ದಾವಣಗೆರೆ | ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಕ್ರಮವಹಿಸಿ; ಜಿಲ್ಲಾಧಿಕಾರಿ ಸೂಚನೆ

Date:

Advertisements

ಪ್ರಸ್ತುತ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ತಿಳಿಸಿದರು.

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಜಿಲ್ಲೆಯಲ್ಲಿ ಈಗಾಗಲೇ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಬರುವ ಬೇಸಿಗೆ ಕಾಲದಲ್ಲಿ  ಜಾನುವಾರುಗಳಿಗೆ ಅವಶ್ಯಕವಾಗಿ ಬೇಕಾಗುವ ಮೇವಿನ ಉತ್ಪಾದನೆಯನ್ನು ಹೆಚ್ಚಿಸಬೇಕು. ಮೇವು ಸೇರಿದಂತೆ ನೀರು, ಆಶ್ರಯ ಮತ್ತು ಆರೋಗ್ಯ ಪಾಲನೆ ಸೇವೆಗಳನ್ನು ಒದಗಿಸುವ ಮೂಲಕ ಜಾನುವಾರುಗಳನ್ನು ರಕ್ಷಿಸಿಕೊಳ್ಳಬೇಕು. ಹುಲ್ಲನ್ನು ಚೆನ್ನಾಗಿ ಒಣಗಿಸಿ ಮೇವು ಹಾಳಾಗದಂತೆ ಶೇಖರಣೆ ಮಾಡಬೇಕು” ಎಂದು ರೈತರಿಗೆ ಸಲಹೆ ನೀಡಿದರು.

Advertisements

“ನೀರಾವರಿ ಸೌಲಭ್ಯವಿರುವ ರೈತರು ಜಾನುವಾರುಗಳಿಗೆ ನೀಡಬೇಕಾಗುವ ಮೇವಿನ ಅನುಸಾರ ಹಸಿರು ಮೇವು ಉತ್ಪಾದನೆ ಮಾಡಿ ರಸ ಮೇವಿನ ರೂಪದಲ್ಲಿ ಮೇವನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ರೈತರಿಗೆ ತಿಳಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಜಗಳೂರು ತಾಲೂಕಿನಲ್ಲಿ ಹೆಚ್ಚು ಮೇವಿನ ಕೊರತೆ ಕಂಡುಬರುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಟೆಂಡರ್ ಮೂಲಕ ಮೇವು ಪೂರೈಕೆ ಮಾಡಬೇಕು. ಕೆಎಂಎಫ್ ಮತ್ತು ಪಶುಸಂಗೋಪನೆ ಇಲಾಖೆ ವತಿಯಿಂದ ಕ್ಯಾಂಪ್‌ಗಳ ಮೂಲಕ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ನೂರು ಜನ ರೈತರು ಮೇವಿನ ಬೆಳೆ ಬೆಳೆಯಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಪ್ರೋತ್ಸಾಹ ನೀಡಬೇಕು” ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಬಿ ಇಟ್ನಾಳ್ ಮಾತನಾಡಿ,
“ಮಹಾತ್ಮ ಗಾಂಧಿ ಮನರೇಗಾ ಯೋಜನೆಯಡಿ ರೈತರು ಮೇವಿನ ಬೆಳೆ ಬೆಳೆಯಲು ಸರ್ಕಾರದಿಂದ ಎಕರೆಗೆ ₹16,000 ಸಹಾಯಧನ ಸೌಲಭ್ಯ ಒದಗಿಸುತ್ತಿದ್ದು, ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾದಲ್ಲಿ ಅಂತಹ ಪ್ರದೇಶಗಳಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪೌಷ್ಠಿಕ ಆಹಾರ, ಮೂಲಸೌಕರ್ಯ ಒದಗಿಸುವಂತೆ ಎಐಜೆಎಎಸ್‌ಸಿ ಆಗ್ರಹ

ಪಶುಸಂಗೋಪನ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಸುಂಕದ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್, ಶಿವಮೊಗ್ಗ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕಿ ಡಾ. ಸ್ಮಿತಾ ಜೆ ಎಸ್, ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಪಶುವೈದ್ಯ ಡಾ .ಜಿ ಕೆ ಜಯದೇವಪ್ಪ, ಡಾ. ವಿಶ್ವನಾಥ್, ರೇಷ್ಮೆ ಇಲಾಖೆ ಉಪ ನಿರ್ದೇಶಕ ಚಂದ್ರಪ್ಪ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X