ದಾವಣಗೆರೆ | ಬೀದಿಬದಿ ವ್ಯಾಪಾರಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ

Date:

ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಗಳನ್ನು ಪರಿಹರಿಸಲು ವ್ಯಾಪಾರಸ್ಥರ ಜಿಲ್ಲ ಸಮಾವೇಶವನ್ನು ಫೆಬ್ರವರಿ 26ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದ ಬೀರಲಿಂಗೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ವ್ಯಾಪಾರಸ್ಥರ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಬೀದಿಬದಿ ಸ್ಥಿರ ಮತ್ತು ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ದುಗ್ಗಪ್ಪ ಹೇಳಿದರು.

- Advertisement -

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜಿಲ್ಲಾ ಬೀದಿಬದಿ ಸ್ಥಿರ ಹಾಗೂ ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದಿಂದ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡುತ್ತಿದ್ದೇವೆ. ಈ ಹಿಂದೆ ಸಾಕಷ್ಟು ಬಾರಿ ಪ್ರತ್ಯೇಕವಾಗಿ ಬೀದಿಬದಿ ವ್ಯಾಪಾರಸ್ಥರು ವಿವಿಧ ಸಮಸ್ಯೆಗಳನ್ನು ತೆಗೆದುಕೊಂಡು ಹೋರಾಡಿದರ ಫಲವಾಗಿ ಹಲವಾರು ಸಮಸ್ಯೆಗಳು ಬಗೆಹರಿದಿವೆ. 2018ರಲ್ಲಿ ಸ್ಮಾರ್ಟ್ ಸಿಟಿ ನಿಗಮವು ಕೆ ಆರ್ ಮಾರ್ಕೆಟ್‌ನಲ್ಲಿ ಕಾಮಗಾರಿಯ ನೆಪವೊಡ್ಡಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡಿತ್ತು. ಇದರ ವಿರುದ್ಧ ಬೀದಿಬದಿ ವ್ಯಾಪಾರಸ್ಥರು ಐತಿಹಾಸಿಕ ಹೋರಾಟ ಮಾಡಿ ಮಾರುಕಟ್ಟೆಯನ್ನು ಉಳಿಸಿಕೊಂಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ದಾವಣಗೆರೆಯಲ್ಲಿ ಹಲವಾರು ವರ್ಷಗಳಿಂದಲೂ ಟೆಂಡರ್‌ನವರು ಮನಸ್ಸಿಗೆ ಬಂದಷ್ಟು ಜಕಾತಿಯನ್ನು ರಶೀದಿ ನೀಡದೆ ವಸೂಲಿ ಮಾಡುತ್ತಿದ್ದರು. ಇದರ ವಿರುದ್ಧ ಬೀದಿಬದಿ ವ್ಯಾಪಾರಸ್ಥರು ಒಗ್ಗಟ್ಟಾಗಿ ಎಸ್‌ಯುಸಿಐ ಪಕ್ಷದ ನೇತೃತ್ವದಲ್ಲಿ ಹೋರಾಟ ನಡೆಸಿ ಯಶಸ್ವಿಯಾದರು. ಈ ಹೋರಾಟದ ಫಲವಾಗಿ ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ದಾವಣಗೆರೆಯ ನಗರ ಪಾಲಿಕೆಯೇ ನೇರವಾಗಿ ಜಕಾತಿಯನ್ನು ರಶೀದಿ ನೀಡಿ ಪಡೆಯುವಂತಾಯಿತು” ಎಂದರು.

“ಫೆಬ್ರವರಿ 12ರಿಂದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಸಂಘವು ಪ್ರಾರಂಭಿಸಿದೆ. ಈ ಅಭಿಯಾನದಲ್ಲಿ ಬೀದಿಬದಿ ವ್ಯಾಪಾರ ಮಾಡುವವರು, ತಳ್ಳುವ ಗಾಡಿಯಲ್ಲಿ ಹಣ್ಣು, ಸೊಪ್ಪು ಮಾರುವವರು, ಓಣಿ ಓಣಿಗಳಲ್ಲಿ ತಿರುಗಾಡುತ್ತಾ ತಲೆ ಮೇಲೆ ಪುಟ್ಟಿ ಹೊತ್ತು ಮಾರುವವರು, ತಿಂಡಿಗಾಡಿಯವರು ಸೇರಿದಂತೆ ಎಲ್ಲರೂ ಸದಸ್ಯತ್ವ ತೆಗೆದುಕೊಳ್ಳಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼನಿಗರಾಣಿʼ ವಿನೂತನ ಯೋಜನೆ ಜಾರಿ: ಎಸ್‌ಪಿ ಚನ್ನಬಸವಣ್ಣ

“ದಾವಣಗೆರೆ ನಗರ ಹಾಗೂ ಎಲ್ಲ ತಾಲೂಕುಗಳಲ್ಲಿ ಇರುವ ನಿಜವಾದ ಬೀದಿಬದಿ ವ್ಯಾಪಾರಸ್ಥರಿಗೆ ಸ್ಮಾರ್ಟ್ ಕಾರ್ಡ್ ಗುರುತಿನ ಚೀಟಿ ನೀಡಬೇಕು. ಬೀದಿ ಬದಿಯ ವ್ಯಾಪಾರಸ್ಥರಿಗೆ ನಿವೇಶನ ನೀಡಬೇಕು. ಜಕಾತಿ ವಸೂಲಿಯನ್ನು ಖಾಸಗಿಯವರಿಗೆ ಯಾವುದೇ ಕಾರಣಕ್ಕೂ ನೀಡಬಾರದೆಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಸಮಾವೇಶದಲ್ಲಿ ಒತ್ತಾಯಿಸಲಾಗುವುದು” ಎಂದರು.

ಸುದ್ದಿಗೋಷ್ಟಿಯಲ್ಲಿ ಅಧ್ಯಕ್ಷ ಎಸ್ ಇಸ್ಮಾಯಿಲ್, ಉಪಾಧ್ಯಕ್ಷ ಎಚ್ ಸಿ ಮಲ್ಲಪ್ಪ, ಶೀಲಾ, ಶ್ರೀನಿವಾಸ್, ಕೆ ಭಾರತಿ, ಪೂಜಾ ನಂದಿಹಳ್ಳಿ, ಸಲೀಂ, ಜಬೀವುಲ್ಲ, ಕೆ ಕೃಷ್ಣಮೂರ್ತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...