷಗಳಿಗೆ ಕಲಿಸಬೇಕಾಗುತ್ತದೆ. ಈ ಕೃತ್ಯಕ್ಕೆ ಪ್ರಚೋದನೆ ನೀಡಿದ ಮತ್ತು ಕ್ಯತ್ಯವನ್ನು ಎಸಗಿದ ಸಮಾಜಘಾತುಕರ ವಿರುದ್ಧ ಸೂಕ್ತ ಎಚ್ಚರಿಕೆಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ರೀಡಾ ವಿಭಾಗದ ಚಟುವಟಿಕೆಗಳ ಸಮಾರೋಪ ಸಮಾರಂಭ

ಪ್ರತಿಭಟನೆಯಲ್ಲಿ ಸಮಾಜದ ಮುಖಂಡರು ಕುಂಬಳೂರು ವಿರೂಪಾಕ್ಷಪ್ಪ, ಕೆ ರೇವಣಸಿದ್ದಪ್ಪ, ಪರಶುರಾಮ ಕೆ, ಪರಶುರಾಮ ಬಿ ದಿಳ್ಯಪ್ಪ, ಪ್ರೊ ಬಿ ಯಲ್ಲಪ್ಪ ಕುಂಬಳೂರು, ಎಂ ವಿರೂಪಾಕ್ಷಪ್ಪ, ಮಳಲಕೆರೆ ಪ್ರಕಾಶ್, ಜಡಗನಹಳ್ಳಿ ಚಿಕ್ಕಣ್ಣ, ಎಚ್ ಜಿ ಸಂಗಪ್ಪ, ದೀಪಕ್, ಜಡಗ್ನಳ್ಳಿ ವಿರೂಪಾಕ್ಷಪ್ಪ, ಶ್ರೀನಿವಾಸ್, ಆನಂದ, ಎಂ ಮನು, ಪುರಂದರ ಲೋಕಿಕೆರೆ, ಅನಂತಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...