ದಾವಣಗೆರೆ | ವಿವಾಹೇತರ ಸಂಬಂಧದ ಶಂಕೆ; ಮಸೀದಿ ಎದುರು ಮಹಿಳೆಯ ಮೇಲೆ ಹಲ್ಲೆ

Date:

ವಿವಾಹೇತರ ಸಂಬಂಧದ ಶಂಕೆ ಆರೋಪದ ಹಿನ್ನಲೆಯಲ್ಲಿ ವಿಚಾರಣೆ ವೇಳೆ ಮಸೀದಿ ಮುಂಬಾಗದಲ್ಲಿಯೇ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದು, ಅನೈತಿಕ ಪೊಲೀಸ್ ಗಿರಿ ನೆನಪಿಸುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯಲ್ಲಿ ನೆಡೆದಿದೆ.‌

- Advertisement -

ತಾವರಕೆರೆ ಗ್ರಾಮದಲ್ಲಿ ಮಸೀದಿ ಮುಂಬಾಗದಲ್ಲಿ ವಿವಾಹೇತರ ಸಂಬಂಧದ ಕುರಿತು ಪಂಚಾಯ್ತಿ ನಡೆಸುವ ವೇಳೆ ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹಿಳೆಯ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪಂಚಾಯ್ತಿ ಮಾಡಲು ಅವರ ಸಂಬಂಧಿ ಮತ್ತು ಸ್ನೇಹಿತನ್ನು ಮಸೀದಿಗೆ ಕರೆಸಿದ್ದರು. ಆಗ ಕಮಿಟಿಯ ಕೆಲವರು ಮಹಿಳೆಯನ್ನು ನಡುರಸ್ತೆಗೆ ಎಳೆದುತಂದು ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಪೈಪ್, ದೊಣ್ಣೆಗಳಿಂದ ಹಲ್ಲೆ ನಡೆಸಿ, ಕಲ್ಲು ಎತ್ತಿಹಾಕಲು ಪ್ರಯತ್ನಿಸಿರುವ ದೃಶ್ಯಗಳು ದಾಖಲಾಗಿವೆ. ಏಪ್ರಿಲ್ 9ರಂದು ಘಟನೆ ನೆಡೆದಿದ್ದು, ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ದೂರು ನೀಡಿದ್ದಾರೆ.

ಸಂತ್ರಸ್ತ ಮಹಿಳೆ ನೀಡಿರುವ ದೂರಿನಂತೆ ಏಪ್ರಿಲ್ 11ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿರುವ ಮೊಹಮ್ಮದ್ ನಯಾಜ್, ಮೊಹಮ್ಮದ್ ಗೌಸ್ ಪೀರ್, ಚಾಂದ್ ಪೀರ್, ಇನಾಯಿತ್ ಉಲ್ಲಾ, ದಸ್ತಗೀರ್ ಹಾಗೂ ರಸೂಲ್ ಟಿ ಆರ್ ಎಂಬುವವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣ ಏ.9ರಂದೇ ನಡೆದಿದ್ದು, ಹಲ್ಲೆ ಮಾಡಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ನೊಂದ ಮಹಿಳೆ ಏ.11ರಂದು ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಿಗಟೇರಿ ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ದಿಡೀರ್ ಭೇಟಿ, ಪರಿಶೀಲನೆ, ವ್ಯವಸ್ಥೆ ಬಗ್ಗೆ ಅಸಮಾಧಾನ.‌

ದೂರಿನ ಸಾರಾಂಶ: “ನಮ್ಮ ಮನೆಗೆ ದೂರದ ಸಂಬಂಧಿ ಬಂದು ಉಳಿದಿದ್ದಳು. ಅವಳನ್ನು ಭೇಟಿ ಮಾಡಲು ಆಕೆಯ ಸ್ನೇಹಿತ ಬಂದಿದ್ದು, ಜೊತೆಯಲ್ಲಿದ್ದಿದ್ದನ್ನು ನೋಡಿ ತನ್ನ ಗಂಡ ಗಲಾಟೆ ಮಾಡಿದ್ದರು. ನಂತರ ತಾವರೆಕೆರೆಯ ಮಸೀದಿಗೆ ದೂರು ನೀಡಿದ್ದು, ಮರುದಿನ ಮಧ್ಯಾಹ್ನ ಪಂಚಾಯ್ತಿಗಾಗಿ ತನ್ನನ್ನೂ ಸೇರಿದಂತೆ ಸಂಬಂಧಿ ಮಹಿಳೆ ಮತ್ತು ಸ್ನೇಹಿತನನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುವ ವೇಳೆ ಅಲ್ಲಿದ್ದ ಆರೋಪಿಗಳು ಪೈಪ್ ಮತ್ತು ದೊಣ್ಣೆಗಳಿಂದ ಮನಬಂದಂತೆ ಮೂವರಿಗೂ ಥಳಿಸಿದರು. ನಮ್ಮ ಬಟ್ಟೆಗಳನ್ನು ಎಳೆದಾಡಿ ಹರಿದು ಹಾಕಿದ್ದಲ್ಲದೇ, ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...