ದಾವಣಗೆರೆ | ಕಳ್ಳತನ ಆರೋಪ; ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ

Date:

ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿಯ ಅಸ್ತಾಪನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಹಕ್ಕಿ-ಪಿಕ್ಕಿ ಜನಾಂಗದ ಬಾಲಕನ ಮೇಲೆ ಅದೇ ಜನಾಂಗದ 10 ರಿಂದ 15 ಮಂದಿ ಯುವಕರ ಗುಂಪು ಹಲ್ಲೆ ನಡೆಸಿದೆ. ದೊಣ್ಣೆ, ಡ್ರಿಪ್ ಪೈಪ್‌ನಿಂದ ಹಲ್ಲೆ ಮಾಡಿದ್ದು, ಬಾಲಕ ಚೀರಾಡುತ್ತಿರುವುದು ವಿಡಿಯೋದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದು ಕೆಲ ತಿಂಗಳ ಹಿಂದೆ ನಡೆದ ಘಟನೆ ಎನ್ನಲಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿರುವ ಸಾಧ್ಯತೆ ಎಂದೂ ಹೇಳಲಾಗಿದೆ.

ಎಫ್‌ಐಆರ್‌ ದಾಖಲು : ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಬಾಲಕನ ತಾತ ನೀಡಿದ ದೂರಿನ ಮೇರೆಗೆ ಸದ್ಯ 9 ಯುವಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅನುದಾನ,‌ ಅನುದಾನರಹಿತ ಶಾಲೆಗಳಲ್ಲಿ ಡೊನೇಷನ್ ತಡೆಗೆ ಎಸ್‌ಎಫ್ಐ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಮಾತನಾಡಿ, “ಬಾಲಕ 17 ವರ್ಷದವನಾಗಿದ್ದು, ಅಶ್ಲೀಲ ವಿಡಿಯೋಗಳನ್ನು ನೋಡುವುದು, ಮಹಿಳೆರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ತಿಳಿದುಬಂದಿದೆ. ಅವನ ಸಂಬಂಧಿಕರ ಒಂಟಿ ಮಹಿಳೆಯ ಎದು ಹೋಗಿ ಬಟ್ಟೆಬಿಚ್ಚಿ ನಿಲ್ಲುವು, ಅಶ್ಲೀಲ ವಿಡಿಯೋ ಪ್ಲೇ ಮಾಡುವಂತಹ ಘಟನೆಗಳನ್ನು ಕಂಡ ಸಂಬಂಧಿಕರೇ ಸೇರಿಕೊಂಡು ಮರಕ್ಕೆ ಕಟ್ಟಿ ಹೊಡೆದಿದ್ದಾರೆ” ಎಂದು ಪ್ರತಿಕ್ರಯಿಸಿದರು.

“ಈ ಕುರಿತು ನಮಗೆ ಯಾವುದೇ ದೂರು ಬಂದಿರಲಿಲ್ಲ. ಇದರ ವಿಡಿಯೋ ವೈರಲ್‌ ಆದ ಬಳಿಕ ನಾವು ದೂರು ದಾಖಲಿಸಲೇಬೇಕಾಗುತ್ತದೆ. ಈಗ ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನೂ ಏಳು ಮಂದಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸೆಕ್ಷನ್‌ 188ರಡಿ ಎಫ್‌ಐಆರ್‌ ದಾಖಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...