ದಾವಣಗೆರೆ | ರಾಜ್ಯಮಟ್ಟದ ಯುವಜನೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

Date:

ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ದಾವಣಗೆರೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜನವರಿ 5 ಮತ್ತು 6 ರಂದು ದಾವಣಗೆರೆ ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಮೋತಿ ವೀರಪ್ಪ ಕಾಲೇಜು ಮುಂಭಾಗದ ಗುಂಡಿ ವೃತ್ತದಿಂದ ಸಾವಿರಾರು ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ನಡೆಸಲಾಯಿತು.

- Advertisement -

ಯುವಜನೋತ್ಸವ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಣಾಧಿಕಾರಿ ಡಾ.ಸುರೇಶ್ ಬಿ ಇಟ್ನಾಳ್, “ದಾವಣಗೆರೆ ಜಿಲ್ಲೆಯ ಯುವಕರು, ಯುವತಿಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎರಡು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜ್ಞಾನ ವಸ್ತು ಪ್ರದರ್ಶನ, ಕವನ ರಚನೆ, ಜಾನಪದ ನೃತ್ಯ, ಜಾನಪದ ಗೀತೆ, ಕಥೆ ಬರೆಯುವುದು, ಚಿತ್ರಕಲೆ, ಘೋಷಣಾ ಸ್ಪರ್ಧೆಗಳ ಜೊತೆಗೆ ಸಂಜೆ ನಡೆಯುವ ಮಣಿಕಾಂತ್ ಕದ್ರಿಯವರ ಸಂಗೀತ ಕಾರ್ಯಕ್ರಮ ವೀಕ್ಷಣೆ ಮಾಡುವ ಮೂಲಕ ಸದುಪಯೋಗ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಾಥಾದಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು ವಿವಿಧ ಘೋಷವಾಕ್ಯಗಳ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ‘ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ’ ‘ನೀರನ್ನು ಉಳಿಸಿ ಭೂಮಿಯನ್ನು ರಕ್ಷಿಸಿ’ ‘ಸ್ವಚ್ಚ ಮತ್ತು ಹಸಿರು ಅದು ನಮ್ಮ ಕನಸು’ ಮತ್ತು ‘ಉಸಿರಾಡಲು ಪ್ರೀತಿಸಿ, ಮರಗಳನ್ನು ಉಳಿಸಿ’ ‘ಮಾಲಿನ್ಯವನ್ನು ಉಳಿಸಿ, ಬದುಕಲು ಪ್ರಾರಂಭಿಸಿ’. ವಿದ್ಯಾರ್ಥಿನಿಯರು ‘ಹಣದಾಸೆಗೆ ಬಲಿಯಾಗದೆ ಯೋಚಿಸಿ ಮತ ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ’ ಎಂದು ಘೋಷಣೆಗಳೊಂದಿಗೆ ಜಾಥಾದಲ್ಲಿ ಭಾಗವಹಿಸಿದರು.

WhatsApp Image 2025 01 04 at 10.02.14 AM 1

ಕಾಲ್ನಡಿಗೆ ಜಾಥಾದಲ್ಲಿ ಅತ್ಯುತ್ತಮವಾಗಿ ತಂಡವನ್ನು ಸಂಘಟಿಸಿದ ಉತ್ತಮ ತಂಡಕ್ಕೆ ‘ಅಭಿನಂದನಾ ಪತ್ರ’ವನ್ನು ಹರಿಹರ ಶಾಸಕರಾದ ಬಿ.ಪಿ ಹರೀಶ್ ವಿತರಿಸಿ “ಯುವಜನತೆ ಯುವಜನೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಅದರ ಅನುಕೂಲತೆಗಳ ಬಗ್ಗೆ ತಿಳಿದುಕೊಂಡು ದೇಶದ ಪ್ರಗತಿಗೆ ಪೂರಕವಾಗಿ ಶ್ರಮಿಸಬೇಕು” ಎಂದು ಕರೆ ನೀಡಿದರು.

ಜಾಥಾವು ಗುಂಡಿ ವೃತ್ತದಿಂದ ವಿದ್ಯಾರ್ಥಿಭವನ, ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಮಹಾನಗರಪಾಲಿಕೆ ಮುಂಭಾಗದಿಂದ ಎವಿ ಕಮಲಮ್ಮ ರಸ್ತೆಯ ಮೂಲಕ ಮೋತಿ ವೀರಪ್ಪ ಕಾಲೇಜಿನ ಆವರಣ ತಲುಪಿತು. ಜಾಥಾದಲ್ಲಿ 75 ವರ್ಷದ ಹಿರಿಯ ವ್ಯಕ್ತಿ ನಾಗರಾಜ್ ಭಾಗವಹಿಸಿದುದು ಎಲ್ಲರ ಮೆಚ್ಚುಗೆಗೆ ಕಾರಣವಾಯಿತು.

ಇದನ್ನು ಓದಿದ್ದೀರಾ? ವಿಜಯಪುರ | ತೊಗರಿ ಬೆಲೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಕಾಲ್ನಡಿಗೆ ಜಾಥಾದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಸಿಪಿಓ ಮಲ್ಲಾನಾಯ್ಕ್, ಡಿಡಿಪಿಯು ಕರಿಸಿದ್ದಪ್ಪ, ಡಿಡಿಪಿಐ ಕೊಟ್ರೇಶ್, ಡಿಆರ್‍ಸಿಎಸ್ ಮಧುಶ್ರೀನಿವಾಸ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾ, ಯುವ ಪ್ರಶಸ್ತಿ ಪುರಸ್ಕೃತ ಮಾಗನಹಳ್ಳಿ ಮಂಜುನಾಥ್ ಮತ್ತು ನಗರದ ಪದವಿಪೂರ್ವ, ಪದವಿ ಕಾಲೇಜುಗಳ ವಿದ್ಯಾರ್ಥಿಗಳು , ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರಿ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2025 01 04 at 10.02.13 AM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...