ದಾವಣಗೆರೆ | ಭದ್ರಾ ನಾಲೆಯ ಕೊನೆಯ ಭಾಗಕ್ಕೆ ದೊರೆಯದ ನೀರು; ರೈತರ ಆಕ್ರೋಶ

Date:

ಭದ್ರಾ ಡ್ಯಾಮ್‌ನಿಂದ ನೆಲೆಗೆ ಹರಿಸುವ ನೀರು, ನಾಲೆಯ ಕೊನೆ ಭಾಗಕ್ಕೆ ತಲುಪುತ್ತಿಲ್ಲ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆಯ ಬೆಳ್ಳಿಗನೂಡು ವಿತರಣೆ ನಾಲೆ ಬಳಿ ರೈತರು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ಮಾತನಾಡಿ, “2ನೇ ನಾಲಾ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಕಂದಗಲ್, ಶಾಗಲೆ, ಹೂವಿನಮಡು, ಮತ್ತಿ, ಗೋಣಿವಾಡ, ಹೊನ್ನಮರಡಿ, ಕುಕ್ಕುವಾಡ, ಕೊಳೇನಹಳ್ಳಿ, ನಾಗರಸನಹಳ್ಳಿ ಭಾಗಕ್ಕೆ ನೀರು ತಲುಪಿಲ್ಲ. ದಾವಣಗೆರೆ ಮತ್ತು ಮಲೆಬೆನ್ನೂರು ವಿಭಾಗಕ್ಕೆ ಹರಿಸಬೇಕಾದ ಪ್ರಮಾಣದಲ್ಲಿ ಮುಖ್ಯ ನಾಲೆಯಲ್ಲಿ 11 ಅಡಿ ಬರುವ ಬದಲು ಕೇವಲ 8 ಅಡಿ ನೀರು ಹರಿಯುತ್ತದೆ. ಇದರಿಂದ ನೀರಾವರಿ ಎಂಜಿನಿಯರ್‌ಗಳಿಗೆ ಕೊನೆ ಭಾಗಕ್ಕೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ” ಎಂದರು.

“12 ದಿನ ನೀರು ಹರಿಸುವುದೆಂಬ ಐಸಿಸಿಯ ತೀರ್ಮಾನ ಅವೈಜ್ಞಾನಿಕವಾಗಿದೆ. ನಾಳೆ ನೀರು ಹರಿಸಿ, 12 ದಿನಗಳಾದವು. ಆದ್ದರಿಂದ ನೀರು ಹರಿಸುವುದನ್ನು ನಿಲ್ಲಿಸಬಾರದು. 20 ದಿನಗಳವರೆಗೆ ಮುಂದುವರೆಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯದ ಭರವಸೆ ; ಉಪವಾಸ ಸತ್ಯಾಗ್ರಹ ಅಂತ್ಯ

ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಕ್ಸಿಕ್ಯುಟೀವ್ ಎಂಜಿನಿಯರ್ ಆರ್ ಬಿ ಮಂಜುನಾಥ ಮಾತನಾಡಿ, “ಮುಖ್ಯ ನಾಲೆಯಲ್ಲಿ ನಿಗದಿತ ಪ್ರಮಾಣದಲ್ಲಿ ನೀರು ಹರಿಸುತ್ತಿಲ್ಲ. ಮುಖ್ಯ ನಾಲೆಯಲ್ಲಿ 11 ಅಡಿ ನೀರು ಹರಿಸಬೇಕು. ಆದರೆ ಕೇವಲ 8 ಅಡಿ ನೀರು ಹರಿಯುತ್ತಿದೆ. 12 ದಿನ ನೀರು ಹರಿಸಬೇಕೆಂಬ ವೇಳಾಪಟ್ಟಿಯಂತೆ ಕೊನೆ ಭಾಗಕ್ಕೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ” ಎಂದು ಅಸಮಾಧಾನಪಟ್ಟರು.

ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...