ದಾವಣಗೆರೆ | ಜಿಲ್ಲಾಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸುವಂತೆ ಎಸ್‌ಯುಸಿಐ ಆಗ್ರಹ

Date:

ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಹಾಗೂ ರೈತ ಸಂಘಟನೆಗಳು ಜಂಟಿಯಾಗಿ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿ ನಿವಾಸಿ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

“ಆಸ್ಪತ್ರೆಯ ಮೇಲ್ಛಾವಣಿ ಕುಸಿತ ನಿಜಕ್ಕೂ ಜನರಲ್ಲಿ ಆತಂಕ ಸೃಷ್ಟಿಸಿದೆ. ದಾವಣಗೆರೆ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಸಾವಿರಾರು ಸಂಖ್ಯೆಯ ಕೆಳ ಮಧ್ಯಮ ವರ್ಗದವರಿಗೆ ಬಡ ಜನರಿಗೆ ಕೂಲಿ ಕಾರ್ಮಿಕರಿಗೆ ಆರೋಗ್ಯ ಸೇವೆ ಒದಗಿಸುವುದರಲ್ಲಿ ಆಸರೆಯಾಗಿರುವ ಜಿಲ್ಲಾ ಚಿಗಟೇರಿ ಆಸ್ಪತ್ರೆಯು ಈಗಾಗಲೇ ಬಹುತೇಕ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಸರಿಯಾದ ಚಿಕಿತ್ಸೆಯಿಲ್ಲದ ಈ ಆಸ್ಪತ್ರೆಯು ಸಿಬ್ಬಂದಿಗಳ, ಉಪಕರಣಗಳ ಕೊರತೆಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸುಮಾರು ಅರ್ಧ ಶತಮಾನದ ಹಳೆಯದಾದ ಈ ಆಸ್ಪತ್ರೆಯ ಮೇಲ್ಛಾವಣಿ ಕುಸಿತಗೊಂಡಿರುವುದು ನಿಜಕ್ಕೂ ಆತಂಕಕಾರಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಮೇಲ್ಛಾವಣಿ ಕುಸಿತ ಘಟನೆಯಿಂದ ಆಸ್ಪತ್ರೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಆದ್ದರಿಂದ ಕೂಡಲೇ ಇದನ್ನು ಸಂಬಂಧಪಟ್ಟವರಿಂದ ದುರಸ್ಥಿಗೊಳಿಸಬೇಕು ಹಾಗೂ ಹೊಸ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

“ಶಿಥಿಲಾವಸ್ಥೆಯಲ್ಲಿರುವ ಜಿಲ್ಲಾಸ್ಪತ್ರೆಯ ಕಟ್ಟಡವನ್ನು ಕೂಡಲೇ ದುರಸ್ಥಿಗೊಳಿಸಿ ಒಳರೋಗಿಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿ, ಸುಸಜ್ಜಿತವಾದ ಹೊಸದಾಗಿ ಸರ್ಕಾರಿ ಜಿಲ್ಲಾಸ್ಪತ್ರೆ ನಿರ್ಮಿಸಿ, ಒಳ ಹಾಗೂ ಹೊರ ರೋಗಿಗಳಿಗೆ ಎಲ್ಲ ರೀತಿಯ ಔಷಧೋಪಚಾರಗಳು ಆಸ್ಪತ್ರೆಯೊಳಗೆ ಸಿಗುವಂತೆ ವ್ಯವಸ್ಥೆ ಮಾಡಿ ಮತ್ತು ಔಷಧಿಗಳಿಗಾಗಿ ಹೊರಗಡೆ ಚೀಟಿ ಬರೆದುಕೊಡುವವರ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಜಿಲ್ಲಾಸ್ಪತ್ರೆಗೆ ಆಗತ್ಯವಿರುವಷ್ಟು ನುರಿತ ವೈದ್ಯರನ್ನು ಹಾಗೂ ಆರೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕಮಾಡಿಕೊಳ್ಳಬೇಕು. ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಸ್ವಚ್ಚತೆ ಕಾಪಾಡುವಂತೆ ಕ್ರಮ ವಹಿಸಬೇಕು. ಆಸ್ಪತ್ರೆಯಲ್ಲಿರುವ ವಾರ್ಡ್‌ಗಳಲ್ಲಿ ಸುಸಜ್ಜಿತವಾದ ಶೌಚಾಲಯ ವ್ಯವಸ್ಥೆ ಕಲ್ಲಿಸಬೇಕು. ಆಸ್ಪತ್ರೆಯಲ್ಲಿ ಸಮರ್ಪಕ ವಿದ್ಯುತ್ ದೀಪಗಳ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಸಚಿವ ಪರಮೇಶ್ವರ್

ಮಂಜುನಾಥ್ ಕೈದಾಳೆ, ರೈತ ಸಂಘಟನೆಯ ಬುಳ್ಳಾಪರದ ಹನುಮಂತಪ್ಪ, ಎಂ ಆರ್ ಹಿರೇಮಠ ಮಂಜುನಾಥ್ ಕುಕ್ಕುವಾಡ, ಟಿವಿಎಸ್ ರಾಜು, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಭಾರತಿ, ಪರಶುರಾಮ್, ಹರಿಪ್ರಸಾದ್, ಗುರು, ಮಮತಾ, ಪೂಜಾ, ಕಾವ್ಯ, ಕವಿತಾ, ಸುಮನ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...