ದಾವಣಗೆರೆ | ನಗರ ಸಾರಿಗೆಗೂ ವಿದ್ಯುತ್ ಚಾಲಿತ ಬಸ್ ಒದಗಿಸುತ್ತೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Date:

Advertisements

ರಾಜ್ಯದ ಹಲವು ನಗರಗಳಲ್ಲಿರುವ ನಗರ ಸಾರಿಗೆಗೂ ಕೆಎಸ್‌ಆರ್‌ಟಿಸಿಯಿಂದ ವಿದ್ಯುತ್ ಚಾಲಿತ ಬಸ್‌ಗಳನ್ನು ಒದಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ದಾವಣಗೆರೆ ನಗರದಲ್ಲಿ 120 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು. “ಹಲವು ನಗರ ಪ್ರದೇಶದಲ್ಲಿ 10 ರಿಂದ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಬಸ್‌ಗಳನ್ನು ಓಡಿಸುವ ಸಂಬಂಧ ಬೇಡಿಕೆ ಕಳುಹಿಸಲಾಗಿದೆ. ಈ ಹಿಂದೆ 4,000 ಬಸ್‌ಗಳ ಖರೀದಿಗೆ ಟೆಂಡ‌ರ್ ಆಗಿದ್ದು ಇದರೊಂದಿಗೆ ಈಗ 1000 ಬಸ್‌ಗಳ ಖರೀದಿ ಸೇರಿದಂತೆ ಒಟ್ಟು 5,000 ಬಸ್‌ಗಳನ್ನು ಖರೀದಿಸಲಾಗುತ್ತಿದೆ” ಎಂದರು.

“2016 ರಿಂದ ಸುಮಾರು 16 ಸಾವಿರ ಸಿಬ್ಬಂದಿಗಳು ನಿವೃತ್ತರಾಗಿದ್ದಾರೆ. ಅದರೆ, ಈವರೆಗೂ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಸಿಬ್ಬಂದಿಗಳ ಕೊರತೆಯಿಂದ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ಹಂತ ಹಂತವಾಗಿ ಖಾಲಿ ಇರುವ ನಾಲ್ಕು ನಿಗಮಗಳ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.

Advertisements

“ಶಕ್ತಿ ಯೋಜನೆಯಡಿ ಈವರೆಗೂ 43 ಕೋಟಿ ಮಂದಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಪ್ರಯಾಣದ ಮೊತ್ತ 1 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ. ಉಚಿತ ಪ್ರಯಾಣದ ಮೊತ್ತದಲ್ಲಿ ಈಗಾಗಲೇ ನಿಗಮಗಳಿಗೆ ಜೂನ್ ತಿಂಗಳಲ್ಲಿ ಶೇ.80 ರಷ್ಟು ಮತ್ತು ಜುಲೈ ತಿಂಗಳಲ್ಲಿ 280 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಪ್ರಯಾಣದ ಅಂಕಿ ಸಂಖ್ಯೆಯನ್ನು ಪೂರ್ಣವಾಗಿ ನೀಡಿದರೆ ಪೂರ್ಣ ಹಣ ಬಿಡುಗಡೆ ಮಾಡಲಾಗುವುದು” ಎಂದರು.

“ದಾವಣಗೆರೆಯಲ್ಲಿ ಡಿಸೆಂಬರ್‌ ಅಂತ್ಯದ ವೇಳೆಗೆ ಅತ್ಯಾಧುನಿಕವಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಲು ಉದ್ದೇಶಿಸಲಾಗಿದೆ. ಆರೂವರೆ ಎಕರೆ ಜಾಗದಲ್ಲಿ ಬಸ್‌ ನಿಲ್ದಾಣ ನಿರ್ಮಾಣವಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಶೇ.75ರಷ್ಟು ಅನುದಾನ ಮತ್ತು ಕೆಎಸ್‌ಆರ್‌ಟಿಸಿಯಿಂದ ಶೇ.25ರಷ್ಟು ಅನುದಾನದಲ್ಲಿ ನಿಲ್ದಾಣ ನಿರ್ಮಾಣವಾಗುತ್ತಿದೆ. ಈ ಬಸ್‌ ನಿಲ್ದಾಣದಲ್ಲಿ 3 ಮಾಲ್‌ಗಳು, ಹೋಟೆಲ್, ಥಿಯೇಟರ್ ಸೇರಿದಂತೆ ಪ್ರಯಾಣಿಕರಿಗೆ ಅಗತ್ಯವಿರುವ ತಕ್ಷಣದ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗುತ್ತದೆ. ಏಕಕಾಲದಲ್ಲಿ 41 ಬಸ್‌ಗಳು ಹೋಗಲು ಸ್ಥಳಾವಕಾಶ ಕಲಿಸಲಾಗಿದೆ. ಜೊತೆಗೆ ಕಾರ್ ಪಾರ್ಕಿಂಗ್ ವ್ಯವಸ್ಥೆಯು ಇರಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭ್ರಷ್ಟಾಚಾರ; ತನಿಖೆಗೆ ಆಗ್ರಹ

ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಮಾತನಾಡಿ, “ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವು ಎಲ್ಲ ನಾಗರಿಕ ಸೌಲಭ್ಯವನ್ನು ಹೊಂದಲಿದ್ದು, ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳು ಇಲ್ಲಿರಲಿದೆ. ನಗರದಲ್ಲಿ ಟ್ರಕ್ ಟರ್ಮಿನಲ್ ಅಗತ್ಯವಿದ್ದು ಸ್ಥಳದ ಬಗ್ಗೆ ಸಭೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸ್ಥಳಾವಕಾಶ ಕಲ್ಪಿಸಿ ಟರ್ಮಿನಲ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

ಈ ವೇಳೆ ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ, ಕೆಎಸ್‌ಆರ್‌ಟಿಸಿ ಎಂಡಿ ಅನುಕುಮಾರ್, ಸ್ಮಾರ್ಟ್ ಸಿಟಿ ನಿಗಮದ ಎಂಡಿ ವೀರೇಶ್‌ ಕುಮಾರ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X