ದಾವಣಗೆರೆ | ಭ್ರಷ್ಟಾಚಾರ ನಡೆಸಿದರೆ ಸಹಿಸುವ ಪ್ರಶ್ನೆಯೇ ಇಲ್ಲ; ಎಸ್ ಎಸ್ ಮಲ್ಲಿಕಾರ್ಜುನ್ ಎಚ್ಚರಿಕೆ

Date:

Advertisements

ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪರವಾಗಿದ್ದು, ಆಯವ್ಯಯದಲ್ಲಿ ಎಲ್ಲ ಐದು ಯೋಜನೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಯಾವುದೆ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದರು.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಟಾನ ಮಾಡಬೇಕಾಗಿದ್ದು, ವಿಶೇಷವಾಗಿ ಇನ್ನೂ ಹಲವು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ” ಎಂದರು.

“ದಾವಣಗೆರೆ ಜಿಲ್ಲೆ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಅಭಿವೃದ್ಧಿ ಪಥದಲ್ಲಿ ಸದಾ ಮುನ್ನೆಡೆಯುತ್ತಿತ್ತು. ಆದರೆ, ಅಭಿವೃದ್ದಿ ಪಥದಿಂದ ಹಿಮ್ಮುಖವಾಗಿದ್ದು, ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಸುಧಾರಣೆ ಸೇರಿದಂತೆ ವಸತಿ ಸೌಲಭ್ಯ ಮತ್ತು ನೀರಾವರಿ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ದಿ ಪಥದ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಅಧಿಕಾರಿಗಳು ಶ್ರಮವಹಿಸಬೇಕು” ಎಂದು ಸೂಚಿಸಿದರು.

Advertisements

“ಕಳೆದ 5 ವರ್ಷಗಳ ಹಿಂದೆ ಅನೇಕ ಕ್ಷೇತ್ರದಲ್ಲಿ ಜಿಲ್ಲೆ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಮುಂದೆ ಇರುತ್ತಿತ್ತು. ಆಡಳಿತದ ಬದಲಾವಣೆಯಿಂದ ಜಿಲ್ಲೆ ಅಭಿವೃದ್ದಿಯಿಂದ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕಾಗಿದೆ. ಸರ್ಕಾರದ ಮಟ್ಟದಲ್ಲಿ ಜಿಲ್ಲೆಗೆ ಸಂಬಂಧಿಸಿದ ಕೆಲಸಗಳಿದ್ದಲ್ಲಿ ಅದನ್ನು ಬಗೆಹರಿಸಿಕೊಡಲಾಗುತ್ತದೆ” ಎಂದು ಹೇಳಿದರು.

“ಕೊರೊನಾ ಸಂದರ್ಭದಲ್ಲಿ ಜನರ ಜೀವಗಳೊಂದಿಗೆ ಚೆಲ್ಲಾಟವಾಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಆದರೆ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಇಲಾಖೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಬೇಕಾಗಿದೆ. ಜನರಿಗೆ ಆರೋಗ್ಯ ಸುರಕ್ಷತೆಗೆ ನೀಡಲಾಗಿರುವ ಎಬಿಆರ್‌ಕೆ ಕಾರ್ಡ್ ವಿತರಣೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ರೆಫರಲ್ ಸಕಾಲದಲ್ಲಿ ನೀಡಬೇಕು. ಆಂಬುಲೆನ್ಸ್ ಸೇವೆ ಅಗತ್ಯವಿರುವವರಿಗೆ ತುರ್ತಾಗಿ ಸಿಗುವಂತಿರಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಪಕ್ಷ ನಾಯಕ ಆಯ್ಕೆ ವಿಚಾರದಲ್ಲಿ ಸಾಕಷ್ಟು ಮುಜುಗರ ಅನುಭವಿಸಿದ್ದೇವೆ: ಎನ್ ರವಿಕುಮಾರ್‌  

ಸಿ ಜಿ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ದಿನದ 24 ಗಂಟೆ ಕಾರ್ಯನಿರ್ವಹಿಸುವ ಗ್ರಾಮಾಂತರ ಪ್ರದೇಶದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಕರ್ತವ್ಯ ನಿರತರಾಗಿರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X